ಕರಾವಳಿ ಅಪರಾಧ ಸುದ್ದಿಗಳು


Team Udayavani, May 21, 2019, 9:54 AM IST

crime-news-symbolic-750

ಜೈಲಿನಲ್ಲಿ ಅಸ್ವಸ್ಥ: ಅಕ್ರಮ ಮದ್ಯ ಮಾರಾಟ ಆರೋಪಿ ಸಾವು
ಮಂಗಳೂರು: ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿ, ಸುಳ್ಯದ ಅರಂತೋಡು ನಿವಾಸಿ ನಿತ್ಯಾನಂದ (42) ಅಸೌಖ್ಯದಿಂದ ಸೋಮವಾರ ಸಾವನ್ನಪ್ಪಿದ್ದಾನೆ. ಮೇ 13ರಂದು ಅಕ್ರಮ ಮದ್ಯ ಮಾರಾಟ ಪ್ರಕರಣದಲ್ಲಿ ಜೈಲು ಸೇರಿದ್ದ ಆತನಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಆದರೆ ವಿಪರೀತ ಮದ್ಯ ಸೇವಿಸುತ್ತಿದ್ದ ಈತ ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಕಾರಣ ಜೈಲಿನಲ್ಲಿ ಅಸೌಖ್ಯಕ್ಕೀಡಾಗಿದ್ದು, ಮೇ 14ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅರೆಪ್ರಜ್ಞಾ ವಸ್ಥೆಯಲ್ಲಿದ್ದ ಕಾರಣ ಆತನನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ಬೆಳಗ್ಗೆ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ಮಧ್ಯಾಹ್ನ ಮಹಜರು ನಡೆಸಿ ಮೃತದೇಹವನ್ನು ಕುಟುಂಬದವರಿಗೆ ಬಿಟ್ಟು ಕೊಡಲಾಯಿತು.
*

ಬೊಳುವಾರು: ದೇವಳದ ಕಾಣಿಕೆ ಡಬ್ಬಿ ಕಳವು
ಪುತ್ತೂರು: ಇಲ್ಲಿನ ಬೊಳುವಾರು ಶ್ರೀ ದುರ್ಗಾಪರಮೇಶ್ವರಿ(ಉಳ್ಳಾಲ್ತಿ) ಮಲರಾಯ ಸಪರಿವಾರ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕಳವಾಗಿದೆ. ಸೋಮವಾರ ಬೆಳಗ್ಗೆ ಅರ್ಚಕರು ಬಾಗಿಲು ತೆರೆಯುವ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಕಾಣಿಕೆ ಡಬ್ಬಿ ಹಾಗೂ ಕ್ಷೇತ್ರದ ಕಚೇರಿಯ ಪಕ್ಕದ ಟೇಬಲ್‌ನ ಡ್ರಾವರ್‌ ಅನ್ನು ಕದ್ದೊಯ್ಯಲಾಗಿದೆ. ಎದುರಿನ ಬಾಗಿಲಿನ ಚಿಲಕ ಮುಗಿದು ಒಳ ನುಗ್ಗಿದ್ದ ಕಳ್ಳರು ಗರ್ಭಗುಡಿಯ ಬಾಗಿಲು ಮುರಿಯಲು ಯತ್ನಿಸಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಲಾಗಿದೆ.

*
ಅಕ್ರಮ ದನ ಸಾಗಾಟ: ಇಬ್ಬರ ಸೆರೆ
ಹೆಬ್ರಿ: ನಾಯರ್‌ಕೊಡು ಕ್ರಾಸ್‌ ಬಳಿ ಗೂಡ್ಸ್‌ ಟೆಂಪೋ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ತಂಡವನ್ನು ಹೆಬ್ರಿ ಪೊಲೀಸರು ಮೇ 18ರಂದು ಬಂಧಿಸಿದ್ದಾರೆ. ಬಂಧಿ ತ ರಾದ ಸಂದೇಶ, ಜಯಕರ ಅವರು ಯಾವುದೇ ದಾಖಲೆಗಳಿಲ್ಲದೆ 4 ದನಗಳ ಕೈಕಾಲು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದರು ಎಂದು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೆಂದೂರುಕಟ್ಟೆ: ಬೆಂಕಿ ಆಕಸ್ಮಿಕ
ಉಡುಪಿ : ದೆಂದೂರುಕಟ್ಟೆಯಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿತು. ಉಡುಪಿ ಅಗ್ನಿಶಾಮಕ ದಳದವರು ಬೆಂಕಿ ನಿಯಂತ್ರಿಸಿದರು. ಪಕ್ಕದ ಮನೆಗಳಿಗೆ ವ್ಯಾಪಿಸುವುದನ್ನು ತಪ್ಪಿಸಿದರು.

ಕಟ್ಟಡದ ಮೆಟ್ಟಿಲಿನಿಂದ ಬಿದ್ದು ಸಾವು
ಕಾರ್ಕಳ: ಪೇಟೆಯ ಮಾರ್ಕೆಟ್‌ ವಠಾರದ ಬಳಿ ಪುರಸಭೆ ಕಟ್ಟಡವೊಂದರ ಮೆಟ್ಟಿಲಿನಿಂದ ಬಿದ್ದು ಮಿಯ್ನಾರು ಗ್ರಾಮದ ಬೆರ್ಕೆಮನೆ ವಲೇರಿಯನ್‌ ಡಿ’ಸೋಜಾ (51) ಅವರು ಮೃತಪಟ್ಟ ಘಟನೆ ರವಿವಾರ ನಡೆದಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.