Udayavni Special

ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಮಸ್ಯೆಯಾಗಿಲ್ಲ 


Team Udayavani, Jul 29, 2018, 12:59 PM IST

29-july-13.jpg

ಮಹಾನಗರ : ಕೇಂದ್ರ ಸರಕಾರ ಜಾರಿ ಮಾಡಲು ಉದ್ದೇಶಿಸಿರುವ ನ್ಯಾಶನಲ್‌ ಮೆಡಿಕಲ್‌ ಕಮಿಷನ್‌ (ಎನ್‌ಎಂಸಿ)ಕಾಯ್ದೆಯನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘವು ಕರೆ ನೀಡಿದ ಧಿಕ್ಕಾರ ದಿನಕ್ಕೆ ನಗರದಲ್ಲಿಯೂ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಕೆಲವು ಆಸ್ಪತ್ರೆಗಳಲ್ಲಿ ಹೊರ ರೋಗಿ ವಿಭಾಗ ಕಾರ್ಯಾಚರಿಸದಿದ್ದರೆ, ಇನ್ನು ಕೆಲವೆಡೆ ಒಪಿಡಿ ತೆರೆದಿದ್ದರೂ ವೈದ್ಯರು ಅಲಭ್ಯವಾಗಿದ್ದರು. ಆದರೆ ನಗರದ ಯಾವುದೇ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಮಸ್ಯೆ ಉಂಟಾಗಲಿಲ್ಲ.

ನಗರದ ಪ್ರಮುಖ ಖಾಸಗಿ ಆಸ್ಪತ್ರೆಗಳಲ್ಲಿ ಬೆಳಗ್ಗೆ ಒಪಿಡಿಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಒದಗಿಸಲಾಯಿತು. ಕುಂಟಿಕಾನದ ಎ.ಜೆ. ಆಸ್ಪತ್ರೆಯಲ್ಲಿ ಬೆಳಗ್ಗೆ ಒಪಿಡಿ ವಿಭಾಗ ತೆರೆದಿದ್ದರೆ, ಬಳಿಕ ಪ್ರತಿಭಟನೆ ಹಿನ್ನೆಲೆಯಲ್ಲಿ ಹೊರ ರೋಗಿ ವಿಭಾಗ ಕಾರ್ಯಾಚರಿಸುವುದಿಲ್ಲ ಎಂದು ನೊಟೀಸ್‌ ಬೋರ್ಡ್‌ನಲ್ಲಿ ಪ್ರಕಟಿಸಲಾಗಿತ್ತು. ಆದರೆ ತುರ್ತು ಚಿಕಿತ್ಸೆ ಲಭ್ಯವಿತ್ತು. ಕೆಎಂಸಿ ಆಸ್ಪತ್ರೆಯಲ್ಲಿ ಎಲ್ಲ ಸೇವೆ ಲಭ್ಯವಿತ್ತು. ಹೊರ ರೋಗಿ ವಿಭಾಗ ಕಾರ್ಯಾಚರಿಸುತ್ತಿದ್ದರೂ ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕದ ಸಭೆ ಇದ್ದ ಹಿನ್ನೆಲೆಯಲ್ಲಿ, ಕೆಲವು ವೈದ್ಯರು ಅಲಭ್ಯ ರಾಗಿದ್ದರು. ಆದರೆ ರೋಗಿಗಳಿಗೆ ಯಾವುದೇ ಸಮಸ್ಯೆ ಉಂಟಾಗಲಿಲ್ಲ. ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿಯೂ ಎಲ್ಲ ವಿಭಾಗಗಳು ಕಾರ್ಯಾಚರಿಸಿದ್ದವು.

ಸಾಂಕೇತಿಕ ಪ್ರತಿಭಟನೆ
ಈ ನಡುವೆ, ಕೇಂದ್ರ ಸರಕಾರದ ಎನ್‌ಎಂಸಿ ಕಾಯ್ದೆಯನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕದ ವತಿಯಿಂದ ಐಎಂಎ ಸಭಾಂಗಣದಲ್ಲಿ ಖಾಸಗಿ ವೈದ್ಯರು ಸಾಂಕೇತಿಕ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು. ಕೇಂದ್ರ ಸರಕಾರವು ರಾಷ್ಟ್ರೀಯ ವೈದ್ಯಕೀಯ ಆಯೋಗದ ಶಿಫಾರಸಿನ ಮೇರೆಗೆ ಜಾರಿಗೆ ತರಲು ಉದ್ದೇಶಿಸಿರುವ ಮಸೂದೆ ಅಸಾಂವಿಧಾನಿಕವಾಗಿದೆ. ಸಾರ್ವಜನಿಕ ಹಿತಾಸಕ್ತಿ, ಭಾರತದ ವೈದ್ಯಕೀಯ ಕ್ಷೇತ್ರದ ಅಭಿವೃದ್ಧಿಗೆ ಮಸೂದೆ ಮಾರಕವಾಗಿರುವುದಾಗಿ ಮನವಿಯಲ್ಲಿ ಉಲ್ಲೇಖೀಸಲಾಗಿದೆ. 2017ರಲ್ಲಿ ಮಂಡಿಸಲಾದ ಕಾನೂನಿನ ಋಣಾತ್ಮಕ ಅಂಶಗಳನ್ನು ಪರಿಗಣಿಸಲು ಲೋಕಸಭೆಯ ಸ್ಥಾಯೀ ಕಮಿಟಿಗೆ ಸೂಚಿಸಲಾಗಿತ್ತು.

