ಪತ್ರಕರ್ತರಿಗೆ ಸಾಮಾಜಿಕ ಭದ್ರತೆ ಹೆಚ್ಚಿಸಲು ಸಿಎಂ ಜತೆ ಚರ್ಚೆ: ಡಾ| ಅಶ್ವತ್ಥ ನಾರಾಯಣ

ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ: ಮಾಧ್ಯಮ ಕ್ಷೇತ್ರಕ್ಕೆ ತಂತ್ರಜ್ಞಾನಗಳ ನೆರವಿಗೆ ಕ್ರಮ

Team Udayavani, Mar 8, 2020, 7:10 AM IST

ಪತ್ರಕರ್ತರಿಗೆ ಸಾಮಾಜಿಕ ಭದ್ರತೆ ಹೆಚ್ಚಿಸಲು ಸಿಎಂ ಜತೆ ಚರ್ಚೆ: ಡಾ| ಅಶ್ವತ್ಥ ನಾರಾಯಣ

ಮಂಗಳೂರು: ಅನೇಕ ಸವಾಲುಗಳು ಮತ್ತು ಸಮಸ್ಯೆಗಳ ನಡುವೆ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ಸಾಮಾಜಿಕ ಭದ್ರತಾ ಕ್ರಮಗಳ ಅವಶ್ಯವಿದ್ದು ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಜತೆ ಚರ್ಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ| ಅಶ್ವತ್ಥ ನಾರಾಯಣ ಹೇಳಿದರು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಹಾಗೂ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಹಯೋಗದಲ್ಲಿ ಮಂಗಳೂರಿನ ಕುದು¾ಲ್‌ ರಂಗರಾವ್‌ ಪುರಭವನದಲ್ಲಿ ದಿ| ವಡ್ಡರ್ಸೆ ರಘರಾಮ ಶೆಟ್ಟಿ ವೇದಿಕೆಯಲ್ಲಿ ಆಯೋಜಿಸಿರುವ ಎರಡು ದಿನಗಳ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು ಯಡಿಯೂರಪ್ಪ ಅವರು ಪತ್ರಕರ್ತರ ಸಾಮಾಜಿಕ ಭದ್ರತೆಯ ನಿಟ್ಟಿನಲ್ಲಿ ಒಂದಷ್ಟು ಕ್ರಮಗಳನ್ನು ಕೈಗೊಂಡಿದ್ದಾರೆ. ಇದನ್ನು ಇನ್ನಷ್ಟು ಹೆಚ್ಚಿಸಲು ಪ್ರಯತ್ನಗಳನ್ನು ಮಾಡಲಾಗುವುದು ಎಂದರು. ಇದರ ಜತೆಗೆ ಮಾಧ್ಯಮ ಕ್ಷೇತ್ರಕ್ಕೆ ತಂತ್ರಜ್ಞಾನಗಳ ನೆರವು ನೀಡುವ ನಿಟ್ಟಿನಲ್ಲೂ ಕ್ರಮವಹಿಸಲಾಗುವುದು ಎಂದರು.

ಪತ್ರಕರ್ತರು ರಾಜಕೀಯ ಚರ್ಚೆಗಳಿಗೆ ಹೆಚ್ಚು ಆದ್ಯತೆ ನೀಡುವ ಬದಲು ಆಡಳಿತ ವ್ಯವಸ್ಥೆಯಿಂದ ಜನರ ನಿರೀಕ್ಷೆಗಳು ಮತ್ತು ಆ ನಿಟ್ಟಿನಲ್ಲಿ ಆಗಬೇಕಾಗಿರುವ ಅವಶ್ಯ ಕ್ರಮಗಳ ಬಗ್ಗೆ ಗಮನ ಹರಿಸಿದಾಗ ಜನಪರ ವ್ಯವಸ್ಥೆ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದವರು ಅಭಿಪ್ರಾಯಪಟ್ಟರು.

ಸದ್ವಿಚಾರಗಳಿಗೆ ಆದ್ಯತೆ: ಡಾ| ಹೆಗ್ಗಡೆ
ಸಮಾವೇಶದ ಸಾನಿಧ್ಯ ವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಇಂದು ಓದುಗರು ಪತ್ರಿಕೆಗಳನ್ನು ಓದುವ ಜತೆಗೆ ವಿಷಯಗಳ ಸೂಕ್ಷ್ಮತೆಗಳನ್ನು ಅರಿತು ವಿಮರ್ಶಿಸುವ ಪ್ರಜ್ಞಾವಂತಿಕೆಯನ್ನು ಬೆಳೆಸಿಕೊಂಡಿದ್ದಾರೆ. ಮಾಧ್ಯಮಗಳು ಗೋವಿನಂತಾಗಬೇಕು. ಗೋವು ತಾನು ಏನು ಸೇವಿಸಿದರೂ ನಮಗೆ ಶುದ್ಧ ಹಾಲು ನೀಡುತ್ತದೆ. ಅದೇ ರೀತಿ ಮಾಧ್ಯಮಗಳು ಕೂಡಾ ಸದ್ವಿಚಾರಗಳಿಗೆ ಆದ್ಯತೆ ನೀಡಬೇಕು. ಏನೇ ವಿಷಯಗಳಿದ್ದರೂ ಅದನ್ನು ಪರಾಮರ್ಶಿಸಿ ಒಳ್ಳೆಯ ವಿಚಾರಗಳನ್ನು ಮಾತ್ರ ಸಮಾಜಕ್ಕೆ ನೀಡಬೇಕು.ಮಾಧ್ಯಮದ ವರದಿಗಳು ಸಮಾಜದಲ್ಲಿ ಸಾಮರಸ್ಯ ಹಾಗೂ ಸಹಬಾಳ್ವೆಗೆ ಪೂರಕವಾಗಿರಲಿ ಎಂದರು.

