ಗುಣಮಟ್ಟದಲ್ಲಿ ಕೊರತೆ, ಸುಪರ್ದಿಗೆ ಪಡೆಯಲು ಚೇಳ್ಯಾರು ಗ್ರಾ.ಪಂ. ಹಿಂದೇಟು?

ಜಲಜೀವನ್‌ ಮಿಷನ್‌ ಕಾಮಗಾರಿ

Team Udayavani, Oct 11, 2022, 4:37 PM IST

19

ಸುರತ್ಕಲ್‌: ಕೇಂದ್ರ ಮತ್ತು ರಾಜ್ಯ ಸರಕಾರದ ಗ್ರಾಮೀಣ ಪ್ರದೇಶದ ಮಹತ್ವಾಕಾಂಕ್ಷೆಯ ನೀರಿನ ಯೋಜನೆ ಜಲವಿಷನ್‌ (ಜೆ.ಜೆ.ಎಂ.) ಮನೆ ಮನೆ ಗಂಗೆ ಯೋಜನೆಯಲ್ಲಿ ಚೇಳ್ಯಾರು ಗ್ರಾ.ಪಂ. ವ್ಯಾಪ್ತಿಯ ಒಂದು ಕಡೆಯ ಕಾಮಗಾರಿಯಲ್ಲಿ ಗುಣಮಟ್ಟದ ಕೊರತೆ ಇದೆ ಎಂಬ ಬಗ್ಗೆ ಆರೋಪ ಕೇಳಿ ಬಂದಿದೆ.

ಇಲ್ಲಿನ ಕೆಲಸದಲ್ಲಿ ಮೂರು ಅಡಿ ಕೆಳಗೆ ಹಾಕಬೇಕಾದ ನೀರಿನ ಪೈಪ್‌ಗಳು ಒಂದೇ ಮಳೆಗೆ ಮೇಲೆದ್ದು ಬಂದಿವೆ. ವಾಹನಗಳು ಇದರ ಮೇಲೆ ಹೋದರೆ ಒಡೆದು ಹೋಗುವ ಸಾಧ್ಯತೆಯೂ ಇದೆ. ಮಧ್ಯ ಗ್ರಾಮಕ್ಕೆ ಈ ಯೋಜನೆಯಲ್ಲಿ 54 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ನೀರಿನ ಓವರ್‌ ಹೆಡ್‌ ಟ್ಯಾಂಕ್‌, ತೆರೆದ ಬಾವಿ, ಕೊಳವೆ ಬಾವಿ, ಪೈಪ್‌ಲೈನ್‌ ಕಾಮಗಾರಿ ಒಳಗೊಂಡಿದೆ. ಈಗಾಗಲೇ ಪೈಪ್‌ಲೈನ್‌ ಹಾಕಲಾಗಿದ್ದು, ಕಳಪೆ ಮಟ್ಟದ ಪೈಪ್‌ ಗಳನ್ನು ಬಳಸಲಾಗಿದೆ ಎಂಬ ಸಂಶಯ ಗ್ರಾಮಸ್ಥರದ್ದು, ಇತ್ತೀಚೆಗೆ ಸುರಿದ ಮಳೆಗೆ ಮಣ್ಣು ಹೋಗಿ ಪೈಪ್‌ ರಸ್ತೆಯಲ್ಲಿ ಬಿದ್ದಿದೆ ಎಂಬ ಆಕ್ರೋಶ ಗ್ರಾಮಸ್ಥರದ್ದಾಗಿದೆ.

