ಅಧಿಕಾರಿಗಳ ದಾಳಿ: 425 ಕೆ.ಜಿ. ಅನಧಿಕೃತ ಪ್ಲಾಸ್ಟಿಕ್‌ ವಶ

ಮಹಾನಗರ ಪಾಲಿಕೆ ಕಾರ್ಯಾಚರಣೆ

Team Udayavani, Jun 26, 2019, 5:00 AM IST

14

ಮಹಾನಗರ: ಪ್ಲಾಸ್ಟಿಕ್‌ ನಿಷೇಧ ಕಾನೂನು ರಾಜ್ಯಾದ್ಯಂತ ಜಾರಿಯಲ್ಲಿದ್ದರೂ, ನಗರದಲ್ಲಿ ಬಹಳಷ್ಟು ಅಂಗಡಿಗಳಲ್ಲಿ ಎಗ್ಗಿಲ್ಲದೆ ಮಾರಾಟ- ಬಳಕೆ ನಡೆಯುತ್ತಿದೆ. ಈಗ ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಮಂಗಳವಾರ ನಗರದ ವಿವಿಧ ಅಂಗಡಿಗಳಲ್ಲಿ ಕಾರ್ಯಾಚರಣೆ ನಡೆಸಿ ಸುಮಾರು 425 ಕೆ.ಜಿ. ಪ್ಲಾಸ್ಟಿಕ್‌ ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪಾಲಿಕೆ ಉಪ ಆಯುಕ್ತೆ (ಕಂದಾಯ) ಗಾಯತ್ರಿ ನಾಯಕ್‌, ಪರಿಸರ ಎಂಜಿನಿಯರ್‌ ಮಧು ಎಸ್‌., ಆರೋಗ್ಯಾಧಿಕಾರಿ ಡಾ| ಮಂಜಯ್ಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕಾನೂನು ಬಾಹಿರವಾಗಿ ಪ್ಲಾಸ್ಟಿಕ್‌ ಮಾರಾಟ ಮಾಡುತ್ತಿದ್ದ ಮೈದಾನ ಕ್ರಾಸ್‌, ಸೆಂಟ್ರಲ್ ಮಾರ್ಕೆಟ್, ಬಿಬಿ ಅಲಾಬಿ ರಸ್ತೆಯ ಅಂಗಡಿಗಳಿಗೆ ತೆರಳಿ ಪರಿಶೀಲನೆ ನಡೆಸಿ ದಂಡ ವಿಧಿಸಿದ್ದಾರೆ.

ದಂಡ ವಿಧಿಸಿದರೂ, ನಿಯಮ ಪಾಲನೆ ಮಾಡದ ಅಂಗಡಿಗಳ ಪರವಾನಿಗೆಯನ್ನು ರದ್ದುಗೊಳಿಸಲು ಪಾಲಿಕೆ ಮುಂದಾಗಿದೆ. ನಗರದಲ್ಲಿ ಅನಧಿಕೃತ ಪ್ಲಾಸ್ಟಿಕ್‌ ಮಾರಾಟ ಮಾಡಲಾಗುತ್ತಿದೆ ಎಂಬ ಬಗ್ಗೆ ‘ಸುದಿನ’ ಈ ಹಿಂದೆಯೇ ವರದಿ ಪ್ರಕಟ ಮಾಡಿತ್ತು.

ಪಾಲನೆಯಾಗದ ನಿಯಮ
ರಾಜ್ಯದಲ್ಲಿ 4 ರಿಂದ 5 ಮೈಕ್ರಾನ್‌ ಪ್ಲಾಸ್ಟಿಕ್‌ ಚೀಲಗಳ ಮಾರಾಟ ನಿಷೇಧವಿದೆ. ಈ ಪ್ರಮಾಣದ ಪ್ಲಾಸ್ಟಿಕ್‌ಗಳನ್ನು ಯಾವುದೇ ಅಂಗಡಿಗಳಲ್ಲಿ ಮಾರಾಟ ಮಾಡಬಾರದು.

