ಮನಪಾ: ಗರಿಗೆದರಲಿದೆ ರಾಜಕೀಯ ಚಟುವಟಿಕೆ


Team Udayavani, Jan 3, 2018, 12:17 PM IST

03-30.jpg

ಮಂಗಳೂರು: ಮನಪಾ ಕಾಂಗ್ರೆಸ್‌ ಆಡಳಿತದ ಐದು ವರ್ಷ ಅವಧಿಯ ಐದನೇ ತಥಾ ಕೊನೆಯ ಅವಧಿಯ ಮೇಯರ್‌ ಹಾಗೂ ಉಪಮೇಯರ್‌ ಸ್ಥಾನಗಳಿಗೆ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರಕಾರ ಸೋಮವಾರ ಪ್ರಕಟಿಸಿದೆ. ಈ ಸ್ಥಾನಗಳೆರಡೂ ಸಾಮಾನ್ಯ ವರ್ಗಕ್ಕೆ ಮೀಸಲಾಗಿವೆ. ಇದರೊಂದಿಗೆ ಸ್ಥಾನಾಕಾಂಕ್ಷಿಗಳ ರಾಜಕೀಯ ಲೆಕ್ಕಾಚಾರ ಶುರುವಾಗಲಿದೆ.

ಹಾಲಿ ಮೇಯರ್‌ ಕವಿತಾ ಸನಿಲ್‌, ಉಪಮೇಯರ್‌ ರಜನೀಶ್‌ ಅವರ ಅಧಿಕಾರ ಅವಧಿ 2018ರ ಮಾರ್ಚ್‌ 9ಕ್ಕೆ ಕೊನೆಗೊಳ್ಳಲಿದೆ. ಮಾ.10ರೊಳಗೆ ಚುನಾವಣೆ ನಡೆದು, ಹೊಸ ಮೇಯರ್‌-ಉಪಮೇಯರ್‌ ಆಯ್ಕೆ ಆಗಬೇಕು. ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ 35 ಸ್ಥಾನ ಗಳಿಸಿರುವ ಕಾಂಗ್ರೆಸ್‌ ಬಹುಮತ ಹೊಂದಿದೆ. ಮೀಸಲಾತಿ ಸಾಮಾನ್ಯ ವರ್ಗಕ್ಕೆ ಬಂದಿರುವುದರಿಂದ 35 ಸದಸ್ಯರೂ ಮೇಯರ್‌, ಉಪಮೇಯರ್‌ ಸ್ಥಾನಕ್ಕೆ ಅರ್ಹರು. ಪಾಲಿಕೆಯಲ್ಲಿ ಬಿಜೆಪಿ 20, ಜೆಡಿಎಸ್‌ 2, ಸಿಪಿಎಂ 1, ಪಕ್ಷೇತರ 1, ಎಸ್‌ಡಿಪಿಐ 1 ಸದಸ್ಯರನ್ನು ಹೊಂದಿವೆ. 

ಕಾಂಗ್ರೆಸ್‌ ಆಡಳಿತದ ಪ್ರಥಮ ವರ್ಷ ಮೇಯರ್‌ಗಾದಿ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್‌ ಸ್ಥಾನ ಮಹಿಳಾ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಎರಡನೇ ವರ್ಷ ಮಹಿಳಾ ಸಾಮಾನ್ಯ ವರ್ಗಕ್ಕೆ ಹಾಗೂ ಸಾಮಾನ್ಯ ವರ್ಗಕ್ಕೆ ನಿಗದಿಯಾಯಿತು. ಮೂರನೇ ವರ್ಷ ಈ ಅವಕಾಶ  ಸಾಮಾನ್ಯ ವರ್ಗ ಹಾಗೂ ಪ.ಪಂಗಡ ಮಹಿಳಾ ವರ್ಗಕ್ಕೆ ಸಿಕ್ಕಿತು. ಕಾಂಗ್ರೆಸ್‌ನಲ್ಲಿ ಈ ವರ್ಗದ ಸದಸ್ಯರಿರದ ಕಾರಣ ಉಪಮೇಯರ್‌ ಸ್ಥಾನ ಬಿಜೆಪಿ ಪಾಲಾಗಿತ್ತು. ಪ್ರಸ್ತುತ ಅವಧಿಯಲ್ಲಿ ಮೇಯರ್‌ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಮೇಯರ್‌ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದೆ.

ರಾಜಕೀಯ ಆಟಕ್ಕೆ ವೇದಿಕೆ
ಮುಂದಿನ ಮೇಯರ್‌, ಉಪ ಮೇಯರ್‌ ಆಯ್ಕೆಗೆ ಇನ್ನೂ ಎರಡೂವರೆ ತಿಂಗಳು ಇರುವಾಗಲೇ ಮೀಸಲಾತಿ ಪ್ರಕಟಗೊಂಡಿರುವುದು ಸಾಕಷ್ಟು ರಾಜಕೀಯ ಆಟಕ್ಕೆ ವೇದಿಕೆ ನಿರ್ಮಿಸಿದೆ. ಒಂದೆಡೆ ವಿಧಾನಸಭೆ ಚುನಾವಣೆ, ಇನ್ನೊಂದೆಡೆ ಪ್ರಸ್ತುತ ಕಾಂಗ್ರೆಸ್‌ ಅಧಿಕಾರಾವಧಿಯಲ್ಲಿ ಇದು ಕೊನೆಯ ಅವಕಾಶ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯ ಲಾಭ-ನಷ್ಟದ ಲೆಕ್ಕಾಚಾರ ಇರಿಸಿಕೊಂಡೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. 

ಕಾಂಗ್ರೆಸ್‌ ತನ್ನ ನಾಲ್ಕು ವರ್ಷಗಳ ಆಡಳಿತಾವಧಿಯಲ್ಲಿ ಜಾತಿ ಲೆಕ್ಕಾಚಾರದ ಮೂಲಕ ಮೇಯರ್‌ ಸ್ಥಾನವನ್ನು ಕ್ರಮವಾಗಿ ಬಂಟ, ಕ್ರೈಸ್ತ, ಜೋಗಿ, ಬಿಲ್ಲವ ಸಮುದಾಯಗಳಿಗೆ ಒದಗಿಸಿದೆ. ಕೊನೆಯ ಅವಧಿಗೂ ಜಾತಿ ಲೆಕ್ಕಾಚಾರದಲ್ಲೇ ಮೇಯರ್‌ ಸ್ಥಾನ ಆಕಾಂಕ್ಷಿಗಳ ಪಾಲಾಗುವ ಸಾಧ್ಯತೆ ಹೆಚ್ಚು. ಮುಂದಿನ ಅವಧಿಗೆ ಮೇಯರ್‌ ಸ್ಥಾನ ಮುಸ್ಲಿಂ ಸಮುದಾಯಕ್ಕೆ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಆದರೆ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಈ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆ ಹೆಚ್ಚು.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.