Mangaluru: ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ
Team Udayavani, Aug 6, 2024, 7:32 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶಿಸಿದ್ದಾರೆ.
ಎಲ್ಲ ಆಟೋರಿಕ್ಷಾಗಳೊಂದಿಗೆ ಇ- ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ವಲಯ 1 ರಲ್ಲಿ ನೀಲಿ ಬಣ್ಣದ ಹಾಗೂ ವಲಯ 2 ರಲ್ಲಿ ಹಳದಿ ಬಣ್ಣದ ಸ್ಟಿಕ್ಕರ್/ ಗುರುತಿನ ಸಂಖ್ಯೆಗಳನ್ನು ಪೊಲೀಸ್ ಇಲಾಖೆಯಿಂದ ಪಡೆದು ಅಂಟಿಸಲು ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ.
ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆರ್.ಟಿ.ಓ. ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲದೇ, ಈ ಸಂಬಂಧ ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಮಂಗಳೂರು ನಗರ ಡಿಸಿಪಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಧಿಕಾರ ನೀಡಲಾಗಿದೆ.
ಮೋಟಾರು ವಾಹನ ಕಾಯ್ದೆಯಂತೆ ಪಾರ್ಕಿಂಗ್ ಸ್ಥಳಗಳನ್ನು ಮತ್ತು ನಿಲುಗಡೆ ನಿಲ್ದಾಣಗಳಿಗೆ ಸ್ಥಳಗಳನ್ನು ನಿರ್ಧರಿಸಲು ಮಂಗಳೂರು ನಗರದಲ್ಲಿ ಮಹಾನಗರಪಾಲಿಕೆ ಆಯುಕ್ತರು ಹಾಗೂ ಇತರ ಪ್ರದೇಶಗಳಲ್ಲಿ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಅಧಿಕಾರ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.