14 ಲಕ್ಷ ರೂ. ನೆರವು ಬಂದರೂ ಬದುಕಲಿಲ್ಲ ಪತಿ!

ಹೆಣ್ಮಗಳ ಮನವಿಗೆ ಮಿಡಿದ "ಆಪತ್ಭಾಂಧವ'ರು

Team Udayavani, Sep 17, 2020, 6:10 AM IST

14 ಲಕ್ಷ ರೂ. ನೆರವು ಬಂದರೂ ಬದುಕಲಿಲ್ಲ ಪತಿ!

ಸಾಂದರ್ಭಿಕ ಚಿತ್ರ

ಮಂಗಳೂರು: ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ತಮ್ಮ ಪತಿಯನ್ನು ಉಳಿಸಲು ಹಣಕಾಸಿನ ನೆರವು ನೀಡಿ ಎಂದು ಮಹಿಳೆಯೋರ್ವರು ವೀಡಿಯೋ ಮೂಲಕ ಮಾಡಿದ ಮನವಿಗೆ ಒಂದೇ ದಿನ 14 ಲಕ್ಷ ರೂ. ನೆರವು ಹರಿದು ಬಂದಿದೆ. ಆದರೆ ಕೊನೆಯ ಕ್ಷಣದವರೆಗೆ ಹೋರಾಡಿದರೂ ಪತಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಮನ ಮಿಡಿಯುವ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ.

ಮಂಗಳೂರಿನ ಬೋಳದ ರಂಜೇಶ್‌ ಶೆಟ್ಟಿ ಅವರು ಕಿಡ್ನಿ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಕೊರೊನಾ ಪಾಸಿಟಿವ್‌ ಬಂದು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಆದರೆ, ಗಂಭೀರ ಸ್ಥಿತಿಯಲ್ಲಿದ್ದ ಕಾರಣ ಐಸಿಯುವಿಗೆ ದಾಖಲು ಮಾಡುವಂತೆ ವೈದ್ಯರು ತಿಳಿಸಿದ್ದಾರೆ. ಬಡ ಕುಟುಂಬವಾದ ಕಾರಣ ಹಣ ಹೊಂದಿಸಲು ಕಷ್ಟಪಡುತ್ತಿದ್ದ ಅವರ ಪತ್ನಿ ಗೀತಾ ಅವರ ನೆರವಿಗೆ ಬಂದದ್ದು, ಸಾಮಾಜಿಕ ಕಾರ್ಯಕರ್ತ ಆಸಿಫ್‌ ಆಪತ್ಭಾಂಧವ. ಆಸಿಫ್‌ ಅವರು ತಮ್ಮ ಮೊಬೈಲ್‌ನಲ್ಲಿ ಗೀತಾ ಅವರ ಮನವಿಯನ್ನು ವೀಡಿಯೋ ಮಾಡಿ, ಬ್ಯಾಂಕ್‌ ಖಾತೆ ಸಂಖ್ಯೆ, ಮೊಬೈಲ್‌ ಸಂಖ್ಯೆಯೊಂದಿಗೆ ಸಾಮಾಜಿಕ ತಾಣಗಳಲ್ಲಿ ಹರಿಯಬಿಟ್ಟಿದ್ದರು. ಆಸಿಫ್‌ ವೀಡಿಯೋ ನೋಡಿದ ಹಲವಾರು ಮಂದಿ ಗೀತಾ ಮನವಿಗೆ ಸ್ಪಂದಿಸಿದ್ದು, ಒಂದೇ ದಿನದಲ್ಲಿ 14 ಲಕ್ಷ ರೂ. ಗೀತಾ ಅವರ ಖಾತೆಗೆ ಜಮಾಯಿಸಿದ್ದಾರೆ.

ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ವೀಡಿಯೋ ಅಪ್ಲೋಡ್‌ ಮಾಡಿದ ತತ್‌ಕ್ಷಣ ವೈಯಕ್ತಿಕ ನೆಲೆಯಿಂದ 50 ಸಾವಿರ ರೂ. ನೀಡಿದ್ದಾರೆ. ಬುಧವಾರ ಬೆಳಗ್ಗೆ ಸಂಘದ ವತಿಯಿಂದ ಇನ್ನೂ 25 ಸಾವಿರ ರೂ.ಗಳನ್ನು ನೀಡಿದ್ದಾರೆ. ಅನೇಕ ಸಹೃದಯರು ಗೀತಾ ಅವರಿಗೆ ನೆರವು ನೀಡಿದ್ದಾರೆ ಎಂದು ಆಸಿಫ್‌ ಆಪತ್ಭಾಂಧವ ಅವರು “ಉದಯವಾಣಿ’ಗೆ ತಿಳಿಸಿದ್ದಾರೆ.

ಕೊನೆಗೂ ಬದುಕಲಿಲ್ಲ ಪತಿ
ಗಂಭೀರ ಸ್ಥಿತಿಯಲ್ಲಿದ್ದ ಪತಿಯನ್ನು ಹೇಗಾದರೂ ಉಳಿಸಿಕೊಳ್ಳಬೇಕೆಂಬ ಗೀತಾ ಅವರ ಮನವಿ ವಿಧಿಗೆ ಕೇಳಿಸಲೇ ಇಲ್ಲ. ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದ ಗೀತಾರ ಪತಿ ರಂಜೇಶ್‌ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಂಜೆ ಪ್ರಾಣ ಕಳೆದುಕೊಂಡಿದ್ದಾರೆ. ತಂದೆಯ ಅಗಲಿಕೆಯಿಂದ ಪುಟ್ಟ ಮಗನೂ ದುಃಖದ ಮಡುವಿನಲ್ಲಿದ್ದಾನೆ.

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.