ಈ ಕಮಿಟಿಯು ಹಲವಾರು ಸಾಕ್ಷಿಗಳು ಮತ್ತು ಪರಿಣತರನ್ನು ವಿಚಾರಿಸಿ 24 ಸಲಹೆಗಳನ್ನು ಸೂಚಿಸಿತ್ತು. ಇವುಗಳಲ್ಲಿ ಕೇವಲ ಒಂದನ್ನು ಮಾತ್ರ ಸಂಪೂರ್ಣವಾಗಿ ಹಾಗೂ ಮೂರನ್ನು ಭಾಗಶಃ ಅಳವಡಿಸಿ ಉಳಿದ ಅಂಶಗಳನ್ನು ಕೈಬಿಟ್ಟು ಲೋಕಸಭೆಯಲ್ಲಿ ಮತ್ತೆ ಮಂಡಿಸಲಾಗಿದೆ. 29 ಸದಸ್ಯರಲ್ಲಿ
9 ಮಂದಿ ಚುನಾಯಿತ ಸದಸ್ಯರು ಇರಬೇಕೆಂಬ ಸಲಹೆಯನ್ನು ಪರಿಗಣಿಸಿಲ್ಲ. ಎನ್‌ಎಂಸಿ ಸ್ವಾಯತ್ತ ಬೋರ್ಡ್‌ಗಳಲ್ಲಿ ಚುನಾಯಿತ ಸದಸ್ಯರಿರಬೇಕು ಎಂಬ ಸಲಹೆಯನ್ನು ಪರಿಗಣಿಸಲಾಗಿಲ್ಲ. ರಾಜ್ಯದ ವೈದ್ಯಕೀಯ ಮಂಡಳಿಗಳಿಗೆ ಸ್ವಾಯತ್ತೆಯನ್ನು ನೀಡಲಾಗಿಲ್ಲ ಸೇರಿದಂತೆ ಹಲವಾರು ಅಂಶಗಳನ್ನು ಸಂಘವು ಮನವಿಯಲ್ಲಿ ತಿಳಿಸಲಾಗಿದೆ. ಅಲ್ಲದೆ ಈ ಅಂಶಗಳನ್ನು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಐಎಂಎಯ ಮಂಗಳೂರು ಘಟಕದ ಅಧ್ಯಕ್ಷ ಡಾ| ಕೆ. ರಾಮಚಂದ್ರ ಕಾಮತ್‌ ನೇತೃತ್ವದ ವೈದ್ಯರ ನಿಯೋಗವು ಜಿಲ್ಲಾಧಿಕಾರಿ ಪ್ರತಿನಿಧಿಗೆ ಮನವಿಯನ್ನು ಸಲ್ಲಿಸಿತು.

ಚಿಕಿತ್ಸೆಗೆ ಬರುವವರ ಸಂಖ್ಯೆ ವಿರಳ
ಸುರತ್ಕಲ್‌: ಇಲ್ಲಿಯ ಕೆಲವು ಖಾಸಗಿ ಅಸ್ಪತ್ರೆಗಳಲ್ಲಿ ಶನಿವಾರ ಹೊರ ರೋಗಿ ವಿಭಾಗ ಬಂದ್‌ ಮಾಡಲಾಗಿತ್ತು. ಸುರತ್ಕಲ್‌ನಲ್ಲಿ ನಾಲ್ಕು ಖಾಸಗಿ ಆಸ್ಪತ್ರೆ ಹಾಗೂ ಒಂದು ಹೆರಿಗೆ ಆಸ್ಪತ್ರೆಯಿದೆ. ಮುಷ್ಕ ರದ ಬಗ್ಗೆ ಮೊದಲೇ ಮಾಧ್ಯಮಗಳಲ್ಲಿ ವರದಿ ಬಂದ ಕಾರಣ ಆಸ್ಪತ್ರೆಗಳ ಮುಂಭಾಗ ಚಿಕಿತ್ಸೆಗೆ ಬರುವವರ ಸಂಖ್ಯೆ ವಿರಳವಾಗಿತ್ತು.

