Mangaluru: ಮಾದಕವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಓರ್ವನ ಬಂಧನ
Team Udayavani, Apr 8, 2023, 8:55 PM IST
ಮಂಗಳೂರು: ಮಾದಕ ವಸ್ತು ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿ ಕಾಸರಗೋಡು ಚೆರ್ಕಳದ ಅಬ್ದುಲ್ಲಾ ಸಿ (39) ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿ ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಅಕ್ರಮ ಎಂಡಿಎಂಎ (Methylene dioxy methamphetamine) ಮಾದಕ ವಸ್ತುವನ್ನು ಸಾಗಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಎಸಿಪಿ ಪಿ.ಎ. ಹೆಗ್ಡೆ ನೇತೃತ್ವದ ಸಿಸಿಬಿ ಪೊಲೀಸರ ತಂಡ ಆರೋಪಿಯಿಂದ 150 ಗ್ರಾಂ ಎಂಡಿಎಂಎ, ಬಳಸಿದ ಕಾರು ಮತ್ತು ಮೊಬೈಲ್ ಫೋನ್ ಜಪ್ತಿ ಮಾಡಿದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ 17.61 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಯ ವಿರುದ್ಧ ವಿಶಾಖಪಟ್ಟಣ ಮತ್ತು ಕಾಸರಗೋಡು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟಕ್ಕೆ ಸಂಬಂಧಿಸಿದ ಪ್ರಕರಣಗಳು ಬಾಕಿ ಇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?