ಕೋವಿಡ್ ಸೋಂಕಿನಿಂದ ಗುಣಮುಖರಾದ ದ.ಕ ಜಿಲ್ಲಾ ಆರೋಗ್ಯಾಧಿಕಾರಿ
Team Udayavani, Jul 15, 2020, 1:59 PM IST
ಮಂಗಳೂರು: ಇತ್ತೀಚೆಗೆ ಕೋವಿಡ್-19 ಸೋಂಕು ದೃಢವಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಯವರು ಸದ್ಯ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಇವರಿಗೆ ಕಳೆದ ಜುಲೈ 2 ರಂದು ಕೋವಿಡ್-19 ಸೋಂಕು ದೃಢವಾಗಿತ್ತು. ನಂತರ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ಸಂದರ್ಭದಲ್ಲಿ ಎರಡು ಬಾರಿ ಅವರ ಸ್ವ್ಯಾಬ್ ಟೆಸ್ಟ್ ಮಾಡಿದ ಸಂದರ್ಭದಲ್ಲಿ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಮಂಗಳವಾರ 91 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿತ್ತು. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2452ಕ್ಕೆ ಏರಿಕೆಯಾಗಿದೆ.