ಮೈಸೂರು ವಿಭಾಗ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ- ಬಾಲಕಿಯರ ಫುಟ್ಬಾಲ್ ಪಂದ್ಯಾವಳಿ
Team Udayavani, Sep 23, 2019, 11:42 AM IST
ಮೂಡುಬಿದಿರೆ: ವಿದ್ಯಾಗಿರಿಯಲ್ಲಿ ದ.ಕ.ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು , ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಶನಿವಾರ ರವಿವಾರ ನಡೆಯುವ ಮೈಸೂರು ವಿಭಾಗ ಮಟ್ಟದ 2017-20 ರ ಪ್ರಾಥಮಿಕ ಮತ್ತು ಪ್ರೌಢಶಾಲಾ 14 ಮತ್ತು 17 ವರ್ಷ ವಯೋಮಿತಿ ಯ ಬಾಲಕರು -ಬಾಲಕಿಯರ ಫುಟ್ಬಾಲ್ ಪಂದ್ಯಾವಳಿಯನ್ನು ಮಾಜಿ ಕ್ರೀಡಾ ಸಚಿವ ಕೆ. ಅಭಯಚಂದ್ರ ಉದ್ಘಾಟಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ ಶುಭಹಾರೈಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ರಘುನಾಥ್, ಆಳ್ವಾಸ್ ಪ್ರೌಢಶಾಲೆಯ ಆಡಳಿತಾಧಿಕಾರಿ ಪ್ರಕಾಶ್ ಶೆಟ್ಟಿ, ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿನಯಕುಮಾರ್, ಪ್ರಾ.ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಮೊದಲಾದವರು ಉಪಸ್ಥಿತರಿದ್ದರು