ಪಣಂಬೂರು ಬೀಚ್‌ ಸ್ವಚ್ಛತೆಗೆ ಪಾಲಿಕೆ ಕ್ರಮ

ತ್ಯಾಜ್ಯ ರಾಶಿಗೆ ಕಡಿವಾಣ, ಕಸ ವಿಂಗಡಿಸಿ ವಿಲೇವಾರಿ

Team Udayavani, May 26, 2022, 1:24 PM IST

before

ಪಣಂಬೂರು: ಪಣಂಬೂರು ಬೀಚ್‌ನಲ್ಲಿ ರಾಶಿ ಬೀಳುತ್ತಿದ್ದ ತ್ಯಾಜ್ಯ ರಾಶಿಗೆ ಕೊನೆಗೂ ಮುಕ್ತಿ ಕಾಣಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯ ಕಾರ್ಯವನ್ನು ಮಂಗಳೂರು ಮಹಾನಗರ ಪಾಲಿಕೆಯು ಮಾಡುತ್ತಿದೆ.

ಇಲ್ಲಿನ ಪಾರ್ಕಿಂಗ್‌ ಸ್ಥಳದಲ್ಲಿ ಹಸಿ, ಒಣ ಕಸ ಭಾರೀ ಪ್ರಮಾಣದಲ್ಲಿ ಸಂಗ್ರಹವಾಗುತ್ತಿತ್ತು. ಪ್ರವಾಸೋದ್ಯಮ ಇಲಾಖೆ ನಿರ್ವಹಣೆ ಮಾಡಿದರೆ ಮಹಾನಗರ ಪಾಲಿಕೆಯ ಸ್ವಚ್ಛತಾ ವಿಭಾಗ ಕಸ ಕೊಂಡೊಯ್ಯುವ ಕೆಲಸ ಮಾಡುತ್ತಿತ್ತು. ಆದರೆ ಇಲಾಖೆಯ ನಡುವೆ ಸಮನ್ವಯದ ಕೊರತೆಯಿಂದ ನಿಗದಿತ ವೇಳೆಯಲ್ಲಿ ವಿಲೇವಾರಿ ಆಗುತ್ತಿರಲಿಲ್ಲ. ದನ, ಕರುಗಳ ಹಿಂಡು ಬಂದು ಇಲ್ಲಿನ ಪ್ಲಾಸ್ಟಿಕ್‌ ಸುತ್ತಿ ಬಿಸಾಡಿದ ಆಹಾರ ಪೊಟ್ಟಣಗಳ ತ್ಯಾಜ್ಯಗಳನ್ನು ತಿಂದು ಅನಾರೋಗ್ಯಕ್ಕೆ ತುತ್ತಾಗುತಿತ್ತು.

ಶ್ವಾನಗಳು ತ್ಯಾಜ್ಯ ಕಟ್ಟುಗಳನ್ನು ಎಳೆದಾಡಿಕೊಂಡು ಚೆಲ್ಲಾಪಿಲ್ಲಿ ಮಾಡುತ್ತಿದ್ದವು. ಇದು ಪ್ರವಾಸಿಗರು ಒಳಬರುವ ಸ್ಥಳದಲ್ಲೇ ತ್ಯಾಜ್ಯ ಹರಡಿ ಅಂತಾರಾಷ್ಟ್ರೀಯ ಬೀಚ್‌ನ ಸೌಂದರ್ಯಕ್ಕೆ ಧಕ್ಕೆಯಾಗಿತ್ತು. ಇದೀಗ ಪಾರ್ಕಿಂಗ್‌ ಸ್ಥಳ ಹಾಗೂ ಹೈ ಮಾಸ್ಟ್‌ ದೀಪದ ಬಳಿ ಹಾಕಲಾದ ತ್ಯಾಜ್ಯವನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಗಿದೆ. ಬೃಹತ್‌ ಟೈಯರ್‌ಗಳನ್ನು ತಂದು ಅದನ್ನು ವಿವಿಧ ಬಣ್ಣಗಳ ಬಳಿದು ವಿನ್ಯಾಸಗೊಳಿಸಿ ಸಸಿ ನೆಡಲಾಗಿದೆ.

