ಗೋಹತ್ಯೆ ನಿಷೇಧ ಕಾನೂನು ಅಗತ್ಯವಿರಲಿಲ್ಲ; ಸಿದ್ದರಾಮಯ್ಯ ಹೇಳಿಕೆ ಅವರ ವೈಯಕ್ತಿಕ: ಡಿಕೆಶಿ
Team Udayavani, Jan 6, 2021, 2:48 PM IST
ಬಂಟ್ವಾಳ: ಗೋಮಾಂಸ ಭಕ್ಷಣೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಅವರ ವೈಯಕ್ತಿಕ. ಅದು ಪಕ್ಷದ್ದಲ್ಲ. ಅದರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬಂಟ್ವಾಳದಲ್ಲಿ ನಡೆಯುತ್ತಿರುವ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಗೋಹತ್ಯೆ ನಿಷೇಧ ಮಸೂದೆಗೆ ಸುಗ್ರೀವಾಜ್ಞೆ ಹಿನ್ನೆಲೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಗೋಹತ್ಯೆ ನಿಷೇಧ ಕಾನೂನು ಅಗತ್ಯವಿರಲಿಲ್ಲ, ರಾಜಕಾರಣ ಉದ್ದೇಶದಿಂದ ಇದನ್ನ ಜಾರಿ ಮಾಡಿದ್ದಾರೆ. ಗೋವನ್ನ ಪೂಜಿಸುವ ಪದ್ಧತಿ ಮೊದಲಿನಿಂದಲೂ ಇದೆ. ಸಿದ್ದರಾಮಯ್ಯನವರು ಅವರ ಅಭ್ಯಾಸದ ಬಗ್ಗೆಯಷ್ಟೇ ಹೇಳಿದ್ದಾರೆ. ಸಿದ್ದರಾಮಯ್ಯ ಹೇಳಿಕೆಯಿಂದ ಪಕ್ಷಕ್ಕೆ ನಷ್ಟವಿಲ್ಲ. ಕಾರ್ಯಕರ್ತರು ಈ ಬಗ್ಗೆ ಅಭಿಪ್ರಾಯ ತಿಳಿಸಿದರೆ ತಪ್ಪೇನಿದೆ ಎಂದರು.
ಎಲ್ಲಾ ವರ್ಗದ ಮಂದಿಯೂ ಹೈನುಗಾರಿಕೆ ಮಾಡುತ್ತಾರೆ. ಅವರೆಲ್ಲರಿಗೂ ಸರಕಾರ 25 ರಿಂದ 50 ಸಾವಿರ ರೂ. ಪರಿಹಾರ ನೀಡಲಿ. ಆಮೇಲೆ ಅವರ ಮನೆಗೆ ಬೇಕಾದರೂ ಕರೆದೊಯ್ಯಲಿ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಇದನ್ನೂ ಓದಿ: ಅಭಿವೃದ್ಧಿ ವಿಚಾರದಲ್ಲಿ ನಾನು ಹೆದರೋ ಮಗ ಅಲ್ಲ : ಸರಕಾರದ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್