ಕುಡಿಯುವ ನೀರಿನ ಸಮಸ್ಯೆ: ತತ್‌ಕ್ಷಣ ಸಭೆ ಕರೆಯುವಂತೆ ಯು.ಟಿ. ಖಾದರ್‌ ಆಗ್ರಹ

Team Udayavani, Mar 15, 2023, 6:45 AM IST

ಕುಡಿಯುವ ನೀರಿನ ಸಮಸ್ಯೆ: ತತ್‌ಕ್ಷಣ ಸಭೆ ಕರೆಯುವಂತೆ ಯು.ಟಿ. ಖಾದರ್‌ ಆಗ್ರಹ

ಮಂಗಳೂರು: ಜಿಲ್ಲೆ ಯಲ್ಲಿ ಈ ಬಾರಿ ಬಹು ಬೇಗ ಕುಡಿಯುವ ನೀರಿನ ಸಮಸ್ಯೆ ಕಾಣಿಸಿ ಕೊಂಡಿದ್ದು, ಜಿಲ್ಲಾಡಳಿತ ತತ್‌ಕ್ಷಣ ಸಭೆ ಕರೆದು, ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ರಾಜ್ಯ ಸರಕಾರವೂ ಪ್ರತೀ ಕ್ಷೇತ್ರಕ್ಕೆ 30-50 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಬೇಕು ಎಂದು ಶಾಸಕ, ವಿಧಾನ ಪರಿಷತ್‌ ವಿಪಕ್ಷ ಉಪನಾಯಕ ಯು.ಟಿ. ಖಾದರ್‌ ಆಗ್ರಹಿಸಿದ್ದಾರೆ.

ರಾಜ್ಯ ಸರಕಾರ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಶಾಸಕರು-ಸಚಿವರು ವಿಜಯ ಸಂಕಲ್ಪ ಯಾತ್ರೆಯಲ್ಲಿ ತಿರುಗಾಡುತ್ತಿದ್ದು, ಜನರ ಕಷ್ಟವನ್ನು ಕೇಳುವವರು ಇಲ್ಲ ಎನ್ನುವಂತಾಗಿದೆ. ವಿಜಯ ಸಂಕಲ್ಪ ಯಾತ್ರೆ ಅಲ್ಲ, ಅದು ಶೇ. 40 ಕಮಿಷನ್‌ ಯಾತ್ರೆ ಎಂದು ಮಂಗಳವಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ವ್ಯಂಗ್ಯವಾಡಿದರು.

ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಪ್ರತೀ ಕ್ಷೇತ್ರಕ್ಕೆ 30 ಲಕ್ಷ ರೂ. ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಕುಡಿಯುವ ನೀರು ಇಲ್ಲದೆ ಸಾರ್ವಜನಿಕರು ಸ್ಥಳೀಯ ಗ್ರಾ.ಪಂ. ಸದಸ್ಯರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ತತ್‌ಕ್ಷಣ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈಶ್ವರಪ್ಪ ಅವರ ನಾಲಗೆಗೂ ಮೆದುಳಿಗೂ ಸಂಪರ್ಕ ಇಲ್ಲ. ಆದ್ದರಿಂದ ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ. ತನಗೆ ಈ ಬಾರಿ ಟಿಕೆಟ್‌ ಸಿಗುವುದು ಕಷ್ಟ ಎಂದು ತಿಳಿದು ಅಸ್ವಸ್ಥರಾಗಿದ್ದು, ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಪ್ರತೀ ಧರ್ಮಕ್ಕೂ ಅದರದ್ದೇ ಆದ ಮಹತ್ವವಿದೆ. ಅವಹೇಳನ ಮಾಡುವುದರಿಂದ ಧರ್ಮಕ್ಕೆ ಏನೂ ಆಗುವುದಿಲ್ಲ. ಬದಲಾಗಿ ಹೇಳಿದವರ ನೀಚತನ ಜಗತ್ತಿಗೆ ತಿಳಿಯುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಖಂಡರಾದ ಸಂತೋಷ್‌ ಕುಮಾರ್‌ ಶೆಟ್ಟಿ, ಫಾರೂಕ್‌, ಜಗದೀಶ್‌, ಸದಾಶಿವ ಉಳ್ಳಾಲ್‌, ನಝàರ್‌ ಬಜಾಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.