ಮಾಸ್ಕ್ ಕಡ್ಡಾಯ; ಧರಿಸದಿದ್ದರೆ ದಂಡ: ಡಿಸಿ

Team Udayavani, Sep 24, 2020, 6:13 AM IST

ಮಾಸ್ಕ್ ಕಡ್ಡಾಯ; ಧರಿಸದಿದ್ದರೆ ದಂಡ: ಡಿಸಿ

ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಬಳಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಹೊಟೇಲ್‌, ರೆಸ್ಟೋರೆಂಟ್‌ಗಳು, ವಾಣಿಜ್ಯ ಸಂಕೀರ್ಣಗಳು, ಮಾಲ್‌ಗಳು, ಅಂಗಡಿಗಳಲ್ಲಿ ಕಾರ್ಯನಿರ್ವಹಿ ಸುವ ಎಲ್ಲ ಸಿಬಂದಿ ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯ. ಪ್ರತಿ ಅಂಗಡಿ ಮಾಲಕರು ಸಾಮಾಜಿಕ ಅಂತರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸು ವುದು ಹಾಗೂ ನಿಯಮ ಉಲ್ಲಂಘನೆ ಯಾಗದಂತೆ ಸಾಕಷ್ಟು ಮುಂಜಾಗ್ರತೆ ವಹಿಸಬೇಕು ಎಂದು ತಿಳಿಸಿದ್ದಾರೆ.

ಲಕ್ಷಣ ಕಂಡರೆ ತಿಳಿಸಿ
ಮಾಲಕರು ಅಂಗಡಿ ಮುಂಭಾಗ ದಲ್ಲಿ ಸ್ವಯಂಚಾಲಿತ ಸ್ಯಾನಿಟೈಸರ್‌ ವ್ಯವಸ್ಥೆ ಅಳವಡಿಸಿ ಗ್ರಾಹಕರನ್ನು ಬಳಸುವಂತೆ ಉತ್ತೇಜಿಸಬೇಕು, ಪ್ರತಿದಿನ ಸಿಬಂದಿಯ ಆರೋಗ್ಯ ತಪಾಸಣೆ ನಡೆಸಬೇಕು, ಪ್ರತಿ ಮೂರು ದಿನಗಳಿಗೊಮ್ಮೆ ಅಂಗಡಿಯನ್ನು ಸ್ಯಾನಿಟೈಸೇಶನ್‌ ಮಾಡಬೇಕು, ಅಂಗಡಿ ಮುಂಭಾಗದಲ್ಲಿ ಸಿಬಂದಿ ನಿಯೋಜಿಸಿ ಗ್ರಾಹಕರನ್ನು ಥರ್ಮಲ್‌ ಸ್ಕ್ಯಾನಿಂಗ್‌ಗೆ ಒಳಪಡಿಸಬೇಕು, ಜ್ವರದ ಲಕ್ಷಣ ಕಂಡಲ್ಲಿ ಅಂಥವರ ಹೆಸರು, ದೂರವಾಣಿ ಸಂಖ್ಯೆ ಮತ್ತು ವಿಳಾಸವನ್ನು ದಾಖಲಿಸಿಕೊಂಡು ತಮ್ಮ ವ್ಯಾಪ್ತಿಯ ಆರೋಗ್ಯಾಧಿಕಾರಿ ಹಾಗೂ ಮಹಾನಗರಪಾಲಿಕೆಗೆ ತಿಳಿಸಬೇಕು. ಮಾಹಿತಿ ಸ್ವೀಕೃತವಾದ ತತ್‌ಕ್ಷಣವೇ ಮನಪಾ / ಜಿಲ್ಲಾಡಳಿತದಿಂದ ಆ್ಯಂಬುಲೆನ್ಸ್‌ ಮೂಲಕ ವ್ಯಕ್ತಿಯನ್ನು ಕೋವಿಡ್‌ ಕೇರ್‌ ಸೆಂಟರ್‌ಗೆ ಕಳುಹಿಸ ಬೇಕು ಎಂದು ತಿಳಿಸಿದ್ದಾರೆ.

