
ಮಂಗಳೂರಿನ ಮನೆ ಮನೆಗೆ ಮೀನು ಮಾರುವ ವ್ಯಾಪಾರಿಗೆ ಕೋವಿಡ್ -19 ಸೋಂಕು ದೃಢ
Team Udayavani, Jun 23, 2020, 11:39 AM IST

ಮಂಗಳೂರು: ಮನೆಮನೆಗೆ ತೆರಳಿ ಮೀನು ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಮಂಗಳೂರಿನ ಎಕ್ಕೂರು ನಿವಾಸಿಗೆ ಕೋವಿಡ್-19 ಸೋಂಕು ತಾಗಿರುವುದು ಪರೀಕ್ಷೆಯಲ್ಲಿ ದೃಢವಾಗಿದೆ.
ಎಕ್ಕೂರಿನ 27 ವರ್ಷದ ಯುವಕ ಶೀತದ ಸಮಸ್ಯೆಗಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಸ್ವಯಂ ಪರೀಕ್ಷೆಗೊಳಪಟ್ಟಿದ್ದ. ಈ ವೇಳೆ ಆತನ ಗಂಟಲು ದ್ರವ ಮಾದರಿ ಪರೀಕ್ಷೆಗೊಳಪಡಿಸಿದ್ದು, ಸದ್ಯ ಆತನಿಗೆ ಕೋವಿಡ್-19 ಸೋಂಕು ತಾಗಿರುವುದು ಖಚಿತವಾಗಿದೆ. ಈತ ಮಂಗಳೂರು ಬಂದರಿಗೆ ತೆರಳಿ ಅಲ್ಲಿಂದ ಮೀನು ತಂದು, ಮನೆಮನೆಗೆ ಮೀನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಈತನ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡುವ ಕಾರ್ಯ ಜಿಲ್ಲಾಡಳಿತ ಮಾಡುತ್ತದೆ.
ಹೆಣ್ಣು ಮಗುವಿಗೆ ಜನ್ಮ ನೀಡಿದ ಸೋಂಕಿತೆ: ಸೋಮವಾರ ಕೋವಿಡ್-19 ಸೋಂಕು ಪಾಸಿಟಿವ್ ಆಗಿದ್ದ ಗರ್ಭಿಣಿಯೋರ್ವರು ಇಂದು ಮುಂಜಾನೆ ಐದು ಗಂಟೆ ಸುಮಾರಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಆರೋಗ್ಯವಾಗಿದೆ. ಮಹಾರಾಷ್ಟ್ರದಿಂದ ಬಂದ ಸಂಬಂಧಿಕರ ಮೂಲಕ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
