ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಗೆ ಲೋಕಾಯುಕ್ತ ನೋಟಿಸ್ ಜಾರಿ
Team Udayavani, Jan 28, 2023, 1:33 PM IST
ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂದೀಪ್ ಮತ್ತು ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ವಿರುದ್ಧ ಸಾಮಾಜಿ ಕಾರ್ಯಕರ್ತರೊಬ್ಬರು ದಾಖಲಿಸಿರುವ ದೂರಿಗೆ ಸ್ಪಂದಿಸದ ಹಾಗೂ ಮಾಹಿತಿ ಹಕ್ಕಿನಡಿ ಕೇಳಿದ ದಾಖಲೆಗಳನ್ನು ಒದಗಿಸದಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ.
ಉಳ್ಳಾಲ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಂಜಾ ಮಾಫಿಯಾ, ಮರಳು, ಹೋಟೆಲ್ ಮಾಲಕರಿಗೆ ಹೀಗೆ ಪ್ರತಿಯೊಂದರಲ್ಲೂ ಹಣದ ಬೇಡಿಕೆ ಇಡುತ್ತಿದ್ದಾರೆ. ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡ ನಂತರ ಕೋಟ್ಯಂತರ ರೂಪಾಯಿ ಸಂಪಾದನೆ ಮಾಡಿದ್ದಾರೆ ಎಂದು ಮೊಹಮ್ಮದ್ ಕಬೀರ್ ಎನ್ನುವವರು ದೂರು ನೀಡಿದ್ದರು. ಈ ದೂರಿಗೆ ಪೊಲೀಸ್ ಆಯಕ್ತರು ಸ್ಪಂದಿಸದ ಹಿನ್ನೆಲೆಯಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಇದೀಗ ಲೋಕಾಯುಕ್ತ, ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದು, ದೂರುದಾರು ಮಾಡಿರುವ ಆರೋಪಗಳಿಗೆ ಫೆ.14ರೊಳಗೆ ಸೂಕ್ತ ದಾಖಲೆಗಳೊಂದಿಗೆ ಲೋಕಾಯುಕ್ತಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ನಗರ ದಕ್ಷಿಣ ಎಸಿಪಿಯವರಿಗೆ ಈ ಕುರಿತಂತೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ
ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ
‘ಆರಾಮ್ ಅರವಿಂದ್ ಸ್ವಾಮಿ‘ ಫಸ್ಟ್ ಲುಕ್ ರಿಲೀಸ್
ಬೆಳೆ ಪರಿಹಾರ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ರಾಜ್ಯ ರೈತ ಸಂಘದಿಂದ ಧರಣಿ
ಬಾತ್ ರೂಮ್ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು