ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ಈ ಬಾರಿ ಮತದಾರರಿಂದ ಟೀಕೆ ಎದುರಿಸಲು ಸಿದ್ಧರಾಗಬೇಕಾಗುತ್ತದೆ.

Team Udayavani, Mar 21, 2023, 3:05 PM IST

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ಮಂಗಳೂರು: ತಾಪಮಾನ ಏರಿಕೆಯ ಆತಂಕದ ಜತೆಯಲ್ಲೇ ಜಿಲ್ಲೆಯಾದ್ಯಂತ ಈಗಾಗಲೇ ಕುಡಿಯುವ ನೀರಿನ ಕೊರತೆ ಜನಸಾಮಾನ್ಯರನ್ನು ಕಂಗೆಡಿಸಿದೆ. ಚುನಾವಣೆಯ ಹೊಸ್ತಿಲ್ಲಲ್ಲಿ ಮತ ಬೇಟೆ ಆರಂಭಿಸಿರುವ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರನ್ನೂ ಈ ವಿಚಾರ
ಇಕ್ಕಟ್ಟಿಗೆ ಸಿಲುಕಿಸಿದೆ.

ಜಿಲ್ಲೆಯಾದ್ಯಂತ ಜಲಮೂಲಗಳಲ್ಲಿ ನೀರಿನ ಕೊರತೆಯಿಂದಾಗಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾದಲ್ಲಿ ಮತ ಯಾಚನೆಗಾಗಿ ಮನೆಗಳಿಗೆ ತೆರಳುವ ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರನ್ನು ಮತದಾರರು ಬೆವರಿಳಿಸುವ ಸಾಧ್ಯತೆಯ ಬಗ್ಗೆ ಕಾರ್ಯಕರ್ತರ ನಡುವೆಯೇ ಚರ್ಚೆಗಳು ಆರಂಭವಾಗಿವೆ.

ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶಗಳಿಗೆ ನೀರುಣಿಸುವ ತುಂಬೆ ವೆಂಟೆಂಡ್‌ ಡ್ಯಾಂ ಹಾಗೂ ಎಎಂಆರ್‌ ಡ್ಯಾಂನಲ್ಲಿ ನೀರಿನ ಒಳಹರಿವು ಸ್ಥಗಿತಗೊಂಡಿದೆ ಮಾತ್ರವಲ್ಲದೆ, ಸಂಗ್ರಹವಾಗಿದ್ದ ನೀರಿನ ಮಟ್ಟ ಕ್ಷೀಣಿಸುತ್ತಿರುವುದು ಪಾಲಿಕೆ ವ್ಯಾಪ್ತಿಯಲ್ಲಿ ಶೀಘ್ರದಲ್ಲೇ ನೀರು ಪೂರೈಕೆಯಲ್ಲಿ ರೇಶನಿಂಗ್‌ ವ್ಯವಸ್ಥೆ ಜಾರಿಯಾಗುವ ಸೂಚನೆಯನ್ನು ನೀಡಿದೆ.

ನೀರಿನ ಸಮಸ್ಯೆ ಉತ್ತುಂಗ ತಲಪುವ ವೇಳೆಯಲ್ಲೇ ಚುನಾವಣ ಪ್ರಚಾರ, ಮುಖ್ಯವಾಗಿ ಮನೆ ಮನೆಗೆ ತೆರಳಿ ಮತ ಯಾಚಿಸುವ ಸನ್ನಿವೇಶವೂ ಬರುತ್ತದೆ, ಇದನ್ನು ಎದುರಿಸುವುದು ಹೇಗೆ ಎಂಬ ತಲೆಬಿಸಿಯಲ್ಲಿ ಕಾರ್ಯಕರ್ತರಿದ್ದಾರೆ.

ಮೂರು ವರ್ಷಗಳಲ್ಲಿ ಮಾರ್ಚ್‌ನಿಂದ ಜೂನ್‌ ನಡುವೆ ಮುಂಗಾರು ಪೂರ್ವ ಮಳೆಯ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ಅಷ್ಟಾಗಿ ಕಾಡಿರಲಿಲ್ಲ. ನೀರಿನ ಮಟ್ಟದಲ್ಲಿಯೂ ಮಾರ್ಚ್‌ ತಿಂಗಳ ಅಂತ್ಯದವರೆಗೆ ಕುಸಿತ ಕಂಡು ಬಂದಿರಲಿಲ್ಲ. ಆದರೆ ಈ ಬಾರಿ ಫೆಬ್ರವರಿ ತಿಂಗಳಲ್ಲೇ ಉರಿ ಬಿಸಿಲಿನ ವಾತಾವರಣ, ತಾಪಮಾನ ಏರಿಕೆಯು ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹದ ಮಟ್ಟವನ್ನು ಕ್ಷೀಣಿಸುವಂತೆ ಮಾಡುತ್ತಿದೆ. ಚುನಾವಣೆ ಘೋಷಣೆ ಆದ ಬಳಿಕ ಮತದಾರರ ಮನವೊಲಿಸುವ ನಿಟ್ಟಿನಲ್ಲಿ ಪಕ್ಷಗಳ ನಾಯಕರು, ಕಾರ್ಯಕರ್ತರು ಮನೆ ಮನೆ ಭೇಟಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಸಾಮಾನ್ಯ. ಆದರೆ ಅಷ್ಟರೊಳಗೆ ಮುಂಗಾರು ಪೂರ್ವ ಮಳೆಯಾಗಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಿದ್ದರೆ ಸರಿ. ಇಲ್ಲವಾದಲ್ಲಿ, ಈ ಬಾರಿ ಮತದಾರರಿಂದ ಟೀಕೆ ಎದುರಿಸಲು ಸಿದ್ಧರಾಗಬೇಕಾಗುತ್ತದೆ.

ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್‌ ಎಂ.ಆರ್‌. ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಈಗಾಗಲೇ ನೀರಿನ ಕೊರತೆ ಬಗ್ಗೆ ಚರ್ಚೆ ನಡೆಸಲಾಗಿದೆ. ಬಾಳೆಪುಣಿ, ನರಿಕೊಂಬು, ಕೊಣಾಜೆ, ತಲಪಾಡಿ ಹಾಗೂ ಮಂಜನಾಡಿಯಲ್ಲಿ ಅಂತರ್ಜಲ ಮಟ್ಟ ಕಡಿಮೆ ಇರುವ ಬಗ್ಗೆ ಚರ್ಚೆ ಆಗಿದೆ. ಮೂಲ್ಕಿ, ಮೂಡುಬಿದಿರೆ, ಸೋಮೇಶ್ವರ ಮೊದಲಾದ ಕಡೆಗಳಲ್ಲಿ ಈಗಾಗಲೇ ನೀರಿನ ಕೊರತೆ ಹಿನ್ನೆಲೆಯಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ತುಂಬೆಯಲ್ಲಿಯೂ ನೀರಿನ ಮಟ್ಟ ಮತ್ತಷ್ಟು ಕುಸಿದಲ್ಲಿ ರೇಶನಿಂಗ್‌ ಮಾಡುವಂತೆ, ದಿನಬಿಟ್ಟು ದಿನ ನೀರು ಪೂರೈಕೆಗೆ ಪಾಲಿಕೆ ಆಡಳಿತಕ್ಕೆ ಸೂಚನೆ ನೀಡಲಾಗಿದೆ.

ಬಿಸಿಲ ಬೇಗೆಯೂ ಬೆವರಿಳಿಸಲಿದೆ !
ಬಿಸಿಲ ಧಗೆಯಿಂದಾಗಿ ಬೆಳಗ್ಗೆ 11ರಿಂದ ಅಪರಾಹ್ನ 3 ಗಂಟೆಯವರೆಗೆ ಸೂರ್ಯನಿಗೆ ಮೈಯೊಡ್ಡಿ ತಿರುಗಾಡುವುದು ಕಷ್ಟ ಸಾಧ್ಯವಾಗಿರುವುದರಿಂದ, ಚುನಾವಣ ಕಾರ್ಯದ ನಿಮಿತ್ತ ಮನೆಗಳಿಗೆ ಭೇಟಿ ನೀಡುತ್ತಿರುವ ಪಕ್ಷಗಳ ನಾಯಕರು, ಕಾರ್ಯಕರ್ತರು ಬಿಸಿಲ ಬೇಗೆಗೆ ಬೆವರಿಳಿಸುವಂತಾಗಿದೆ. ಚುನಾವಣೆಯ ಘೋಷಣೆಯ ಬಳಿಕ ಮನೆ ಭೇಟಿ ಕಾರ್ಯ ಇನ್ನಷ್ಟು ಚುರುಕು ಗೊಳ್ಳುವ ಕಾರಣ ಮತಯಾಚಕರು ಹೈರಾಣಾಗುವುದು ಖಂಡಿತ.

*ಸತ್ಯಾ ಕೆ.

ಟಾಪ್ ನ್ಯೂಸ್

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

smi irani

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

1-qweqwewq

Retired ACP ಸುಭಾಷ್ ಚಂದ್ರ ವಿಧಿವಶ ; ಗಣ್ಯರ ಸಂತಾಪ

ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆಗಳಲ್ಲಿ NIA ದಾಳಿ

ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆಗಳಲ್ಲಿ NIA ದಾಳಿ

Mangaluru: ರನ್‌ವೇ ರೀಕಾರ್ಪೆಂಟಿಂಗ್ ಕಾಮಗಾರಿ ಪೂರ್ಣ: ನಾಳೆಯಿಂದ ವಿಮಾನಯಾನ ಯಥಾಸ್ಥಿತಿಗೆ

Mangaluru: ರನ್‌ವೇ ರೀಕಾರ್ಪೆಂಟಿಂಗ್ ಕಾಮಗಾರಿ ಪೂರ್ಣ: ನಾಳೆಯಿಂದ ವಿಮಾನಯಾನ ಯಥಾಸ್ಥಿತಿಗೆ

ತುಳುವಿಗೆ ರಾಜ್ಯ ಭಾಷೆ ಸ್ಥಾನ; ಮತ್ತೆ ಮೂಡಿದ ನಿರೀಕ್ಷೆ

ತುಳುವಿಗೆ ರಾಜ್ಯ ಭಾಷೆ ಸ್ಥಾನ; ಮತ್ತೆ ಮೂಡಿದ ನಿರೀಕ್ಷೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

1-sad-dsa

Bhimanna T Naik ದುಃಖ ತಪ್ತ ಕುಟುಂಬಕ್ಕೆ‌ ಸಕಾಲಿಕ ನೆರವಾದ ಶಾಸಕ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