ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ಪ್ರಚಾರದಿಂದ ಅಂತರ ಕಾಯ್ದುಕೊಂಡ ಎಡಪಕ್ಷಗಳು

Team Udayavani, Apr 2, 2019, 9:45 AM IST

left

ಮಂಗಳೂರು: ಈ ಬಾರಿಯ ದಕ್ಷಿಣ ಕನ್ನಡ ಲೋಕಸಭಾ ಚುನಾವಣಾ ಕಣದಿಂದ ಎಡಪಕ್ಷಗಳು ದೂರ ಉಳಿದಿದ್ದು, ಅಧಿಕೃತವಾಗಿ ಯಾವುದೇ ಪಕ್ಷಕ್ಕೆ ಬಹಿರಂಗ ಬೆಂಬಲ ಘೋಷಿಸಿಲ್ಲ. ಆದರೆ, ಕೋಮುವಾದಿ ಶಕ್ತಿಗಳನ್ನು ಸೋಲಿಸಲು ಪ್ರಬಲ ಜಾತ್ಯಾತೀತ ಪಕ್ಷವನ್ನು ಬೆಂಬಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿ ಪರೋಕ್ಷವಾಗಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿವೆ.

ಈ ಹಿಂದಿನ ಲೋಕಸಭೆ ಚುನಾವಣೆಗಳಲ್ಲೂ ಪಕ್ಷದ ಅಧಿಕೃತ ಅಭ್ಯರ್ಥಿ ಸ್ಪರ್ಧಿಸದ ಸಂದರ್ಭದಲ್ಲಿ ಉಳಿದ ಒಂದು ಪಕ್ಷಕ್ಕೆ ಅಧಿಕೃತವಾಗಿ ಬೆಂಬಲ ನೀಡಲಾಗುತ್ತಿತ್ತು. ಆದರೆ, ಪ್ರಥಮ ಬಾರಿಗೆ ಯಾವುದೇ ಒಂದು ಪಕ್ಷದ ಪರವಾಗಿ ನಿಂತಿಲ್ಲ.

ಈ ಕ್ಷೇತ್ರದಲ್ಲಿ 2009 ಹಾಗೂ 2014ರ ಚುನಾವಣೆಗಳಲ್ಲಿ ಸಿಪಿಎಂ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಈ ಬಾರಿ ಸ್ಪರ್ಧಿಸಿಲ್ಲ. ಸಿಪಿಐ ಕೂಡ ಸ್ಪರ್ಧೆ ಮಾಡುತ್ತಿಲ್ಲ. ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಎಡಪಕ್ಷಗಳು ಯಾವುದೇ ಪಕ್ಷಗಳ ಜತೆಗೆ ಮೈತ್ರಿ ಮಾಡಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಇಲ್ಲಿಯೂ ಇತರ ರಾಜಕೀಯ ಪಕ್ಷಗಳಿಂದ ಅಂತರ ಕಾಯ್ದುಕೊಳ್ಳಲು ಎಡಪಕ್ಷಗಳು ನಿರ್ಧರಿಸಿವೆ.

ಸಿಪಿಎಂ ನಿಲುವು ಬಗ್ಗೆ ಉದಯವಾಣಿಗೆ ಸ್ಪಷ್ಟಪಡಿಸಿದ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಆಚಾರಿ, ಪಕ್ಷದ ರಾಷ್ಟ್ರೀಯ ನೀತಿಯಂತೆ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸದಿರುವಲ್ಲಿ ಜಾತ್ಯತೀತ ಪಕ್ಷಗಳನ್ನು ಬೆಂಬಲಿಸಲಾಗುತ್ತಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಸಿಪಿಎಂ ಸ್ಪರ್ಧಿಸುತ್ತಿಲ್ಲ. ನಮ್ಮ ಉದ್ದೇಶ ಕೋಮುವಾದಿ ಶಕ್ತಿಗಳನ್ನು ಸೋಲಿಸುವುದು. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಸ್ಪರ್ಧಿಸಿರುವ ಸುವ ಜಾತ್ಯತೀತ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲಾಗುವುದು. ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿಕೂಟ ಪ್ರಬಲ ಜಾತ್ಯತೀತ ಪಕ್ಷ ಎಂದರು.