ಈ ಸಮ್ಮೇಳನ ಮಾಧ್ಯಮ ಕ್ಷೇತ್ರವನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಹೊರಹೊಮ್ಮಲಿ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾರೈಸಿದರು.

ಶಾಸಕರಾದ ಡಿ.ವೇದವ್ಯಾಸ ಕಾಮತ್‌, ಡಾ| ವೈ. ಭರತ್‌ ಶೆಟ್ಟಿ, ಯು.ಟಿ.ಖಾದರ್‌, ವಿಧಾನಪರಿಷತ್‌ ಸದಸ್ಯ ಕೆ.ಹರೀಶ್‌ ಕುಮಾರ್‌, ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌.ರಾಜೇಂದ್ರ ಕುಮಾರ್‌, ಮೇಯರ್‌ ದಿವಾಕರ ಪಾಂಡೇಶ್ವರ, ಉಪಮೇಯರ್‌ ವೇದಾವತಿ, ಜಿ. ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಅದಾನಿ ಗ್ರೂಪ್‌ನ ಕರ್ನಾಟಕ ಮುಖ್ಯಸ್ಥ ಕಿಶೋರ್‌ ಆಳ್ವ ಮುಖ್ಯ ಅತಿಥಿಗಳಾಗಿದ್ದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಸಮ್ಮಾನಿಸಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು.

ಭಾರತೀಯ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಸಂಗೀತ ನಿರ್ದೇಶಕ ಗುರುಕಿರಣ್‌, ಏಷ್ಯಾ ಒಕ್ಕೂಟದ ಸಂಚಾಲಕ ಎಚ್‌. ಬಿ.ಮದನಗೌಡ, ಕರ್ನಾಟಕ ಸಂಘದ ಪ್ರ. ಕಾರ್ಯದರ್ಶಿ ಜಿ.ಸಿ.ಲೋಕೇಶ್‌, ದ.ಕ.ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ, ಪ್ರ. ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪ್ರಸ್‌ ಕ್ಲಬ್‌ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್‌ ಅಧ್ಯಕ್ಷ ಆನಂದ ಶೆಟ್ಟಿ, ಸಮ್ಮೇಳನ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ ನಿರೂಪಿಸಿದರು. ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್‌ ವಂದಿಸಿದರು.

ಸಂದಿಗ್ಧ ಸ್ಥಿತಿಯಲ್ಲಿ ಪತ್ರಿಕಾ ಕ್ಷೇತ್ರ: ಸಂಧ್ಯಾ ಪೈ
ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಸಮ್ಮೇಳನದ ಆಶಯ ಭಾಷಣ ಮಾಡಿದ ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಸಂಧ್ಯಾ ಎಸ್‌. ಪೈ ಅವರು ಪ್ರಸ್ತುತ ಪತ್ರಿಕಾ ಕ್ಷೇತ್ರ ಸಂದಿಗ್ಧ ಸ್ಥಿತಿಯಲ್ಲಿದೆ. ಇನ್ನೂ ಕೆಲವೇ ವರ್ಷಗಳಲ್ಲಿ ವಾರಪತ್ರಿಕೆ, ಮಾಸಪತ್ರಿಕೆ ಹಾಗೂ ದೈನಿಕಗಳು ಮಾಧ್ಯಮ ಕ್ಷೇತ್ರದಲ್ಲಿ ಕಣ್ಮರೆಯಾಗಲಿವೆ ಎಂಬುದಾಗಿ ಸಮೀಕ್ಷೆಗಳು ಹೇಳುತ್ತಿವೆ. ಈ ಕಾಲಘಟ್ಟದಲ್ಲಿ ಈ ಸಂದಿಗ್ಧ ಸ್ಥಿತಿಯಿಂದ ಮೇಲೆದ್ದು ಬರುವ ನಿಟ್ಟಿನಲ್ಲಿ ಪೂರಕ ಕ್ರಮಗಳನ್ನು ಕಂಡುಕೊಳ್ಳಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಮಾಧ್ಯಮಗಳ ನಡುವೆ ಸ್ಪರ್ಧೆ ಇರಲಿ. ಆದರೆ ಶತ್ರುತ್ವ ಇರಬಾರದು. ಶತ್ರುತ್ವ ಯಾವತ್ತೂ ಧನಾತ್ಮಕ ಫಲಿತಾಂಶ ತರುವುದಿಲ್ಲ ಎಂದವರು ಹೇಳಿದರು.

ಅತ್ಯುತ್ತಮ ಘಟಕ ಪ್ರಶಸ್ತಿ
ಬ್ರಾÂಂಡ್‌ ಮಂಗಳೂರು, ಪತ್ರಕರ್ತರ ಗ್ರಾಮ ವಾಸ್ತವ್ಯ ಸೇರಿದಂತೆ ವಿವಿಧ ಸಮಾಜಮುಖೀ ಕೆಲಸಗಳಲ್ಲಿ ತೊಡಗಿಸಿ ಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅತ್ಯುತ್ತಮ ಜಿಲ್ಲಾ ಘಟಕ ಪ್ರಶಸ್ತಿ ನೀಡಲಾಗಿದೆ. ಡಿಸಿಎಂ ಡಾ| ಸಿ.ಎನ್‌.ಅಶ್ವತ್ಥನಾರಾಯಣ ಪ್ರಶಸಿ ¤ ಪ್ರದಾನ ಮಾಡಿದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.