ಕುಲಶೇಖರ: ಸಿಗರೇಟ್ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ
Team Udayavani, May 31, 2023, 10:50 PM IST
ಮಂಗಳೂರು: ನಗರದ ಕುಕಶೇಖರ ಆಟೋರಿಕ್ಷಾ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇದುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೆಲವು ಮಂದಿಯ ನಡುವೆ ಬುಧವಾರ ಹೊಡೆದಾಟ ನಡೆದಿದೆ.
ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.