ಮಂಗಳೂರು: ನಂತೂರು ವೃತ್ತ, ಕೆಪಿಟಿ ಜಂಕ್ಷನ್‌:ಸಿಗ್ನಲ್‌ ಲೈಟ್‌ ಶೀಘ್ರ ಪುನರಾರಂಭ

ಹಿಂದೆ ಕೆಪಿಟಿ ಜಂಕ್ಷನ್‌ನಲ್ಲಿಯೂ ಸಿಗ್ನಲ್‌ ಲೈಟ್‌ ವ್ಯವಸ್ಥೆ ಇತ್ತು

Team Udayavani, Mar 28, 2023, 4:13 PM IST

ಮಂಗಳೂರು: ನಂತೂರು ವೃತ್ತ, ಕೆಪಿಟಿ ಜಂಕ್ಷನ್‌:ಸಿಗ್ನಲ್‌ ಲೈಟ್‌ ಶೀಘ್ರ ಪುನರಾರಂಭ

ನಂತೂರು: ನಿರಂತರ ಅಪಘಾತಗಳು ಸಂಭವಿಸಿ ಅಪಾಯಕಾರಿ ತಾಣವಾಗಿ ಪರಿಣಮಿಸಿರುವ ನಂತೂರು ವೃತ್ತದಲ್ಲಿ ಸಿಗ್ನಲ್‌ ಲೈಟ್‌ ವ್ಯವಸ್ಥೆ ಪುನರಾರಂಭಿಸಲು
ಪೊಲೀಸ್‌ ಇಲಾಖೆ ನಿರ್ಧರಿಸಿದೆ. ಸುಮಾರು ಮೂರು-ನಾಲ್ಕು ವರ್ಷ ಗಳ ಹಿಂದೆ ಇಲ್ಲಿ ಸಿಗ್ನಲ್‌ ಲೈಟ್‌ ಇತ್ತು.

ಆಗಾಗ ಸ್ಥಗಿತಗೊಳ್ಳುತ್ತಿತ್ತು. ಅದರ ನಿರ್ವಹಣೆ ಸಮರ್ಪಕವಾಗಿ ನಡೆಯದೆ ಮೂಲೆ ಗುಂಪಾಗಿತ್ತು. ಅಲ್ಲದೆ ಸಿಗ್ನಲ್‌ ಲೈಟ್‌ನಿಂದ ಕೆಲವೊಮ್ಮೆ ಅನಗತ್ಯವಾಗಿ ಸಂಚಾರ ದಟ್ಟಣೆ ಉಂಟಾಗುತ್ತದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದ ಕಾರಣ ಅದನ್ನು ಬಳಸಿಕೊಂಡಿರಲಿಲ್ಲ. ಮಾತ್ರವಲ್ಲದೆ, ಇಲ್ಲಿ ಓವರ್‌ಪಾಸ್‌ ನಿರ್ಮಾಣ ಯೋಜನೆ ರೂಪಿಸಿದ್ದರಿಂದ ಪೊಲೀಸರು ಸಿಗ್ನಲ್‌ ಲೈಟ್‌ ಅಳವಡಿಕೆಗೆ ಮುಂದಾಗಿರಲಿಲ್ಲ. ಇದೀಗ ಸಿಗ್ನಲ್‌ ಲೈಟ್‌ ಅಳವಡಿಸಬೇಕೆಂಬ ಬೇಡಿಕೆಗಳ ಹಿನ್ನೆಲೆಯಲ್ಲಿ ಪುನರಾರಂಭಿಸಲು ನಿರ್ಧರಿಸಲಾಗಿದೆ.

ಹೆದ್ದಾರಿಗಳ ಸಂಗಮ
ನಂತೂರು ಸರ್ಕಲ್‌ ಮೂರು ರಾಷ್ಟ್ರೀಯ ಹೆದ್ದಾರಿಗಳು ಸಂಗಮವಾಗುವ ಅಪಾಯಕಾರಿ ತಾಣ. ನಗರ ಸಂಪರ್ಕದ ಪ್ರಮುಖ ರಸ್ತೆ ಕೂಡ ಇಲ್ಲಿಯೇ ಸೇರುತ್ತದೆ. ಸದ್ಯ ಪೊಲೀಸರು ಸಂಚಾರ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದ್ದಾರೆ. ಆದರೂ ಸಂಚಾರ ಅವ್ಯವಸ್ಥೆ ಪೂರ್ಣ ಸರಿಪಡಿಸುವುದು ಸಾಧ್ಯವಾಗಿಲ್ಲ. ಅಪಘಾತಗಳು ಕೂಡ ನಡೆಯುತ್ತಿವೆ.

