ಕೊಣಾಜೆ: ಟ್ರ್ಯಾಕ್ಟರ್ ನಡಿಗೆ ಸಿಲುಕಿ ಬೈಕ್ ಸವಾರ ಸಾವು
ತಾನೇ ಕೆಲಸ ನಿರ್ವಹಿಸುತ್ತಿದ್ದ ಟ್ರಾಕ್ಟರ್ ನ ಅಡಿಗೆ ಬಿದ್ದು ಸಾವನ್ನಪ್ಪಿದ ಯುವಕ
Team Udayavani, Jun 22, 2020, 3:04 PM IST
ಉಳ್ಳಾಲ: ಟ್ರ್ಯಾಕ್ಟರ್ ನಡಿಗೆ ಸಿಲುಕಿ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಹಾಕುವಕಲ್ಲು ಪುಣ್ಯಕೋಟಿ ನಗರದ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.
ಮೃತಪಟ್ಟ ಬೈಕ್ ಸವಾರ ಅದೇ ಟ್ರ್ಯಾಕ್ಟರ್ ಚಾಲಕನಾಗಿದ್ದು, ಸೋಮವಾರ ರಜೆ ತೆಗೆದುಕೊಂಡಿದ್ದು ಬದಲಿ ಚಾಲಕನನ್ನು ಕರೆಸಿಕೊಂಡಿದ್ದರು. ದುರದೃಷ್ಟವಶಾತ್ ಅದೇ ಟ್ರ್ಯಾಕ್ಟರ್ ನಡಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಪುಣ್ಯಕೋಟಿ ನಗರದ ಬಳಿಯ ಮನೆಯೊಂದರ ರಸ್ತೆ ಅಗೆಯುವ ಕೆಲಸ ನಿರ್ವಹಿಸಿದ ಬದಲಿ ಚಾಲಕ ಒಳರಸ್ತೆಯಿಂದ ಮುಡಿಪು ಮಂಜನಾಡಿ ಸಂಪರ್ಕ ರಸ್ತೆಗೆ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಂತೆಯೇ ಅದೇ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಗೆ ತಾಗಿದ್ದು ಅಪಘಾತದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟರು. ಆದರೆ ಟ್ರ್ಯಾಕ್ಟರ್ ನಿಯಂತ್ರಣಕ್ಕೆ ಬಾರದೆ ಬೈಕ್ ಸವಾರನ ತಲೆಯ ಮೇಲೆ ಚಲಿಸಿದ್ದು ಬೈಕ್ ಸವಾರ ದಾರುಣ ಸಾವನ್ನಪ್ಪಿದ್ದಾರೆ.
ಕೊಣಾಜೆ ಹಾಗೂ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