ಇದೀಗ ಪರಿಸರ ಅಭಿಯಂತರ ಆಗಿ ಪದೋನ್ನತಿ ಹೊಂದಿರುವ ಸುಶಾಂತ್‌ ಅವರ ನೇತೃತ್ವದಲ್ಲಿ ತ್ಯಾಜ್ಯ ರಾಶಿ ಬೀಳುತ್ತಿದ್ದ ಸ್ಥಳವನ್ನು ಸ್ವಚ್ಛಗೊಳಿಸಿ ಪರಿಸರ ಸಹ್ಯ ಸಂಸ್ಥೆಗಳ ನೆರವಿನಿಂದ ಗಿಡ ನೆಟ್ಟು ತ್ಯಾಜ್ಯ ಹಾಕದಂತೆ ಬೋಡ್‌ ಅಳವಡಿಸಲಾಗಿದೆ. ವ್ಯಾಪಾರಿಗಳಿಗೆ ಹಸಿ ಕಸ,ಒಣ ಕಸ ವಿಂಗಡಿಸಿ ನೀಡಲು ಸೂಚಿಸಲಾಗಿದೆ. ನೇರವಾಗಿ ಆ್ಯಂಟನಿ ವೇಸ್ಟ್‌ ಸಂಸ್ಥೆ ನಿತ್ಯ ತ್ಯಾಜ್ಯ ನಿರ್ವಹಣೆ ಮಾಡಲಿದ್ದು, ವ್ಯಾಪಾರಿಗಳು ಸಣ್ಣ ಮೊತ್ತದ ಶುಲ್ಕ ನೀಡಬೇಕಿದೆ.ಪ್ರವಾಸೋದ್ಯಮ ಇಲಾಖೆ ಬೀಚ್‌ ನಿರ್ವಹಣೆಗೆ ಈಗಾಗಲೇ ಟೆಂಡರ್‌ ಆಹ್ವಾನಿಸಿದ್ದು ಇದುವರೆಗೆ ಅಂತಿಮ ಗೊಂಡಿಲ್ಲ. ನೇರವಾಗಿ ಪ್ರವಾಸೋದ್ಯಮ ಇಲಾಖೆಯೇ ನೋಡಿಕೊಳ್ಳುತ್ತಿದೆ. ಈ ಸ್ವಚ್ಛತಾ ಅಭಿಯಾನಕ್ಕೆ ಪಾಲಿಕೆಯ ಆರೋಗ್ಯ ಅಧಿಕಾರಿಗಳಾದ ನಟೇಶ್‌, ಸಂಜಯ್‌, ಪ್ರವೀಣ್‌ ಹಾಗೂ ಆ್ಯಂಟನಿ ವೇಸ್ಟ್‌ ಮ್ಯಾನೇಜ್‌ ಮೆಂಟ್‌ ಸಂಸ್ಥೆಯ ರೋಶನ್‌ ನೆರವಾದರೆ ಎಪಿಡಿ ಫೌಂಡೇಶನ್‌ನ ದೀಪಾ ಸೂರ್ಯ ಅವರು ಪರಿಸರದಲ್ಲಿ ಸಸಿ ನೆಟ್ಟು ಪೋಷಿಸಲು ನೆರವಾಗಿದ್ದಾರೆ.

ನಿತ್ಯ ವಿಲೇವಾರಿ

ಕಳೆದ ಹಲವಾರು ತಿಂಗಳುಗಳಿಂದ ಬೀಚ್‌ ಮುಂಭಾಗ ಕಸದ ರಾಶಿ ಬೀಳುತ್ತಿತ್ತು. ಉದಯವಾಣಿ ಪತ್ರಿಕೆಯು ಸಮಸ್ಯೆ ವರದಿ ಮಾಡಿದಾಗಾ ಎರಡು ಬಾರಿ ಸ್ವಚ್ಛತೆ ಕೈಗೊಂಡಿದ್ದೇವೆ. ಇದಕ್ಕೆ ಶಾಶ್ವತವಾದ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಇದೀಗ ನಿತ್ಯ ವಿಲೇವಾರಿಗೆ ವ್ಯಾಪಾರಿಗಳ ಸಹ ಕಾರದಿಂದ ವ್ಯವಸ್ಥೆ ಮಾಡಲಾಗಿದೆ. ಪ್ರವಾಸಿಗರು ಇಲ್ಲಿಗೆ ಬರುವಾಗ ತಾವು ಬಳಸಿದ ವಸ್ತುಗಳನ್ನು ಹಾಕಲು ಇಡಲಾದ ನಿಗದಿತ ತೊಟ್ಟಿಗಳನ್ನು ಬಳಸಬೇಕು. ಬೀಚ್‌ ದಂಡೆಯಲ್ಲಿ, ಪಾರ್ಕಿಂಗ್‌ ಸ್ಥಳದಲ್ಲಿ ಕಸ ಎಸೆಯದೇ ಉತ್ತಮ ನಾಗರಿಕರಾಗಿ ವರ್ತಿಸಬೇಕು. -ಸುಶಾಂತ್‌, ಪರಿಸರ ಎಂಜಿನಿಯರ್‌, ಮನಪಾ

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.