ಮಂಗಳೂರು : ಟಿಎಂಸಿ ಹಿಂಸಾಚಾರ ಖಂಡಿಸಿ ಬಿಜೆಪಿ ಕಾರ್ಯಕರ್ತರ ಮೌನ ಪ್ರತಿಭಟನೆ
Team Udayavani, May 5, 2021, 10:41 AM IST
ಮಂಗಳೂರು : ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶದ ಬಳಿಕ ಟಿಎಂಸಿ ಕಾರ್ಯಕರ್ತರು ಹಿಂಸಾಚಾರ ನಡೆಸುತ್ತಿರುವುದು ಖಂಡನೀಯ ಎಂದು ಆರೋಪಿಸಿ ಬಿಜೆಪಿ ಮಂಗಳೂರು ದಕ್ಷಿಣ ಮಂಡಲದ ವತಿಯಿಂದ ಬುಧವಾರ ಮೌನ ಪ್ರತಿಭಟನೆ ನಡೆಸಲಾಯಿತು. ದ.ಕ ಬಿಜೆಪಿ ಕಚೇರಿ ಮುಂಭಾಗದಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ಭಾನುವಾರ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ಈ ವೇಳೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ಭರ್ಜರಿ ಜಯ ಸಾಧಿಸಿದೆ.
ಇದೇ ದಿನ ಪಶ್ವಿಮ ಬಂಗಾಳದ ಹಲವಾರು ಕಡೆ ಹಿಂಸಾಚಾರ ನಡೆದಿದ್ದು, ಈ ಕೃತ್ಯಗಳಿಗೆ ಟಿಎಂಸಿ ಪಕ್ಷವೇ ಕಾರಣ ಎಂದು ಬಿಜೆಪಿ ಆರೋಪ ಮಾಡಿತ್ತು. ಅಲ್ಲದೆ ಹಿಂಸಾಚಾರದ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ಮಾಡುವುದಾಗಿ ತಿಳಿಸಿತ್ತು. ಮೌನ ಪ್ರತಿಭಟನೆ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಬಿಜೆಪಿ ಮುಖಂಡ ವಿಜಯ್ ಕುಮಾರ್ ಶೆಟ್ಟಿ ಭಾಗಿಯಾಗಿದ್ದರು.