ನೋಡಲ್‌ ಅಧಿಕಾರಿ ನೇಮಕ
ಮೀನುಗಾರಿಕೆ, ವ್ಯಾಪಾರ, ಹಣ್ಣು ಹಂಪಲು, ತರಕಾರಿ ಹಾಗೂ ಇತರ ವ್ಯಾಪಾರ ವಹಿವಾಟು ನಡೆಸುವ ಸ್ಥಳಗಳಲ್ಲಿ ಮಂಗಳೂರು ಪಾಲಿಕೆ ಆಯುಕ್ತರು, ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿ ಯಲ್ಲಿ ಓರ್ವ ನೋಡಲ್‌ ಅಧಿಕಾರಿಯನ್ನು ನೇಮಿಸಿ ಪ್ರತಿನಿತ್ಯ ಸರಕಾರಿ
ಮಾರ್ಗಸೂಚಿಗಳನ್ನು ಜನರು, ವರ್ತಕರು ಕಡ್ಡಾಯವಾಗಿ ಪಾಲಿಸುತ್ತಿ ರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಹಾಗೂ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಬೋಟ್‌ಗಳಿಂದ ಮೀನು ಇಳಿಸುವ ಸಂದರ್ಭ, ಮೀನು ವ್ಯಾಪಾ ರದ ಸಂದರ್ಭ ಜನರು ಸಾಮಾಜಿಕ ಅಂತರವನ್ನು ಹಾಗೂ ಸರಕಾರದ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸ ಬೇಕು. ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರು ಈ ಬಗ್ಗೆ ವಿಶೇಷ ಆದ್ಯತೆ ನೀಡಿ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮೊದಲು ದಂಡ; ಬಳಿಕ ಲೈಸನ್ಸ್‌ ರದ್ದು
ಯಾವುದೇ ಅಂಗಡಿಗಳಲ್ಲಿ ಮಾಸ್ಕ್ ಧರಿಸದಿರುವುದು ಹಾಗೂ ಸಾಮಾಜಕ ಅಂತರ ಕಾಯ್ದುಕೊಳ್ಳದಿರುವುದು ಅಥವಾ ಷರತ್ತುಗÙ ಉಲ್ಲಂಘನೆ ಮಾಡಿದ್ದಲ್ಲಿ ಮೊದಲ ಬಾರಿಗೆ 1,000 ರೂ., ಎರಡನೇ ಮತ್ತು ಮೂರನೇ ಬಾರಿಗೆ ಕ್ರಮವಾಗಿ 2,000 ರೂ. ಮತ್ತು 3,000 ರೂ. ದಂಡವನ್ನು ವಿಧಿಸಿ ಎಚ್ಚರಿಕೆ ನೀಡಲು ಹಾಗೂ ಮೂರಕ್ಕಿಂತ ಹೆಚ್ಚು ಬಾರಿ ಷರತ್ತುಗಳನ್ನು ಉಲ್ಲಂಘಸಿದಲ್ಲಿ ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸಲು ನಗರ ಸ್ಥಳೀಯ ಸಂಸ್ಥೆಗಳು ತಮ್ಮ ಹಂತದಲ್ಲಿ ಸೂಕ್ತ ಉಪನಿಯಮಗಳನ್ನು ರಚಿಸಿ ಅದನ್ನು ಅನಿಷ್ಠಾನಗೊಳಿಸಬೇಕು ಎಂದು ಸೂಚಿಸಿದ್ದಾರೆ.

ಧರಿಸದಿದ್ದರೆ 200 ರೂ. ದಂಡ
ಮಾಸ್ಕ್ ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ 200 ರೂ. ಮತ್ತು ಇನ್ನುಳಿದ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು.

ಪ್ರಯಾಣಿಕರು ಧರಿಸದಿದ್ದರೆ ವಾಹನ ಮಾಲಕನಿಗೆ ದಂಡ
ಕೆಎಸ್‌ಆರ್‌ಟಿಸಿ ಪ್ರಯಾಣಿ ಕರು ತಪ್ಪದೇ ಮಾಸ್ಕ್ ಬಳಸಿ, ನಿಯಮ ಪಾಲಿಸುವ ಕುರಿತಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕ್ರಮ ಕೈಗೊಳ್ಳ ಬೇಕು. ಖಾಸಗಿ ಬಸ್‌, ಆಟೋ, ಕ್ಯಾಬ್‌ ಇತ್ಯಾದಿಗಳಲ್ಲಿ ಉಲ್ಲಂಘನೆಯಾದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಾಹನದ ಮಾಲಕ‌ರಿಗೆ ದಂಡ ವಿಧಿಸಬೇಕು. ಪೊಲೀಸ್‌ ಅಧಿಕಾರಿಗಳು ಕೂಡ ನಿಯಮಿತವಾಗಿ ತಪಾಸಣೆ ಮಾಡ ಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.