Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Team Udayavani, Mar 19, 2024, 11:54 AM IST

8-wenlock

ಮಂಗಳೂರು: ಮಂಗಳೂರಿನಲ್ಲಿರುವ ವೆನ್ಲಾಕ್‌ ಜಿಲ್ಲಾಸ್ಪತ್ರೆಯಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದಾಗಿ ರೋಗಿಗಳಿಗೆ ತೊಂದರೆಯಾಗುತ್ತಿದ್ದು ಇದಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಕಾರಣರಾಗಿದ್ದಾರೆ. ಹಾಗಾಗಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಗರದ ನಿವಾಸಿಯೋರ್ವರು ಪೊಲೀಸರಿಗೆ ದೂರು ನೀಡಿದ್ದಾರೆ.

ಸೋಮವಾರ ನಗರದ ಸುಮಾರು 65ರಿಂದ 70 ವರ್ಷದ ವ್ಯಕ್ತಿ ಸ್ಕೂಟರ್‌ ನಿಂದ ಬಿದ್ದು ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಅವರನ್ನು ವೆನ್ಲಾಕ್‌ಗೆ ಕರೆದುಕೊಂಡು ಹೋದಾಗ ತುರ್ತು ಚಿಕಿತ್ಸೆ ಸಿಗಲಿಲ್ಲ. ತುರ್ತು ಚಿಕಿತ್ಸಾ ವಿಭಾಗದಲ್ಲಿ 5 ಬೆಡ್‌ ಗಳು ಮಾತ್ರ ಇವೆ. ಅಲ್ಲಿ ಬೆಡ್‌ ಸಿಗದೆ ಹೊರಗಡೆ ಹಲವಾರು ರೋಗಿಗಳು ನರಳುತ್ತಾ ಚಿಕಿತ್ಸೆಗಾಗಿ ಕಾಯುತ್ತಿದ್ದರು. ಪೇಷೆಂಟ್‌ ಕಾರ್ಡ್‌ ಮಾಡಿಸುವುದಕ್ಕೂ ಅರ್ಧ ಗಂಟೆಗೂ ಅಧಿಕ ಸಮಯ ಕಾಯಬೇಕಾಗಿದೆ. ಅಲ್ಲದೆ ಆಸ್ಪತ್ರೆಯಲ್ಲಿ ನುರಿತ ವೈದ್ಯರ ಕೊರತೆ ಇದ್ದು ಖಾಸಗಿ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಗಳು ಚಿಕಿತ್ಸೆ ಕೊಡುವ ಸ್ಥಿತಿ ಇದೆ.

ಹೃದಯಾಘಾತದಂತಹ ತುರ್ತು ಪರಿಸ್ಥಿತಿಯಲ್ಲಿ ಕೂಡಲೇ ಚಿಕಿತ್ಸೆ ಸಿಗದೆ ರೋಗಿಗಳು ಸಾಯುವ ಪರಿಸ್ಥಿತಿ ಇದೆ. ಬೆಡ್‌, ವ್ಹೀಲ್‌ ಚೇರ್‌ ಗಳ ಕೊರತೆಯೂ ಇದೆ. ರೋಗಿಗಳು ನೆಲದ ಮೇಲೆ ಕುಳಿತುಕೊಳ್ಳಬೇಕಾಗಿದೆ. ಸಚಿವರು ಜನರಿಗೆ ಆರೋಗ್ಯದ ಹಕ್ಕನ್ನು ಒದಗಿಸಿಕೊಡುವಲ್ಲಿ ವಿಫ‌ಲರಾಗಿದ್ದಾರೆ. ಹಾಗಾಗಿ ಅವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಕೂಡಲೇ ಆಸ್ಪತ್ರೆಗೆ ಅಗತ್ಯ ಮೂಲಸೌಲಭ್ಯ ಒದಗಿಸಬೇಕು ಎಂದು ನಗರದ ಅಶೋಕ ನಗರ ನಿವಾಸಿ ಎಚ್‌. ಶಶಿಧರ ಶೆಟ್ಟಿ ಅವರು ಪಾಂಡೇಶ್ವರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.