ವೆನ್ಲಾಕ್‌ನಲ್ಲಿ ಅಧಿಕ ರೋಗಿಗಳು
ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿ ವಿಭಾಗ ಕಾರ್ಯಾಚರಿಸುತ್ತಿಲ್ಲ ಎಂಬ ಸುದ್ದಿಗಳು ಹರಿದಾಡಿದ ಹಿನ್ನೆಲೆಯಲ್ಲಿ ನಗರದ ಸರಕಾರಿ ವೆನ್ಲಾಕ್‌ ಆಸ್ಪತ್ರೆಯಲ್ಲಿ ಶನಿವಾರ ಅಧಿಕ ಸಂಖ್ಯೆಯ ರೋಗಿಗಳು ಕಂಡು ಬಂದರು. ಇದರಿಂದ ಸರತಿ ಸಾಲಿನಲ್ಲಿ ನಿಂತು ವಿವಿಧ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳುತ್ತಿರುವುದು ಕಂಡು ಬಂತು. 

ಟಾಪ್ ನ್ಯೂಸ್

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

frty5y56

ಕೋವಿಡ್ ಹೊಡೆತ | ಸದ್ದು ಮಾಡದ ಕೊಂಬು ಕಹಳೆ ವಾದ್ಯ

fcgrdtr

ಅವಮಾನಿಸಿದ ಪಕ್ಷದಲ್ಲಿ ಇರಬೇಡಿ,ಬಿಜೆಪಿಗೆ ಬನ್ನಿ : ಅಮರೀಂದರ್ ಗೆ ಅಠಾವಳೆ ಆಹ್ವಾನ

1ರಿಂದ 5ನೇ ತರಗತಿ ಸದ್ಯಕ್ಕಿಲ್ಲ: ಸಚಿವ ನಾಗೇಶ್‌

1ರಿಂದ 5ನೇ ತರಗತಿ ಸದ್ಯಕ್ಕಿಲ್ಲ: ಸಚಿವ ನಾಗೇಶ್‌

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ವಿರುದ್ಧ ಎಫ್ಐಆರ್‌?

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ವಿರುದ್ಧ ಎಫ್ಐಆರ್‌?

fgtytryr

ಮುಂಡರಗಿ:  ಹರ್ಮುಖ್‌ ಪರ್ವತ ಏರಿದ ಕಕ್ಕೂರು ತಾಂಡಾ ಯುವಕ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಿಡಗಳಿಗೆ “ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಕಾರು ಖರೀದಿಸಿ ತರುತ್ತಿದ್ದ ವೇಳೆ ಅಗ್ನಿ ಅವಘಡ ಕಣ್ಣೆದುರೇ ಹೊತ್ತಿ ಉರಿದ ಕಾರು

udayavani youtube

ನದಿಗೆ ಹಾರಿ ಎರಡು ದಿನ ಕಳೆದರೂ ಪತ್ತೆಯಾಗದ ದೇಹ : ಶೋಧ ಕಾರ್ಯ ಮುಂದುವರಿಕೆ

udayavani youtube

ಚರಣ್ ಜಿತ್ ಸಿಂಗ್ ಛನ್ನಿ ಪಂಜಾಬ್ ನೂತನ ಮುಖ್ಯಮಂತ್ರಿ|UDAYAVANI NEWS BULLETIN|19/9/2021

udayavani youtube

ಗಣೇಶನ ಆರಾಧನೆಯ ಜೊತೆಗೆ ಕೋವಿಡ್ ಲಸಿಕೆಯ ಬಗ್ಗೆ ಜನಜಾಗೃತಿ

ಹೊಸ ಸೇರ್ಪಡೆ

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

Children’s education

ಆದಿವಾಸಿ ಮುಖಂಡರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ :ಡಿವೈಎಸ್ ಪಿ ರವಿಪ್ರಸಾದ್ ಮನವಿ

frty5y56

ಕೋವಿಡ್ ಹೊಡೆತ | ಸದ್ದು ಮಾಡದ ಕೊಂಬು ಕಹಳೆ ವಾದ್ಯ

ಹೈದರಾಬಾದ್‌ ಲಯಕ್ಕೆ ಮರಳಲಿದೆ: ಲಕ್ಷ್ಮಣ್‌

ಹೈದರಾಬಾದ್‌ ಲಯಕ್ಕೆ ಮರಳಲಿದೆ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.