Udayavni Special

ಡಿ.ಸಿ. ಮನ್ನಾ  ಭೂಮಿ ಹಂಚಿಕೆ; ಆ. 15ರೊಳಗೆ ಕ್ರಮ


Team Udayavani, Aug 9, 2018, 12:19 PM IST

9-agust-7.jpg

ಮಹಾನಗರ: ಡಿ.ಸಿ. ಮನ್ನಾ ಭೂಮಿ ಹಂಚಿಕೆ ಬಗ್ಗೆ ಮಂಗಳೂರು ತಾಲೂಕಿನಲ್ಲಿ ಗ್ರಾಮ ಕರಣಿಕರ ಮೂಲಕ ಸಮೀಕ್ಷೆ ನಡೆಸಿ ಗ್ರಾಮವಾರು ಜಮೀನುಗಳ ವಿವರ ಸಂಗ್ರಹಿಸಲಾಗಿದೆ. ಇದನ್ನು ಅರ್ಹ ಫಲಾನುಭವಿಗಳಿಗೆ ಮಂಜೂರು ಮಾಡುವ ಕುರಿತಂತೆ ಆಗಸ್ಟ್‌ 15ರೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ತಾಲೂಕು ಪ್ರೊಬೆಷನರಿ ಸಹಾಯಕ ಆಯುಕ್ತ ಡಾ| ಸಂತೋಷ್‌ ಕುಮಾರ್‌ ತಿಳಿಸಿದರು. ನಗರದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಬುಧವಾರ ನಡೆದ ಮಂಗಳೂರು ತಾ| ಮಟ್ಟದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಮಿತಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 104.82.20 ಎಕ್ರೆ ಡಿ.ಸಿ. ಮನ್ನಾ ಜಮೀನು ಅತಿಕ್ರಮಣವಾಗಿದ್ದು, 23.76.71 ಎಕ್ರೆ ಸಕ್ರಮ (ಅತಿಕ್ರಮಣ ಮುಕ್ತ) ಜಮೀನು ಲಭ್ಯವಿದೆ. ಸಕ್ರಮ ಜಮೀನು ಮಂಜೂರಾತಿ ಕೋರಿ ಈ ವರೆಗೆ 4,059 ಅರ್ಜಿಗಳು ಸ್ವೀಕೃತವಾಗಿವೆ. ಇವುಗಳನ್ನು ಹೋಬಳಿವಾರು ಪರಿಶೀಲಿಸಿ ಕಂದಾಯ ನಿರೀಕ್ಷಕರಿಗೆ ತನಿಖೆಗಾಗಿ ಕಳುಹಿಸಿಕೊಡಲಾಗಿದೆ. ಕೂಲಂಕಷವಾಗಿ ಪರಿಶೀಲಿಸಿ ಭೂಮಿ ಇಲ್ಲದವರಿಗೆ ನಿಯಮಾನುಸಾರ ಮಂಜೂರು ಮಾಡಲು ಕ್ರಮ
ಜರಗಿಸಲಾಗುವುದು ಎಂದರು.

ಡಿ.ಸಿ. ಮನ್ನಾ ಜಮೀನು ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿ ವರ್ಷ ಕಳೆದರೂ ತೀರ್ಮಾನ ಆಗಿಲ್ಲ. ಈ ಬಗ್ಗೆ ಸಂಬಂಧಪಟ್ಟವ ರಲ್ಲಿ ವಿಚಾರಿಸಿದರೆ ಸಮರ್ಪಕ ಉತ್ತರ ನೀಡುತ್ತಿಲ್ಲ. ಕೆಲವು ಅಧಿಕಾರಿ/ ಸಿಬಂದಿ ಉಡಾಫೆಯಿಂದ ವರ್ತಿಸುತ್ತಾರೆ. ಮುಂದೆ ಸ್ಥಳೀಯ ಆಡಳಿತ, ಬಳಿಕ ಲೋಕಸಭಾ ಚುನಾವಣೆ ನಡೆಯಲಿರುವುದರಿಂದ ನೀತಿ ಸಂಹಿತೆ ಜಾರಿಗೆ ಬಂದಾಗ ಯಾವುದೇ ಕಾರ್ಯ ಸಾಗದು. ಆದ್ದರಿಂದ ಡಿಸಿ ಮನ್ನಾ ಭೂಮಿ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಬೇಕು. ಹೋಬಳಿ ಮಟ್ಟದ ಸಮಿತಿ ರಚಿಸುವಾಗ ಸ್ಥಳೀಯ ದಲಿತ ಮುಖಂಡರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಸಂಘಟನೆಗಳ ಮುಖಂಡರು ಒತ್ತಾಯಿಸಿದರು. 

