ಬಿಪಿಎಲ್ ಕಾರ್ಡುದಾರರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ
Team Udayavani, Aug 13, 2020, 1:57 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಕೋವಿಡ್-19 ಚಿಕಿತ್ಸೆಯೂ ಸಹ ಸೇರ್ಪಡೆಯಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ|ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಸಾರ್ವಜನಿಕರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಆಯುಷ್ಮಾನ್ ಭಾರತ್ ಕಾರ್ಡನ್ನು ಮಾಡಿಸಿಕೊಳ್ಳಬಹುದು. ಸಾರ್ವಜನಿಕರು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಕಾರ್ಡನ್ನು ಮಾಡಿಸುವ ಸಂದರ್ಭದಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡುವುದು ಆವಶ್ಯಕ. ಬಿ.ಪಿ.ಎಲ್. ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ವರ್ಷಕ್ಕೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಎ.ಪಿ.ಎಲ್. ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಪಾವತಿ ಆಧಾರದ ಮೇಲೆ ಸರಕಾರಿ ಪ್ಯಾಕೇಜ್ ದರದ ಶೇ.30ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ 1.50 ಲಕ್ಷ ರೂ. ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಸಹ ಚಿಕಿತ್ಸೆ ಪಡೆದುಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