ಇಂದು ಫಲಾನುಭವಿಗಳ ಸಮ್ಮೇಳನ: ಸಿಎಂ ಉದ್ಘಾಟನೆ
Team Udayavani, Mar 16, 2023, 5:32 AM IST
ಮಂಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಮಾ.16ರಂದು ಬೆಳಗ್ಗೆ 10ಕ್ಕೆ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಸಚಿವರಾದ ಎಸ್. ಅಂಗಾರ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲು ಸಹಿತ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಬಸ್ ಸೇವೆಯಲ್ಲಿ ವ್ಯತ್ಯಯ
ಸಮಾವೇಶದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಮಂಗಳೂರು/ಸ್ಟೇಟ್ಬ್ಯಾಂಕ್ನಿಂದ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ಮಾರ್ಗದ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವ ಕಾರಣ, ಆ ವೇಳೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಲಾಗುತ್ತದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