ಹಾಗೆಂದು ಮೈತ್ರಿಕೂಟದ ಚುನಾವಣಾ ಪ್ರಚಾರ ಸಭೆಯಿಂದ ಸಿಪಿಎಂ ಅಂತರ ಕಾಯ್ದುಕೊಳ್ಳಲಿದೆ. ತಮ್ಮ ಪಕ್ಷದ ಕಾರ್ಯಕರ್ತರು ಸ್ವತಂತ್ರವಾಗಿ ಜಾತ್ಯತೀತ ಪಕ್ಷವನ್ನು ಬೆಂಬಲಿಸಲು ಮತದಾರರನ್ನು ಕೋರಲಿದ್ದಾರೆ. ಕ್ಷೇತ್ರದ ಎಲ್ಲ 8 ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾವೇಶಗಳನ್ನು ಆಯೋಜಿಸಲಿದ್ದು, ಅದರ ನಾಯಕರು ಜಾತ್ಯತೀತ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡುವರು.

ಸಿಪಿಐ ಕೂಡ ಇದೇ ನಿಲುವನ್ನು ತಳೆದಿದ್ದು, ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಆಹ್ವಾನಿಸಿದರೆ ಪ್ರಚಾರ ಸಭೆಗಳಲ್ಲಿ ಭಾಗವಹಿಸಲು ನಿರ್ಧರಿಸಿತ್ತು. ಆದರೆ ರಾಹುಲ್‌ ಗಾಂಧಿಯವರು ವಯನಾಡ್‌ನ‌ಲ್ಲಿ ಸಿಪಿಐ ಅಭ್ಯರ್ಥಿ ವಿರುದ್ಧ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಸಿಪಿಐ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ.

16 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಘಟಾನುಘಟಿಗಳು
ಮಂಗಳೂರು ಲೋಕಸಭಾ ಕ್ಷೇತ್ರ , ಪುನರ್‌ವಿಂಗಡನೆಯ ಬಳಿಕ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವಾಗಿ ರೂಪುಗೊಂಡವರೆಗಿನ 1957 ರಿಂದ 2014ರ ವರೆಗಿನ 16 ಚುನಾವಣೆಗಳಲ್ಲಿ ಸಿಪಿಐ 2 ಬಾರಿ ಹಾಗೂ ಸಿಪಿಎಂ 6 ಬಾರಿ ಸೇರಿ ಒಟ್ಟು 8 ಬಾರಿ ಸ್ಪರ್ಧೆ ಮಾಡಿವೆ. ಸಿಪಿಐಯಿಂದ ಕೃಷ್ಣ ಶೆಟ್ಟಿ, ಬಿ.ವಿ. ಕಕ್ಕಿಲ್ಲಾಯ, ಸಿಪಿಎಂನಿಂದ ಬಿ.ಎನ್‌. ಕುಟ್ಟಪ್ಪ, ಎಂ.ಎಚ್‌. ಕೃಷ್ಣಪ್ಪ, ಮಹಾಬಲೇಶ್ವರ ಭಟ್‌, ಪಿ. ರಾಮಚಂದ್ರ ರಾವ್‌, ಬಿ. ಮಾಧವ , ಯಾದವ ಶೆಟ್ಟಿ ಸ್ಪರ್ಧಿಸಿದ್ದರು. 1957ರ ಚುನಾವಣೆಯಲ್ಲಿ ಸಿಪಿಐಯ ಕೃಷ್ಣ ಶೆಟ್ಟಿ ಅವರು ಕಾಂಗ್ರೆಸ್‌ಗೆ
ನಿಕಟ ಸ್ಪರ್ಧೆ ನೀಡಿದ್ದರು.

ಕೇಶವ ಕುಂದರ್‌

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.