ಪಾಲಿಕೆಯಿಂದ ವೆಚ್ಚ
ಈಗ ಇರುವ ಹಳೆಯ ಸಿಗ್ನಲ್‌ ಲೈಟ್‌ನ ಕಂಬಗಳನ್ನೇ ಬಳಸಲಾಗುತ್ತದೆ. ಲೈಟ್‌, ವಯರ್‌ ಮೊದಲಾದವುಗಳನ್ನು ಹೊಸದಾಗಿ ಅಳವಡಿಸಲಾಗುವುದು. ಈ ಬಗ್ಗೆ ಸಭೆ ನಡೆದಿದ್ದು, ಹೆಚ್ಚುವರಿ ವೆಚ್ಚವನ್ನು ಪಾಲಿಕೆಯವರು ಪಾವತಿಸುವುದಾಗಿ ಒಪ್ಪಿಕೊಂಡಿದ್ದಾರೆ. ಸುಮಾರು 6 ಲ.ರೂ. ವೆಚ್ಚ ಅಂದಾಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೆಪಿಟಿಯಲ್ಲಿಯೂ ಸಿಗ್ನಲ್‌
ಈ ಹಿಂದೆ ಕೆಪಿಟಿ ಜಂಕ್ಷನ್‌ನಲ್ಲಿಯೂ ಸಿಗ್ನಲ್‌ ಲೈಟ್‌ ವ್ಯವಸ್ಥೆ ಇತ್ತು. ಅದು ಕೂಡ ಸ್ಥಗಿತಗೊಂಡಿದ್ದು ಶೀಘ್ರದಲ್ಲೇ ಪುನರಾರಂಭಿಸಲು ನಿರ್ಧರಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ವಾರದೊಳಗೆ ಆರಂಭ ನಿರೀಕ್ಷೆ
ನಂತೂರು ವೃತ್ತದಲ್ಲಿ ಓವರ್‌ಪಾಸ್‌ ನಿರ್ಮಾಣ ಕಾಮಗಾರಿ ನಡೆಯಲಿದೆ. ಅದುವರೆಗೆ ಅಲ್ಲಿ ಸುಗಮ ಸಂಚಾರಕ್ಕಾಗಿ ಸಿಗ್ನಲ್‌ ಲೈಟ್‌ ವ್ಯವಸ್ಥೆ ಪುನರಾರಂಭಿಸಲು ನಿರ್ಧರಿಸಲಾಗಿದೆ. ಒಂದು ವಾರದೊಳಗೆ ಇದು ಕಾರ್ಯಾರಂಭವಾಗುವ ನಿರೀಕ್ಷೆ ಇದೆ.

– ಕುಲದೀಪ್‌ ಕುಮಾರ್‌ ಆರ್‌. ಜೈನ್‌,
ಪೊಲೀಸ್‌ ಆಯುಕ್ತರು, ಮಂಗಳೂರು

ಉದಯವಾಣಿ ಸುದಿನ ವರದಿ ಬಳಿಕ ಕ್ರಮ
ಇತ್ತೀಚೆಗೆ ನಂತೂರು ವೃತ್ತದಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದರು. ಇಲ್ಲಿ ನಿರಂತರವಾಗಿ ಅಪಘಾತಗಳು ನಡೆದಿರುವ ಬಗ್ಗೆ, ಸಂಚಾರ ಅವ್ಯವಸ್ಥೆ ಬಗ್ಗೆ ಉದಯವಾಣಿ ಸುದಿನ ವರದಿ ಮಾಡಿತ್ತು. ಅನಂತರ ವೃತ್ತದ ಸಮೀಪ ಬಿಕರ್ನಕಟ್ಟೆ ಶಕ್ತಿನಗರ, ಬಜ್ಜೋಡಿ ಬಳಿ ಒಳರಸ್ತೆಗಳಿಂದ ಹೆದ್ದಾರಿ ಪ್ರವೇಶಿಸುವಲ್ಲಿ ಬ್ಯಾರಿಕೇಡ್‌ ಅಳವಡಿಸಿ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ. ಅಲ್ಲದೆ ಪೊಲೀಸರ ಕರ್ತವ್ಯಕ್ಕೆ ಅನುಕೂಲವಾಗುವ ಪೊಲೀಸ್‌ ಹೈಲ್ಯಾಂಡನ್ನು ಬಳಕೆಗೆ ಸಿದ್ಧಪಡಿಸಿಕೊಳ್ಳಲಾಗಿದೆ. ಹೆಚ್ಚುವರಿ ಸಿಸಿ ಕೆಮರಾ ಅಳವಡಿಸಲಾಗಿದೆ. ಇದೀಗ ಸಿಗ್ನಲ್‌ ಲೈಟ್‌ ಅಳವಡಿಕೆಗೂ ಪೊಲೀಸ್‌ ಇಲಾಖೆ ಮುಂದಾಗಿದೆ.

ಟಾಪ್ ನ್ಯೂಸ್

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.