ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ; ಅಪಾಯಕಾರಿ ಕಟ್ಟಡಗಳ ತೆರವಿಗೆ ಸೂಚನೆ
Team Udayavani, Aug 7, 2020, 12:18 PM IST
ಮಂಗಳೂರು: ಜಿಲ್ಲೆಯಲ್ಲಿ ಮಳೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಅಪಾಯಕಾರಿ ಮನೆ, ತಡೆಗೋಡೆ, ಕಟ್ಟಡ, ವಿದ್ಯುತ್ ಕಂಬಗಳನ್ನು ಗುರುತಿಸಿ ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗುಡ್ಡವನ್ನು ಅವೈಜ್ಞಾನಿಕವಾಗಿ ಕಡಿದು ಕಟ್ಟಡ ನಿರ್ಮಿಸುವ ಪ್ರವೃತ್ತಿ ಜಿಲ್ಲೆಯಲ್ಲಿ ಹೆಚ್ಚುತ್ತಿದೆ. ಅಪಾಯಕಾರಿ ಜಾಗಗಳಲ್ಲಿ ಯಾವುದೇ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡ ಬಾರದು. ಪರಿಹಾರ ಕಾರ್ಯಾಚರಣೆ ಯಲ್ಲಿ ಯಾವುದೇ ವಿಳಂಬವನ್ನು ಸಹಿಸಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದರು.
ಕಾಮಗಾರಿ ಪೂರ್ಣಗೊಳಿಸಿ
ಕಳೆದ ವರ್ಷ ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ಸಿಕ್ಕಿದರೂ ಇನ್ನೂ ಮನೆ ಪೂರ್ತಿಯಾಗಿಲ್ಲ. ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಫಲಾನುಭಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಯವರು, ಪರಿಹಾರ ಮೊತ್ತವನ್ನು ಸಕಾಲದಲ್ಲಿ ವಿತರಿಸುವಂತೆ ತಿಳಿಸಿದರು.
ರೋಗಗಳ ನಿಯಂತ್ರಣಕ್ಕೆ ಕ್ರಮ
ಮಳೆಗಾಲದಲ್ಲಿ ಡೆಂಗ್ಯೂ, ಚಿಕೂನ್‌ಗುನ್ಯಾ, ಇಲಿಜ್ವರದಂತಹ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಕಂಡುಬರುತ್ತಿವೆ. ಕೋವಿಡ್ ಜತೆಗೆ ಇತರ ಕಾಯಿಲೆಗಳ ನಿಯಂತ್ರಣಕ್ಕೂ ಆದ್ಯತೆ ನೀಡಬೇಕು ಎಂದು ಆರೋಗ್ಯ ಇಲಾಖೆಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಕರಿಕಲನ್, ಡಿಸಿಪಿ ಅರುಣಾಂಶುಗಿರಿ, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