ಪ್ರತಿಕ್ರಿಯಿಸಿದ ಪ್ರೊಬೆಷನರಿ ಸಹಾಯಕ ಆಯುಕ್ತರು, ಇದೇ ಆಗಸ್ಟ್‌ 15ರೊಳಗೆ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಸಮಿತಿಗೆ ದಲಿತ ಮುಖಂಡರನ್ನು ನೇಮಿಸುವ ವಿಚಾರ ಜಿಲ್ಲಾಧಿಕಾರಿಗಳ ಪರಿಶೀಲನೆಯಲ್ಲಿದೆ. ಭೂಮಿ ಮಂಜೂರು ಮಾಡುವಾಗ ಆಯಾ ಗ್ರಾಮದ ನಿವಾಸಿಗಳಿಗೆ ಆದ್ಯತೆ ನೀಡಲಾಗುವುದು ಎಂದರು.

ಕ್ರಿಮಿನಲ್‌ ಮೊಕದ್ದಮೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಮಾಡಿಸಿಕೊಂಡು  ಲಭ್ಯಗಳನ್ನು ಪಡೆಯುವುದು ಸಾಬೀತಾದಲ್ಲಿ ಅಂಥವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಅವಕಾಶವಿದೆ ಎಂದು ಪ್ರಕರಣವೊಂದನ್ನು ಉಲ್ಲೇಖೀಸುತ್ತಾ ಡಾ| ಸಂತೋಷ್‌ ಕುಮಾರ್‌ ವಿವರಿಸಿದರು. ನಗರದಲ್ಲಿ ಬೋವಿ ಜನಾಂಗದ ಕೆಲವರು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ. ಆಂಧ್ರ ಮೂಲದ ಶಿವನಾಥನ್‌ ಅವರಿಗೆ 2014, 2017ರಲ್ಲಿ ಬೋವಿ ಜನಾಂಗದ ಜಾತಿ ಪ್ರಮಾಣ ಪತ್ರ ನೀಡಲಾಗಿರುವ ದಲಿತ ನಾಯಕ ಅಶೋಕ್‌ ಕೊಂಚಾಡಿ ಅವರು ಈ ಹಿಂದಿನ ಸಭೆಯಲ್ಲಿ ದೂರು ನೀಡಿದ್ದರ ಕುರಿತಂತೆ ಚರ್ಚೆ ನಡೆಯಿತು.

