ಮುಸ್ಲಿಂ ಧಾರ್ಮಿಕ ಮುಖಂಡರೊಂದಿಗೆ ಮಂಗಳೂರು ಪೊಲೀಸ್‌ ಆಯುಕ್ತರ ಸಭೆ

ಪ್ರತಿಭಟನೆ ಸಂದೇಶದ ಹಿನ್ನೆಲೆ

Team Udayavani, Jun 14, 2022, 2:02 AM IST

ಮುಸ್ಲಿಂ ಧಾರ್ಮಿಕ ಮುಖಂಡರೊಂದಿಗೆ ಮಂಗಳೂರು ಪೊಲೀಸ್‌ ಆಯುಕ್ತರ ಸಭೆ

ಮಂಗಳೂರು: ಪ್ರವಾದಿ ನಿಂದನೆ ಹಿನ್ನೆಲೆಯಲ್ಲಿ ದೇಶದ ಕೆಲವು ಭಾಗಗಳಲ್ಲಿ ನಡೆದಿರುವಂತೆ ಮಂಗಳೂರಿ ನಲ್ಲಿಯೂ ಪ್ರತಿಭಟನೆ ನಡೆಸುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡಿದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್‌ ಆಯುಕ್ತರು ಸೋಮವಾರ ನಗರದ ಧಾರ್ಮಿಕ ಮುಖಂಡರ ಸಭೆ ನಡೆಸಿದರು.

ಸಭೆಯ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಅವರು, “ಮಂಗಳೂರಿ ನಲ್ಲಿಯೂ ಪ್ರತಿಭಟನೆ ನಡೆಸಿ ದೇಶದ ಬೇರೆ ಭಾಗಗಳಿಗೆ ಸಂದೇಶ ನೀಡಬೇಕು ಎಂಬ ಸಂದೇಶಗಳು ಕೆಲವು ಸಾಮಾಜಿಕ ಜಾಲತಾಣ ಗ್ರೂಪ್‌ ಗಳಲ್ಲಿ ರವಾನೆ ಯಾ ಗಿದ್ದವು. ಈ ಬಗ್ಗೆ ಕೆಲವು ಮಂದಿ ಮುಸ್ಲಿಂ ಮುಖಂಡರು ಆತಂಕ ವ್ಯಕ್ತಪಡಿಸಿದ್ದರು. ಹಾಗಾಗಿ ಸಭೆ ಕರೆಯಲಾಗಿತ್ತು. ಸಭೆ ಯಲ್ಲಿ ಸುಮಾರು 60 ಮಂದಿ ಮುಖಂಡರು ಭಾಗವಹಿಸಿ ದ್ದರು. ಶಾಂತಿ ಸೌಹಾರ್ದ ಕಾಪಾಡಲು ಸಹಕರಿಸುವ ಭರವಸೆ ನೀಡಿದ್ದಾರೆ’ ಎಂದರು.

ಪ್ರಚೋದನಕಾರಿ
ಸಂದೇಶ ವಿರುದ್ಧ ಕ್ರಮ
ಸಮುದಾಯಕ್ಕೆ ತಪ್ಪು ಮಾಹಿತಿ ನೀಡುವ ಸಂದೇಶಗಳು ಹರಿದಾಡಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಕೆಲವು ಮಂದಿ ಎಲ್ಲೋ ದೂರದಲ್ಲಿ ಕುಳಿತು ಪ್ರಚೋದನಕಾರಿ ಸಂದೇಶಗಳನ್ನು ರವಾನಿಸುವುದು, ನಕಲಿ ಖಾತೆಗಳ ಮೂಲಕ ಪೋಸ್ಟ್‌ ಮಾಡು ವುದು ಗಮನಕ್ಕೆ ಬಂದಿದ್ದು ಈಗಾಗಲೇ ಹಲವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇಂತಹ ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ಧಾರ್ಮಿಕ ಮುಖಂಡರಿಗೆ ತಿಳಿಸಲಾಗಿದೆ ಎಂದರು.

