ಗೆಲುವ ಗುರಿಯೊಂದಿಗೆ ಸ್ಪರ್ಧಿಸಿ: ಶಾಸಕ ಕೋಟ್ಯಾನ್‌

Team Udayavani, Dec 6, 2018, 12:00 PM IST

6-december-7.gif

ಮಂಗಳೂರು: ಸ್ಪರ್ಧೆ ಇನ್ನೊಬ್ಬರ ಪೈಪೋಟಿ ಆಗಿರಬಾರದು. ಅದರ ಬದಲಾಗಿ ನಾವು ಗೆಲ್ಲುವ ಗುರಿಯೊಂದಿಗೆ ಸ್ಪರ್ಧಿಸಿ ಎಂದು ಶಾಸಕ ಉಮಾನಾಥ ಕೋಟ್ಯಾನ್‌ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ರಾಜ್ಯ ಸರಕಾರಿ ನೌಕರರ ಸಂಘ ಆಶ್ರಯದಲ್ಲಿ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ-ಸಾಂಸ್ಕೃತಿಕ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರಿ ನೌಕರರು ತಮ್ಮ ಕೆಲಸದಲ್ಲಿ ತೊಡಗಿದ ಬಳಿಕ ಹೊರ ಜಗತ್ತಿನ ಕಲ್ಪನೆ ಅವರಿಗೆ ಇರುವುದಿಲ್ಲ. ಅವರಿಗೆ ಕೆಲಸವೇ ಮುಖ್ಯವಾಗಿರುತ್ತದೆ. ಕ್ರೀಡೆಯಲ್ಲಿ ತನ್ನನ್ನು ತೊಡಗಿಸಿಕೊಂಡು ಸರಕಾರಿ ನೌಕರಿ ಗಿಟ್ಟಿಸಿ ಸಾಧಿಸಿದ ಅನೇಕ ಮಂದಿ ಕ್ರೀಡಾಪಟುಗಳು ಜಿಲ್ಲೆಯಲ್ಲಿದ್ದಾರೆ. ಪ್ರತಿಭೆಗೆ ಸರಿಯಾದ ರೀತಿಯಲ್ಲಿ ಪ್ರೋತ್ಸಾಹ ಸಿಕ್ಕರೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಾಧಿಸಲು ಸಾಧ್ಯ ಎಂದರು.

ಸಮ್ಮಾನ
ಉದ್ಘಾಟನ ಸಮಾರಂಭದಲ್ಲಿ ಜಯಕೀರ್ತಿ ಜೈನ್‌, ಜಯಪ್ಪ ಲಮಾಣಿ, ವಿನ್ಸೆಂಟ್‌ ಕಾರ್ಲೋ ಅವರನ್ನು ಸಮ್ಮಾನಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಭಾಗೀರಥಿ ರೈ, ಹೇಮಚಂದ್ರ, ಜಯಪ್ಪ ಲಮಾನಿ ಅವರು ಕ್ರೀಡಾಜ್ಯೋತಿಯನ್ನು ಗಣ್ಯರಿಗೆ ಹಸ್ತಾಂತರಿಸಿದರು. ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್‌ ಡಿ’ಸೋಜಾ, ಸಂಘದ ಅಧ್ಯಕ್ಷ ಪ್ರಕಾಶ್‌ ನಾಯಕ್‌, ಜಯಂತ್‌, ಶಿವಶಂಕರ್‌ಭಟ್‌, ಲೋಕೇಶ್‌, ರೀಟಾ, ದೇವದಾಸ್‌, ಕೃಷ್ಣ, ಶರ್ಲಿನ್‌, ಲಿಲ್ಲಿ ಪಾಯಿಸ್‌ ಸೇರಿದಂತೆ ಮತ್ತಿತರರು ಇದ್ದರು. 

ಕ್ರೀಡೆಯಿಂದ ಮಾನಸಿಕ ದೃಢತೆ
ಮುಖ್ಯ ಅತಿಥಿಯಾಗಿದ್ದ ಅಪರ ಜಿಲ್ಲಾಧಿಕಾರಿ ಕುಮಾರ್‌ ಮಾತನಾಡಿ, ಸರಕಾರಿ ನೌಕರರು ಈ ರೀತಿಯ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವಿಕೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟಾರೆ 9,000ಕ್ಕೂ ಹೆಚ್ಚಿನ ಸರಕಾರಿ ನೌಕರರಿದ್ದು, ಶೇ.25ರಷ್ಟು ಮಂದಿಯೂ ಭಾಗವಹಿಸುವುದಿಲ್ಲ. ಸರಕಾರಿ ನೌಕರರು ಕೇವಲ ಕಚೇರಿ ಕೆಲಸಕ್ಕೆ ಸೀಮಿತರಾಗಬಾರದು. ಸಾರ್ವಜನಿಕರಿಗೆ ಗುಣಾತ್ಮಕ ಸೇವೆಯಗಳನ್ನು ಒದಗಿಸಲು ಮತ್ತು ಮಾನಸಿಕ ವಾಗಿ ದೃಢತೆಯನ್ನು ಗಳಿಸಿಕೊಳ್ಳಲು ಕ್ರೀಡೆ ಸಹಕಾರಿ ಎಂದು ವಿವರಿಸಿದರು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.