ಶಿವನಾಥನ್‌ ಮಂಗಳೂರಿಗೆ ಬಂದು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವುದಲ್ಲದೆ, ಸರಕಾರಿ ಇಲಾಖೆಗಳಿಂದ ಹಲವು ರೀತಿಯ ಸೌಲಭ್ಯಗಳನ್ನು ಪಡೆಯಲು ಯತ್ನಿಸಿದ್ದಾರೆ ಎಂದು ಇಂದು ಸಭೆಯಲ್ಲಿ ದಲಿತ ನಾಯಕರು ಆರೋಪಿಸಿದರು. ಈ ಬಗ್ಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ವಿಚಾರಣೆ ನಡೆದಿದ್ದು, ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವುದಾಗಿ ಸಾಬೀತಾಗಿದೆ. ಆದ್ದರಿಂದ ಸ್ಥಳೀಯ ಡಿಸಿಪಿಗೆ ಪತ್ರ ಬರೆದು ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಡಾ| ಸಂತೋಷ್‌ ಕುಮಾರ್‌ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಅಂಬೇಡ್ಕರ್‌ ವೃತ್ತ: ಮನಪಾ ನಿರ್ಲಕ್ಷ್ಯ
ನಗರದಲ್ಲಿ ಅಂಬೇಡ್ಕರ್‌ ವೃತ್ತ ನಿರ್ಮಾಣಕ್ಕೆ 94 ಲಕ್ಷ ರೂ.ಗಳ ಟೆಂಡರ್‌ ಆಗಿದೆ ಎಂದು ಹೇಳಲಾಗುತ್ತಿದೆ. ಆದರೆ ವೃತ್ತ ಮಾತ್ರ ನಿರ್ಮಾಣವಾಗುತ್ತಿಲ್ಲ. ಈ ಬಗ್ಗೆ ಪಾಲಿಕೆ ನಿರ್ಲಕ್ಷ್ಯ ವಹಿಸುತ್ತಿದೆ ಎಂಬ ಆರೋಪ ವ್ಯಕ್ತವಾಯಿತು. ಮಹಾಕಾಳಿಪಡ್ಪು ಬಳಿ ಪೌರ ಕಾರ್ಮಿಕರ ವಸತಿ ಗೃಹ ಸಮುಚ್ಛಯ ನಿರ್ಮಾಣ ಕಾಮಗಾರಿ ನಿಧಾನ ಗತಿಯಲ್ಲಿ ಸಾಗುತ್ತಿದೆ ಎಂಬ ಆರೋಪದ ಜತೆಗೆ, ಇಲ್ಲಿ ದ್ವಿಚಕ್ರ ವಾಹನಕ್ಕೆ ಪಾರ್ಕಿಂಗ್‌ ಸೌಲಭ್ಯ, ವಸತಿ ಸಮುಚ್ಛಯಕ್ಕೆ ಆವರಣ ಗೋಡೆ ನಿರ್ಮಿಸಿ ಭದ್ರತೆ ಒದಗಿಸುವಂತೆ ದಲಿತ ನಾಯಕರು ಒತ್ತಾಯಿಸಿದರು.

ಪ್ರೋತ್ಸಾಹ ಧನ: ಮಾಹಿತಿ ನೀಡಿ
ದೇವದಾಸ್‌ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯಿಂದ ದಲಿತ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನದ ಕುರಿತಂತೆ ಸೂಕ್ತ ಮಾಹಿತಿ ಒದಗಿಸಬೇಕು. ದಲಿತರು ಉಪ ಜಾತಿಯೊಳಗೆ ವಿವಾಹವಾದಲ್ಲಿ 2 ಲಕ್ಷ ರೂ. ಪ್ರೋತ್ಸಾಹಧನವನ್ನು ಸರಕಾರ ಪ್ರಸಕ್ತ ಸಾಲಿನಿಂದ ಆರಂಭಿಸಿದೆ. ವಿಧವೆಯರ ಮರು ವಿವಾಹಕ್ಕೆ 3 ಲಕ್ಷ ರೂ., ಸರಳ ರೀತಿಯಲ್ಲಿ ವಿವಾಹ ಆಗುವವರಿಗೆ ಪ್ರೋತ್ಸಾಹ ಧನವನ್ನು ಸರಕಾರದಿಂದ ನೀಡಲಾಗುತ್ತಿದೆ. ಈ ಬಗ್ಗೆ ಪ್ರಚಾರದ ಕೊರತೆ ಇದೆ ಎಂದರು. 

ಜನನ- ಮರಣ ಪ್ರಮಾಣ ಪತ್ರ ವಿಳಂಬ
ತಾಲೂಕು ಕಚೇರಿಯಲ್ಲಿ ಜನನ, ಮರಣ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬವಾಗುತ್ತಿದೆ. ಮರಣ ಪ್ರಮಾಣ ಪತ್ರ ಪಡೆಯಲು ಒಂದೆರಡು ವರ್ಷ ಅಲೆದಾಡುವ ಪರಿಸ್ಥಿತಿ ಇದೆ ಎಂದು ದಲಿತ ನಾಯಕರೊಬ್ಬರು ನಿರ್ದಿಷ್ಟ ಪ್ರಕರಣಗಳನ್ನು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಾ| ಸಂತೋಷ್‌ ಕುಮಾರ್‌, ಮರಣ ಅಥವಾ ಜನನ ಪ್ರಮಾಣ ಪತ್ರ 21 ದಿನಗಳ ಒಳಗಾಗಿ ನೀಡಬೇಕಿದೆ. ಆಡಳಿತ ವ್ಯವಸ್ಥೆಯಲ್ಲಿ ತೊಂದರೆ ಆಗಿರುವ ತೊಂದರೆ ಬಗ್ಗೆ ವಿಷಾದಿಸುವುದಾಗಿ ಹೇಳಿದರಲ್ಲದೆ, ನಿಗದಿತ ಅವಧಿಯೊಳಗೆ ಮರಣ, ಜನನ ಪ್ರಮಾಣ ಪತ್ರ ಒದಗಿಸಲು ಸಿಬಂದಿಗೆ ನಿರ್ದೇಶನ ಒದಗಿಸುವುದಾಗಿ ಭರವಸೆ ನೀಡಿದರು. 

