‘ಇ-ಟೆಂಡರ್‌’ ಹುಟ್ಟುಹಾಕಿದ ಅನುಮಾನ!

ಮಹಾನಗರ ಪಾಲಿಕೆ

Team Udayavani, Apr 21, 2022, 1:23 PM IST

mcc

ಲಾಲ್‌ಬಾಗ್‌: ರಾಜ್ಯಾ ದ್ಯಂತ ಗುತ್ತಿಗೆದಾರರ ವಿಚಾರ ಚರ್ಚೆಯಲ್ಲಿ ರುವಾಗಲೇ, ಗುತ್ತಿಗೆದಾರರಿಗೆ ನೆರವಾದ ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದ ವಿಚಾರ ಮನಪಾ ವ್ಯಾಪ್ತಿಯಲ್ಲಿ ಸಂಚಲನ ಸೃಷ್ಟಿಸಿದೆ.

ಸೆಕ್ಯುರಿಟಿಗೆ ಸಂಬಂಧಿಸಿದ ಟೆಂಡರ್‌ ನಿರ್ವಹಣೆ ಸಂದರ್ಭ ತಾಂತ್ರಿಕ ಪರಿಶೀಲನೆ ಸಮರ್ಪಕವಾಗಿ ನಡೆಸದೆ ಗುತ್ತಿಗೆಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಪಾಲಿಕೆಯ ಸಹಾಯಕ ಎಂಜಿನಿಯರ್‌ ರಾಜೇಶ್‌ ಕುಮಾರ್‌ ಹಾಗೂ ಪ್ರಥಮ ದರ್ಜೆ ಸಹಾಯಕ ಪುಷ್ಪರಾಜ್‌ ಎಚ್‌. ಅಮಾನತುಗೊಂಡಿದ್ದಾರೆ. ಈ ಮುಖೇನ ಪಾಲಿಕೆ ಒಳಗಿನ ‘ಕಾಣದ ಕೆಲಸ’ ದ ವಿಚಾರ ಬಯಲಿಗೆ ಬಂದಿದ್ದು, ಇಂತಹ ಇನ್ನಷ್ಟು ಪ್ರಕರಣಗಳು ಪಾಲಿಕೆಯಲ್ಲಿ ನಡೆದಿವೆ ಎಂಬ ಬಗ್ಗೆ ಚರ್ಚೆ ಶುರುವಾಗಿದೆ.

ಏನಿದು ಪ್ರಕರಣ?

ಮಂಗಳೂರು ಪಾಲಿಕೆಯ ವಾರ್ಡ್‌ ನಂ.21 ರಿಂದ 40ರ ವ್ಯಾಪ್ತಿಯಲ್ಲಿ ಬರುವ ಮಂಗಳೂರು ಪಾಲಿಕೆ ಕಚೇರಿ, ನೀರು ಸರಬರಾಜು ರೇಚಕ ಸ್ಥಾವರ, ಉದ್ಯಾನವನಗಳಿಗೆ ಅಗತ್ಯವಿರುವ ಭದ್ರತೆ ಸಿಬಂದಿಯನ್ನು ಹೊರಗುತ್ತಿಗೆಯಲ್ಲಿ ಒದಗಿಸುವ ನಿರ್ವಹಣೆ ಕಾಮಗಾರಿಗೆ ಸಂಬಂಧಪಟ್ಟಂತೆ ಕೆಲವು ಮಾನದಂಡ ನಿಗದಿಪಡಿಸಿ ಇ-ಪ್ರೊಕ್ಯೂರ್‌ವೆುಂಟ್‌ ಮೂಲಕ ಟೆಂಡರ್‌ ಆಹ್ವಾನಿಸಲಾಗಿತ್ತು. ಇದರಂತೆ 2ನೇ ಕರೆಗೆ ಒಟ್ಟು 4 ಜನ ಟೆಂಡರ್‌ದಾರರು ಬಿಡ್‌ ಸಲ್ಲಿಸಿದ್ದರು. ಈ ಪೈಕಿ ಓರ್ವರ ಬಿಡ್‌ ತಾಂತ್ರಿಕವಾಗಿ ಅರ್ಹತೆ ಹೊಂದಿಲ್ಲವಾದ್ದರಿಂದ ಅವರ ಬಿಡ್‌ ತಿರಸ್ಕರಿಸಿ ಉಳಿದ ಮೂರು ಜನ ಗುತ್ತಿಗೆದಾರರ ಆರ್ಥಿಕ ಬಿಡ್‌ ತೆರೆಯಲಾಗಿತ್ತು.

