ಸಮುದ್ರದ ಮಧ್ಯೆ ಸಿಲುಕಿದ ಟಗ್: ರಕ್ಷಣೆಗೆ ಆಗಮಿಸಿದ ನೌಕಾದಳದ ಹೆಲಿಕಾಪ್ಟರ್
Team Udayavani, May 17, 2021, 9:27 AM IST
Representative image used
ಮಂಗಳೂರು: ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ಸಮದ್ರದ ಮಧ್ಯೆ ಬಂಡೆಗೆ ಢಿಕ್ಕಿ ಹೊಡೆದು ನಿಂತಿರುವ ಟಗ್ ನಲ್ಲಿರುವ ಸಿಬ್ಬಂದಿಗಳ ರಕ್ಷಣೆಗೆ ಮಹತ್ವದ ಕಾರ್ಯಾಚರಣೆ ನಡೆಸಲು ನೌಕಾ ದಳ ಇಂದು ಸಜ್ಜಾಗಿದೆ.
ಕೊಚ್ಚಿನ್ ನಿಂದ ನೌಕಾದಳದ ಹೆಲಿಪಾಪ್ಟರ್ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಕೋಸ್ಟ್ ಗಾರ್ಡ್ ಮತ್ತು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ನೌಕಾ ದಳದ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ.
ಇದನ್ನೂ ಓದಿ:ಸಮುದ್ರ ಮಧ್ಯೆ 40 ಗಂಟೆಯಿಂದ ಒದ್ದಾಡುತ್ತಿರುವ ಟಗ್ ಸಿಬ್ಬಂದಿ: ಇನ್ನೂ ನಡೆಯದ ರಕ್ಷಣಾ ಕಾರ್ಯ
ಎನ್ಎಂಪಿಟಿ ಬಂದರಿನ ಹೊರವಲಯದ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಚಂಡಮಾರುತದ ಪರಿಣಾಮ ಆ್ಯಂಕರ್ ತುಂಡಾಗಿ ತೇಲಿ ಬಂದು, ಕಾಪು ಬಳಿಯಲ್ಲಿ ಅಪಘಾತಕ್ಕೊಳಗಾದ ಕೋರಮಂಡಲ ಎಕ್ಸ್ ಪ್ರೆಸ್ ಟಗ್ ನ 9 ಮಂದಿ ಸಿಬಂದಿಗಳು ಇನ್ನೂ ಕೂಡಾ ರಕ್ಷಣೆಯಲ್ಲಿ ನಿರೀಕ್ಷೆಯಲ್ಲಿ ಸಮುದ್ರದಲ್ಲೇ ಬಾಕಿಯುಳಿದಿದ್ದಾರೆ.
ಶುಕ್ರವಾರ ಬೆಳಗ್ಗೆ11.30 ರಿಂದ ಕಡಲಲ್ಲಿ ತೇಲುತ್ತಿರುವ ಕೋರಮಂಡಲ ಎಕ್ಸ್‌ಪ್ರೆಸ್ ಟಗ್ ಶನಿವಾರ ಬೆಳಗ್ಗೆ 8.30 ಕ್ಕೆ ಕಾಪು ಲೈಟ್ ಬಳಿಯಿಂದ ಸುಮಾರು ಹದಿನೈದು ಕಿಲೋ ಮೀಟರ್ ದೂರದ ಕಾಪು ಪಾರ್ ಬಳಿ ಬಂಡೆಗೆ ಡಿಕ್ಕಿ ಹೊಡೆದು ನಿಂತಿರುವುದು ಪತ್ತೆಯಾಗಿತ್ತು.
ಇದನ್ನೂ ಓದಿ: ತೌಕ್ತೆ ಚಂಡಮಾರುತದಿಂದ ಹಾನಿ: ಕರಾವಳಿ ಜಿಲ್ಲೆಗಳಿಗೆ ಸಚಿವ ಅಶೋಕ್ ಎರಡು ದಿನಗಳ ಭೇಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಐದು ಮಂದಿ ಪ್ರಾಣಾಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