ರದ್ಧತಿಗೆ ಒತ್ತಾಯ
ಕಾರ್ನಾ ಡಿನ ಅಮೃತಮಯಿ ನಗರದಲ್ಲಿ 18 ವರ್ಷಗಳ ಹಿಂದೆ 76 ಮನೆಗಳಿಗೆ ಹಕ್ಕು ಪತ್ರ ನೀಡಲಾಗಿದೆ. ಈಗ ಅಲ್ಲಿ ಹಕ್ಕುಪತ್ರ ಪಡೆದಿರುವ 134 ಕುಟುಂಬಗಳಿದ್ದು, ಇದರಲ್ಲಿ ಕೆಲವರು ಎರಡೆರಡು ಹಕ್ಕುಪತ್ರ ಪಡೆದಿದ್ದಾರೆ. ಈ ಬಗ್ಗೆ 5 ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಪರಿಶೀಲಿಸಿ ಅವುಗಳನ್ನು ರದ್ದುಪಡಿಸಿ, ಅರ್ಹರಿಗೆ ಒದಗಿಸಬೇಕು ಎಂದು ಆನಂದ್‌ ಒತ್ತಾಯಿಸಿದರು.

ತತ್‌ಕ್ಷಣ ಪರ್ಯಾಯ ವ್ಯವಸ್ಥೆ
ಬಿಕರ್ನಕಟ್ಟೆಯಲ್ಲಿ 60 ವರ್ಷಗಳಿಂದ ಪರಿಶಿಷ್ಟ ಪಂಗಡದ ಎರಡು ಕುಟುಂಬಗಳು ಯಾವುದೇ ಸೌಲಭ್ಯ ಇಲ್ಲದೆ ವಾಸಿಸುತ್ತಿರುವ ಬಗ್ಗೆ ಮಾಧ್ಯಮಗಳು ಗಮನ ಸೆಳೆದಿದ್ದವು. ಆದರೆ ಅವರಿಗೆ ಪರ್ಯಾಯ ವ್ಯವಸ್ಥೆ ಆಗಿಲ್ಲ ಎಂದು ರಘು ಎಕ್ಕಾರು ಹೇಳಿದರು. ಆ ಕುಟುಂಬಗಳಿಗೆ ಬಂದರು, ಕುಲಶೇಖರದಲ್ಲಿ ಪರ್ಯಾಯ ವ್ಯವಸ್ಥೆಗೆ ಕ್ರಮ ವಹಿಸಲಾಗಿದೆ. ಆದರೆ ಕುಟುಂಬಗಳು ಆ ಬಗ್ಗೆ ಆಸಕ್ತಿ ತೋರಿಸಿಲ್ಲ. ನಾಯಕರು ಅವರ ಮನವೊಲಿಸುವ ಪ್ರಯತ್ನ ಮಾಡಿದ್ದಲ್ಲಿ, ತತ್‌ಕ್ಷಣವೇ ಅವರನ್ನು ಸ್ಥಳಾಂತರಿಸಲಾಗುವುದು ಎಂದು ಡಾ| ಸಂತೋಷ್‌ ಕುಮಾರ್‌ ತಿಳಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕಾಲೇಜು ಆರಂಭಕ್ಕೆ ದಿನಾಂಕ ನಿಗದಿ: ಮಾರ್ಗಸೂಚಿ ಪ್ರಕಟಿಸಿದ ಯುಜಿಸಿ