ಈ ಪೈಕಿ ಕಡಿಮೆ ದರ ಸೂಚಿಸಿದ ಓರ್ವ ಗುತ್ತಿಗೆದಾರರ ಟೆಂಡರ್‌ ಅಂಗೀಕರಿಸುವ ಬಗ್ಗೆ ಶಿಫಾರಸು ಆಗಿತ್ತು. ಈ ಟೆಂಡರ್‌ ನಲ್ಲಿ ಬಿಡ್‌ದಾರರು ಟೆಂಡರ್‌ ಸಲ್ಲಿಸುವ ಅವಧಿಯಲ್ಲಿ ಪಾಲಿಕೆ ನಿಗದಿಪಡಿಸುವ ಮಾನದಂಡದ ದಾಖಲೆಗಳನ್ನು ಪೋರ್ಟಲ್‌ನಲ್ಲಿ ಲಗತ್ತಿಸಬೇಕಾಗಿತ್ತು.

ಅದರಂತೆ ಪೊಲೀಸ್‌ ಇಲಾಖೆಯ ಪರವಾನಿಗೆ ಪತ್ರ ಸಲ್ಲಿಸಬೇಕಾಗಿತ್ತು. ಆದರೆ ಮಂಗಳೂರಿನಲ್ಲಿ ವ್ಯವಹಾರ ನಡೆಸಲು ಬೇಕಾದ ಪೊಲೀಸ್‌ ಇಲಾಖೆಯಿಂದ ಯಾವುದೇ ಪರವಾನಿಗೆಯನ್ನು ಅಂಗೀಕೃತಗೊಂಡ ಬಿಡ್‌ದಾರರು ಹೊಂದಿಲ್ಲ. ಆದರೆ, ಈ ಟೆಂಡರ್‌ನಲ್ಲಿ ಸಲ್ಲಿಸಿರುವ ದಾಖಲೆಗಳನ್ನು ಸಮರ್ಪಕವಾಗಿ ತಾಂತ್ರಿಕ ಪರಿಶೀಲನೆ ನಡೆಸದೆ ಉದ್ದೇಶಪೂರ್ವಕವಾಗಿ ಮೇಲಧಿಕಾರಿಗಳ ಗಮನಕ್ಕೂ ತಾರದೆ ತಾಂತ್ರಿಕವಾಗಿ ಅರ್ಹತೆ ಹೊಂದಿರುವಾಗಿ ಶಿಪಾರಸ್ಸು ಮಾಡಿರುವುದು ಗಂಭೀರ ಕರ್ತವ್ಯ ಲೋಪ ಎಂದು ಆರೋಪಿಸಿ ಇಬ್ಬರು ಅಧಿಕಾರಿಗಳನ್ನು ಪಾಲಿಕೆ ಆಯುಕ್ತರು ಅಮಾನತುಗೊಳಿಸಿದ್ದಾರೆ.

ಇಬ್ಬರು ಅಮಾನತು, ಇಬ್ಬರಿಗೆ ಶೋಕಾಸ್‌ ನೋಟೀಸ್‌

ಟೆಂಡರ್‌ನಲ್ಲಿ ಕರ್ತವ್ಯ ಲೋಪ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಜತೆಗೆ ಕಾರ್ಯನಿರ್ವಾಹಕ ಎಂಜಿನಿಯರ್‌ ಹಾಗೂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಿಗೆ ಶೋಕಾಸ್‌ ನೋಟೀಸ್‌ ನೀಡಲಾಗಿದೆ. ವಿಚಾರಣೆ ವೇಳೆ ಅವರ ಹೇಳಿಕೆ ಪಡೆದು ತಪ್ಪಿದ್ದರೆ ಅವರ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು. – ಅಕ್ಷಯ್‌ ಶ್ರೀಧರ್‌, ಆಯುಕ್ತರು,ಮಹಾನಗರ ಪಾಲಿಕೆ

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.