ಒಂದು ವೇಳೆ, ಮಾರಾಟ ಮಾಡಿದರೆ ಅಂಗಡಿ ಮಾಲಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂಬ ನಿಯಮ 2015- 16ರಲ್ಲಿ ಜಾರಿಗೆ ಬಂದಿದೆ. ಅಲ್ಲದೆ, ಅಂಡಿಗಳಿಗೆ ಪರವಾನಗಿ ನೀಡುವ ವೇಳೆ ಪ್ಲಾಸ್ಟಿಕ್‌ ಬಳಸಬಾರದು ಎಂಬ ಸ್ಪಷ್ಟ ನಿಯಮ ಮತ್ತು ಎಚ್ಚರಿಕೆಯನ್ನೂ ಪಾಲಿಕೆ ನೀಡುತ್ತದೆ. ಆದರೆ ಮಂಗಳೂರಿನ ಹೆಚ್ಚಿನ ಅಂಗಡಿ ಮಾಲಕರು ಈ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ.

ಪಾಲಿಕೆ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಮಂಗಳೂರು ನಗರದಲ್ಲಿ ಮನೆ ಮನೆಗೆ ತೆರಳಿ ಕಸ ವಿಲೇವಾರಿ ಮಾಡುವ ಸಮಯದಲ್ಲಿ ಸಿಗುವಂತಹ ಪ್ಲಾಸ್ಟಿಕ್‌ಗಳು ವರ್ಷಕ್ಕೆ ಸುಮಾರು 1,460 ಟನ್‌, ದಿನಕ್ಕೆ ಶೇ.3ರಷ್ಟು ಪ್ಲಾಸ್ಟಿಕ್‌ ನಗರದಲ್ಲಿಯೇ ಉತ್ಪಾದನೆಯಾಗುತ್ತದೆ. ಇವುಗಳನ್ನು ಪಚ್ಚನಾಡಿ ಬಳಿಕ ಲ್ಯಾಂಡ್‌ ಫಿಲ್ ಸೈಟ್‌ಗೆ ರವಾನಿಸಲಾಗುತ್ತದೆ.

ನಗರವನ್ನು ಪ್ಲಾಸ್ಟಿಕ್‌ ಮುಕ್ತ ಮಾಡುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ವಾರ್ಡ್‌ ಮಟ್ಟದಲ್ಲಿ ಕಾರ್ಯಾಚರಣೆ ನಡೆಸಲು ಮಹಾನಗರ ಪಾಲಿಕೆ ನಿರ್ಧರಿಸಿದೆ. ಈ ತಂಡದಲ್ಲಿ ಆರೋಗ್ಯ ಅಭಿಯಂತರ, ಆರೋಗ್ಯ ನಿರೀಕ್ಷಕರು, ಪರಿಸರ ಅಭಿಯಂತರರು ಇರುತ್ತಾರೆ. ಮುಂದಿನ ವಾರದಲ್ಲಿಯೇ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಜತೆ ಮೂರೂ ತಂಡದ ಸದಸ್ಯರು ನಗರದ ನಾನಾ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಲು ತೀರ್ಮಾನ ಮಾಡಲಾಗಿದೆ ಎನ್ನುತ್ತಾರೆ ಪಾಲಿಕೆ ಅಧಿಕಾರಿಗಳು.

ವಾರ್ಡ್‌ ಮಟ್ಟದಲ್ಲಿ ಕಾರ್ಯಾಚರಣೆ

ಕಾರ್ಯಚರಣೆ ಮುಂದುವರಿಕೆ

ನಗರದಲ್ಲಿ ಅನಧಿಕೃತವಾಗಿ ಪ್ಲಾಸ್ಟಿಕ್‌ ಮಾರಾಟ ಮಾಡುವ ಅಂಗಡಿಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ. ಈಗಾಗಲೇ ಪಾಲಿಕೆಯಿಂದ ವಾರ್ಡ್‌ ಮಟ್ಟದಲ್ಲಿ ತಂಡಗಳನ್ನು ಗುರುತಿಸಲಾಗಿದೆ. ಕಾರ್ಯಚರಣೆಯನ್ನು ಮುಂದುವರಿಸಲಾಗುವುದು.
– ಮಧು, ಪಾಲಿಕೆ ಪರಿಸರ ಅಭಿಯಂತರ

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.