ಕಾಲೇಜು ಆರಂಭಕ್ಕೆ ದಿನಾಂಕ ನಿಗದಿ: ಮಾರ್ಗಸೂಚಿ ಪ್ರಕಟಿಸಿದ ಯುಜಿಸಿ

ಮಂಗಳೂರು: ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ

ಮಂಗಳೂರು: ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ

ಕೋವಿಡ್ 19 ಸೋಂಕು: ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ನಟಿ ಆಶಾಲತಾ ವಿಧಿವಶ

ಕೋವಿಡ್ 19 ಸೋಂಕು: ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ನಟಿ ಆಶಾಲತಾ ವಿಧಿವಶ

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬಿ.ಸಿ. ಪಾಟೀಲ್

ಕೃಷಿ ಕಾಯ್ದೆಯಿಂದ ರೈತರಿಗೆ ಸ್ವಾತಂತ್ರ್ಯ ಸಿಕ್ಕಿದ ಹಾಗಾಗಿದೆ: ಸಚಿವ ಬಿ.ಸಿ. ಪಾಟೀಲ್

ಪಶ್ಚಿಮ ಬಂಗಾಳಕ್ಕೆ ಹೆಚ್ಚು ಅಲ್‌ಖೈದಾ ನಂಟು: ಎನ್‌ಐಎ

ಪಶ್ಚಿಮ ಬಂಗಾಳಕ್ಕೆ ಹೆಚ್ಚು ಅಲ್‌ಖೈದಾ ನಂಟು: ಎನ್‌ಐಎ

ಡ್ರಗ್ ನಶೆಯಲ್ಲಿ ತೇಲುತ್ತಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ ಕಿಶೋರ್ ಶೆಟ್ಟಿ ಸ್ನೇಹಿತೆ!

ಡ್ರಗ್ ನಶೆಯಲ್ಲಿ ತೇಲುತ್ತಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ ಕಿಶೋರ್ ಶೆಟ್ಟಿ ಸ್ನೇಹಿತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

udayavani youtube

Manipal: Multi-storey building in danger | inspection by DC Jagadeesh

udayavani youtube

ಗೇರು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಪ್ರವಾಹದಲ್ಲಿ ಡೋಣಿ ನದಿ ದಾಟಲು ಮುಂದಾದ ವ್ಯಕ್ತಿಯ ಹುಚ್ಚು ಸಾಹಸಹೊಸ ಸೇರ್ಪಡೆ

ಶಾಸಕಿಗೆ ಧರಣಿ ಅರ್ಥ ತಿಳಿದಿಲ್ಲ

ಶಾಸಕಿಗೆ ಧರಣಿ ಅರ್ಥ ತಿಳಿದಿಲ್ಲ

ಕಾಲೇಜು ಆರಂಭಕ್ಕೆ ದಿನಾಂಕ ನಿಗದಿ: ಮಾರ್ಗಸೂಚಿ ಪ್ರಕಟಿಸಿದ ಯುಜಿಸಿ

ಕಾಲೇಜು ಆರಂಭಕ್ಕೆ ದಿನಾಂಕ ನಿಗದಿ: ಮಾರ್ಗಸೂಚಿ ಪ್ರಕಟಿಸಿದ ಯುಜಿಸಿ

ಇ-ಲೋಕ್‌ ಅದಾಲತ್‌ನಲ್ಲಿ 106 ಪ್ರಕರಣ ಇತ್ಯರ್ಥ

ಇ-ಲೋಕ್‌ ಅದಾಲತ್‌ನಲ್ಲಿ 106 ಪ್ರಕರಣ ಇತ್ಯರ್ಥ

ಜಾಂಬ್ರಿ ಗುಹೆ ಸಂಪರ್ಕ ರಸ್ತೆಯ ದುಃಸ್ಥಿತಿ: ಪಂ. ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

ಜಾಂಬ್ರಿ ಗುಹೆ ಸಂಪರ್ಕ ರಸ್ತೆಯ ದುಃಸ್ಥಿತಿ: ಪಂ. ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

ಚಿಕ್ಕಬಳ್ಳಾಪುರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರಪ್ರದೇಶದ ಇಬ್ಬರ ಬಂಧನ

ಚಿಕ್ಕಬಳ್ಳಾಪುರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರಪ್ರದೇಶದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.