ನೀರಿನ ಓವರ್‌ ಹೆಡ್‌ ಟ್ಯಾಂಕ್‌ ಪ್ರಾರಂಭಿಸಿ ಒಂದು ವರ್ಷ ಕಳೆದರೂ ಮುಕ್ತಾಯ ಹಂತಕ್ಕೆ ಬಂದಿಲ್ಲ. ಕಾಮಗಾರಿಯ ಅಂದಾಜು ಪಟ್ಟಿಯಲ್ಲಿ ತೆರೆದ ಬಾವಿಗೆ ಅನು ದಾನ ಇದ್ದರೂ ಮಳೆಗಾ ಲದ ನೆಪವೊಡ್ಡಿ ಅದನ್ನು ಮಾಡದೆ ಕೊಳವೆ ಬಾವಿ ಮಾಡಿ ಮುಗಿಸುವ ಚಿತಾವಣೆ ನಡೆದಿದೆ ಎಂಬ ಆರೋಪವಿದೆ.

ಗ್ರಾಮಸ್ಥರು ಈ ಬಗ್ಗೆ ಎರಡು ಸಲ ಗ್ರಾಮ ಸಭೆಯಲ್ಲಿ ಈಗಾಗಲೇ ಆಗಿರುವ ಕಾಮಗಾರಿ ಕಳಪೆಯಾಗಿದೆ. ನಮಗೆ ಕೊಳವೆ ಬಾವಿ ಬೇಡ ಈಗಾಗಲೇ 4 ಕೊಳವೆ ಬಾವಿ ನೀರು ಇಲ್ಲದೆ ಮುಚ್ಚಿವೆ. ಹಾಗಾಗಿ ನಮಗೆ ತೆರೆದ ಬಾವಿ ಬೇಕು ಎಂದು ಆಗ್ರಹಿಸಿದ್ದರು. ಕಾಮಗಾರಿಯ ಉಸ್ತುವಾರಿಯನ್ನು ನೋಡ ಬೇಕಾದ ಜಿ.ಪಂ., ನೀರು ಸರಬ ರಾಜು ಇಲಾಖೆಯ ಎಂಜಿನಿಯರ್‌ಗಳು ಕಾಮಗಾರಿಯನ್ನು ಇಷ್ಟರವರೆಗೆ ಪರಿಶೀಲನೆ ಮಾಡಿಲ್ಲ. ಅಕ್ಟೋಬರ್‌ ತಿಂಗಳೊಳಗೆ ಕಾಮಗಾರಿಯನ್ನು ಗ್ರಾ.ಪಂ.ಗೆ ಹಸ್ತಾಂತರ ಮಾಡಲಾಗುತ್ತದೆ. ಇದಕ್ಕೆ ಗ್ರಾಮಸ್ಥರ, ಗ್ರಾ.ಪಂ. ವಿರೋಧವಿದ್ದು, ಅಗತ್ಯವೆನಿಸಿದರೆ ಲೋಕಾಯುಕ್ತಕ್ಕೂ ದೂರು ಸಲ್ಲಿಸಲು ಪಂಚಾಯತ್‌ ಚಿಂತನೆ ನಡೆಸಿದೆ.

ಕ್ರಮದ ಎಚ್ಚರಿಕೆ: ಕಾಮಗಾರಿಯಲ್ಲಿನ ಗುಣ ಮಟ್ಟದ ಬಗ್ಗೆ ಶಾಸಕ ಉಮಾನಾಥ ಕೋಟ್ಯಾನ್‌ ಅವರಿಗೆ ತಿಳಿಸಿದ್ದೇವೆ. ಅವರು ಕೂಡ ಕಳಪೆ ಕಾಮಗಾರಿ ಯಾಗಿದ್ದರೆ ಕ್ರಮ ಜರಗಿಸುವ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಕಾಮಗಾರಿ ಸರಿಯಾಗದೆ ಸುಪರ್ದಿಗೆ ನಾವು ತೆಗೆದುಕೊಳ್ಳುವುದಿಲ್ಲ. ಸರಕಾರದ ಅನುದಾನ ಪೋಲಾಗಲು ಬಿಡುವುದಿಲ್ಲ. –ಯಶೋದಾ ಬಿ., ಅಧ್ಯಕ್ಷರು, ಚೇಳ್ಯಾರು ಗ್ರಾ.ಪಂ.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.