ರಸ್ತೆ ಅಪಘಾತ: ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ; ಮಾನವೀಯತೆ ಮೆರೆದ ಕೋಟಾ ಶ್ರೀನಿವಾಸ್ ಪೂಜಾರಿ
Team Udayavani, Jun 23, 2021, 3:09 PM IST
ಮಂಗಳೂರು: ಸ್ಕೂಟರ್ ನಿಯಂತ್ರಣಕ್ಕೆ ಸಿಗದೇ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ಗೂಡ್ಸ್ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಮುಲ್ಕಿ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡ ಘಟನೆ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ.
ಇಂದು ಮಧ್ಯಾಹ್ನ 12.20ರ ಸಮಯಕ್ಕೆ ರೇಣುಕಾ ಎಂಬವರು ಠಾಣೆಯಿಂದ ತಮ್ಮ ಹೊಂಡಾ ಆ್ಯಕ್ಟೀವಾ ವಾಹನದಲ್ಲಿ ಊಟಕ್ಕೆ ಮನೆಗೆ ಹೋಗುತ್ತಿರುವಾಗ ಈ ಅಪಘಾತವಾಗಿದೆ. ಸ್ಕೂಟರ್ ನಿಯಂತ್ರಣಕ್ಕೆ ಸಿಗದೇ ಇದ್ದುದರಿಂದ ವಿಜಯ ಸನ್ನಿಧಿ ಜಂಕ್ಷನ್ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿದೆ.
ಪರಿಣಾಮವಾಗಿ ರೇಣುಕಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಅದೇ ದಾರಿಯಲ್ಲಿ ಸಾಗುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಮ್ಮ ಕಾರ್ ನಲ್ಲಿ ಮುಲ್ಕಿ ಸೈಂಟ್ ಆನ್ಸ್ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