ಅಕ್ರಮ ಮರಳುಗಾರಿಕೆ ತಡೆಗೆ ಪ್ರಯತ್ನ: ನೂತನ ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌

Team Udayavani, Jan 2, 2021, 8:42 AM IST

MLR-SP

ನೂತನ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಅವರು ವಿಕಾಸ್‌ ಕುಮಾರ್‌ ಅವರಿಂದ ಅಧಿಕಾರ ಸ್ವೀಕರಿಸಿದರು.

ಮಂಗಳೂರು: ಸಾರ್ವಜನಿಕರ ಸಕ್ರಿಯ ಸಹಭಾಗಿತ್ವದೊಂದಿಗೆ ಉತ್ತಮ ಸೇವೆ ನೀಡಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ನೂತನ ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಹೇಳಿದ್ದಾರೆ.

ಶುಕ್ರವಾರ ಸಂಜೆ ನಿರ್ಗಮಿತ ಆಯುಕ್ತ ವಿಕಾಸ್‌ ಕುಮಾರ್‌ ಅವರಿಂದ ಅಧಿಕಾರ ವಹಿಸಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಂಗಳೂರು ಸುಶಿಕ್ಷಿತ, ಪ್ರಜ್ಞಾವಂತ ನಾಗರಿಕರನ್ನು ಹೊಂದಿರುವ ನಗರ. ಸಾರ್ವಜನಿಕರು ಸಮವಸ್ತ್ರ ಇಲ್ಲದ ಪೊಲೀಸರಂತೆ ಕೆಲಸ ಮಾಡಿ ಸಹಕರಿಸಿದರೆ ಅಪರಾಧ ರಹಿತ ಸಮಾಜ ನಿರ್ಮಾಣ ಸಾಧ್ಯ. ಸಿಬಂದಿ ಕೊರತೆಯಿದ್ದರೂ ಇರುವವರು ಸಮರ್ಥವಾಗಿ ಕೆಲಸ ಮಾಡಿದರೆ ಉತ್ತಮ ಸೇವೆ ಸಾಧ್ಯ’ ಎಂದರು.

ಅಪರಾಧ ಚಟುವಟಿಕೆಗೆ ಕಡಿವಾಣ
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಆಯುಕ್ತರು, “ನಗರದಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿದ ಘಟನೆ ಗಮನಕ್ಕೆ ಬಂದಿದೆ. ಇಂತಹ ಕೃತ್ಯಗಳಿಗೆ ಕಠಿಣ ಕ್ರಮ ಅನಿವಾರ್ಯ. ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲಸ ಮಾಡುವಾಗ ಪೊಲೀಸರು ಯಾವುದೇ ರೀತಿಯ ಭಯಪಡುವ ಅಗತ್ಯವಿಲ್ಲ. ಸರ ಅಪಹರಣ, ಕಳ್ಳತನ ಮೊದಲಾದ ಕೃತ್ಯಗಳನ್ನು ತಡೆಗಟ್ಟಲು ಈಗಾಗಲೇ ಪೊಲೀಸರು ಪ್ರಯತ್ನಿಸಿದ್ದಾರೆ. ಅಕ್ರಮ ಮರಳುಗಾರಿಕೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆ ನಿಯಂತ್ರಿ ಸಲಾಗುವುದು. ಪೊಲೀಸ್‌ ಪೋನ್‌-ಇನ್‌ ಪುನರ್‌ ಆರಂಭಿಸಲು ಸಿದ್ಧ’ ಎಂದು ತಿಳಿಸಿದರು.

ಸಾಮಾಜಿಕ ಮಾಧ್ಯಮ ದುರುಪಯೋಗ : ಕ್ರಮ
ಸಾಮಾಜಿಕ ಮಾಧ್ಯಮ ದುರುಪಯೋಗ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಂಚಾರ ಸಮಸ್ಯೆಗೂ ಪರಿಹಾರ ಹುಡುಕುವುದಲ್ಲದೇ, ಗಾಂಜಾ ಮತ್ತಿತರ ಮಾದಕ ವ್ಯಸನ ಸೇರಿದಂತೆ ವಿದ್ಯಾರ್ಥಿ ಸಮುದಾಯದ ಸಮಸ್ಯೆಗಳನ್ನು ಬಗೆಹರಿಸ ಲಾಗುವುದು. “112 ತುರ್ತು ಸಹಾಯವಾಣಿ’ ಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಾಗಿ ತಿಳಿಸಿದರು. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಂ ಶಂಕರ್‌, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿನಯ್‌ ಎ. ಗಾಂವ್ಕರ್‌, ಸಿಎಆರ್‌ ಡಿಸಿಪಿ ಚೆನ್ನವೀರಪ್ಪ ಹಡಪದ್‌ ಉಪಸ್ಥಿತರಿದ್ದರು.

ತುಳು ಕಲಿಯುವಾಸೆ
ಮಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಮಂಗಳೂರಿನೊಂದಿಗೆ ಹಿಂದಿನಿಂದಲೂ ಸಂಬಂಧ ಹೊಂದಿದ್ದು, ಇಲ್ಲಿಗೆ ಆಯುಕ್ತನಾಗುವ ಅವಕಾಶ ಸಿಕ್ಕಿರುವುದು ಹೆಮ್ಮೆ ತಂದಿದೆ. ತುಳು ಭಾಷೆ ಕಲಿಯುವ ಆಸೆ ಇದೆ. ಆ ಪ್ರಯತ್ನವಾಗಿ 10 ವರ್ಷಗಳ ಹಿಂದೆ ಒಂದು ತುಳು ಸಿನೆಮಾ ನೋಡಿದ್ದೆ ಎಂದರು ಆಯುಕ್ತರು.

ಬೀಟ್‌ ಬಲವರ್ಧನೆ
ಮಂಗಳೂರಿನಲ್ಲಿ ಪ್ರಸ್ತುತ ಇರುವ ಬೀಟ್‌ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಕೊರೊನಾ ನಿಯಂತ್ರಣಕ್ಕೆ ಪೊಲೀಸರು ತೊಡಗಿಸಿಕೊಂಡ ಕಾರಣ ಬೀಟ್‌ ವ್ಯವಸ್ಥೆ ಪರಿಣಾಮಕಾರಿಯಾಗಿ ಅನುಷ್ಠಾನ ಆಗದಿರಬಹುದು. ಅದನ್ನು ಬಲಗೊಳಿಸುವೆ.
ಎನ್‌. ಶಶಿಕುಮಾರ್‌

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.