ಮರಕಡ ಪರಾಶಕ್ತಿ ಕ್ಷೇತ್ರದ ಶ್ರೀ ನರೇಂದ್ರನಾಥ ಸ್ವಾಮೀಜಿ ವಿಧಿವಶ
Team Udayavani, Jan 27, 2022, 11:05 AM IST
ಮಂಗಳೂರು: ಮರಕಡ ಪರಾಶಕ್ತಿ ಕ್ಷೇತ್ರದ ಸ್ಥಾಪಕರಾದ ಶ್ರೀ ನರೇಂದ್ರನಾಥ ಸ್ವಾಮೀಜಿ ಜ.26ರಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಸ್ವಾಮೀಜಿಗೆ ಹೃದಯಾಘಾತ ಸಂಭವಿಸಿದ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಸ್ವಾಮೀಜಿ ಅವರ ಪಾರ್ಥಿವ ಶರೀರವನ್ನು ಮರಕಡದ ಸ್ವ ಗೃಹದಲ್ಲಿ ಇಂದು ಗುರುವಾರ ಮಧ್ಯಾಹ್ನ 2.30 ರವೆಗೆ ಭಕ್ತರು ಅಂತಿಮ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ.
ಬಳಿಕ 3 ಗಂಟೆಯ ಬಳಿಕ ಮಡ್ಯಾರ್ ನಲ್ಲಿ ಸಂಜೆ 5ರ ತನಕ ಭಕ್ತರ ದರ್ಶನಕ್ಕೆ ಅವಕಾಶವಿದ್ದು, ಅಲ್ಲಿಯೇ ಅಂತಿಮ ಸಂಸ್ಕಾರ ನೆರವೇರಲಿದೆ.