ಪ್ರತಿಭಟನೆಗೆ ನಿರ್ಧರಿಸಿಲ್ಲ
ಮಂಗಳೂರಿನಲ್ಲಿ ಯಾವುದೇ ರೀತಿಯ ಪ್ರತಿಭಟನೆ ನಡೆಸುವ ಬಗ್ಗೆ ಚರ್ಚೆ ನಡೆ ದಿಲ್ಲ ಎಂದು ಮುಸ್ಲಿಂ ಧಾರ್ಮಿಕ ಮುಖಂಡರು ಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಯುವಸಮಿತಿ ರಚನೆ ಪ್ರಕ್ರಿಯೆ ಆರಂಭ ಪೊಲೀಸ್‌ ಠಾಣೆ, ವಿಭಾಗ ಮಟ್ಟದಲ್ಲಿ ಇಂತಹ ಸಭೆಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಇಂತಹ ಜನಸಂಪರ್ಕ ಸಭೆ ಹೆಚ್ಚಾಗಿ ಮಾಡು ವಂತೆ ಧಾರ್ಮಿಕ ಮುಖಂಡರು ಮನವಿ ಮಾಡಿದ್ದಾರೆ. ಈಗಾಗಲೇ ಠಾಣೆ ಮಟ್ಟದಲ್ಲಿ ಯುವ ಸಮಿತಿಗಳ ರಚನೆ ಪ್ರಕ್ರಿಯೆ ಆರಂಭಿಸಲಾಗಿದ್ದು ಎಲ್ಲ ವರ್ಗದವ ರೊಂದಿಗೆ ಸಂಪರ್ಕ ಸಾಧಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.

ಎರಡು ಸಮುದಾಯದ ಸಭೆಗೆ ಸಲಹೆ
ಪೊಲೀಸ್‌ ಆಯುಕ್ತರು ಮುಸ್ಲಿಂ ಧಾರ್ಮಿಕ ಮುಖಂಡರ ಸಭೆ ಕರೆದಿರುವುದ ರಿಂದ ವಿಶ್ವಾಸ ಹೆಚ್ಚಾಗಿದೆ. ಎರಡು ಸಮುದಾಯದವರನ್ನು ಕೂಡ ಜಂಟಿ ಸಭೆ ಕರೆಯುವಂತೆ ಸಲಹೆ ನೀಡಿದ್ದೇವೆ. ಜಿಲ್ಲೆಯ ಶಾಂತಿ ಸೌಹಾರ್ದ ಮುಂದುವರಿಯಲು ಸಹಕಾರ ನೀಡುವುದಾಗಿ ಹೇಳಿದ್ದೇವೆ ಎಂದು ಸಭೆಯ ಅನಂತರ ಮುಸ್ಲಿಂ ಧಾರ್ಮಿಕ ಮುಖಂಡ ಬಿ.ಎ. ಮುಮ್ತಾಝ್ ಆಲಿ ತಿಳಿಸಿದರು.

ಹೈದರ್‌ ಪರ್ತಿಪ್ಪಾಡಿ ಮಾತನಾಡಿ, ಇಂತಹ ಶಾಂತಿ ಸಭೆಗಳು ಮುಂಜಾಗ್ರತ ಕ್ರಮವಾಗಿ ಹಿಂದೆಯೂ ನಡೆಯುತ್ತಿತ್ತು. ಪೊಲೀಸರು ಈ ನಿಟ್ಟಿನಲ್ಲಿ ಸಮುದಾಯದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡಿ ರುವುದು ಸಂತಸ ತಂದಿದೆ ಎಂದರು.

ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆ ಗಳ ಬಗ್ಗೆ ಸಮುದಾಯದಲ್ಲಿ ಆತಂಕದ ಜತೆಗೆ ಸಮಾಜದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಇದನ್ನು ನಿವಾರಿಸುವಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರ ಈ ನಡೆ ಉತ್ತಮವಾಗಿದೆ. ಶಾಂತಿ ಸೌಹಾರ್ದತೆ ಕಾಪಾಡುವಲ್ಲಿ ನಮ್ಮ ಸಹಕಾರ ಎಂದಿಗೂ ಇರಲಿದೆ ಎಂದು ಮುಖಂಡ ಅಬ್ದುಲ್‌ ಹಮೀದ್‌ ಹೇಳಿದರು.

ಡಿಸಿಪಿ ಹರಿರಾಂ ಶಂಕರ್‌, ದಿನೇಶ್‌ ಕುಮಾರ್‌, ಎಸಿಪಿ ಗೀತಾ, ಪಿ.ಎ. ಹೆಗಡೆ, ಮಸೀದಿ, ವಿವಿಧ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.