ಮಂಗಳೂರು ವಿವಿ : ಆಗಸ್ಟ್ 2 ರಿಂದ ಪದವಿ, 5 ರಿಂದ ಸ್ನಾತಕೋತ್ತರ ಪರೀಕ್ಷೆ
Team Udayavani, Jul 20, 2021, 7:57 PM IST
ಮಂಗಳೂರು: ಕೋವಿಡ್-19ರ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟು ನಡೆಸಲು ಬಾಕಿ ಇರುವ ಏಪ್ರಿಲ್ 2021 ರ 1, 3, 5 ಮತ್ತು 7 ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳನ್ನು ಆಗಸ್ಟ್ 2 ರಿಂದ ನಡೆಸಲು ಮಂಗಳೂರು ವಿಶ್ವವಿದ್ಯಾನಿಲಯ ನಿರ್ಧರಿಸಿದೆ.
ಇದೇ ವೇಳೆ 1 ಮತ್ತು 3 ನೇ ಸೆಮಿಸ್ಟರ್ ನ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನೂ ಆಗಸ್ಟ್ 5 ರಿಂದ ನಡೆಸಲು ಉದ್ದೇಶಿಸಲಾಗಿದೆ. ಸರ್ಕಾರ ಸೂಚಿಸಿರುವ ಕೋವಿಡ್ ನಿಯಂತ್ರಣ ನಿಯಮಗಳ ಕಠಿಣ ಪಾಲನೆಯೊಂದಿಗೆ ಪರೀಕ್ಷೆ ನಡೆಯಲಿದೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮುಂಚಿತವಾಗಿ ಮಾಹಿತಿ ನೀಡಿರುವ ವಿಶ್ವವಿದ್ಯಾನಿಲಯ, ಕಾಲೇಜುಗಳಿಗೆ ಪರೀಕ್ಷಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಸೂಚನೆಯಲ್ಲಿ ತಿಳಿಸಿದೆ.