ಹಿರಿಯ ವಿದ್ವಾಂಸ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ನಿಧನ
Team Udayavani, Sep 24, 2020, 12:12 PM IST
ಉಳ್ಳಾಲ: ಹಿರಿಯ ವಿದ್ವಾಂಸ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಖಾಝಿ, ನರಿಂಗಾನ ಗ್ರಾಮದ ಪೂಡಲ್ ನಿವಾಸಿ ಅಲ್ಹಾಜ್ ಪಿ.ಎಂ. ಇಬ್ರಾಹೀಂ ಮುಸ್ಲಿಯಾರ್ ಬೇಕಲ್ (71) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸುನ್ನಿ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿದ್ದ ಬೇಕಲ್ ಉಸ್ತಾದ್ ಅವರು ಜಾಮಿಯಾ ಸಅದಿಯಾ ಅರಬಿಯಾ ಶರೀಅತ್ ಕಾಲೇಜಿನ ಪ್ರಾಚಾರ್ಯರು, ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರ ಸದಸ್ಯರಾಗಿ ಅಲ್ ಅನ್ಸಾರ್ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಇದನ್ನೂ ಓದಿ:ಮಗ ಬಂದೇ ಬರುತ್ತಾನೆ.. ಮಗನನ್ನು ಕಳೆದುಕೊಂಡ ಸುರೇಶ್ ಅಂಗಡಿ ತಾಯಿಯ ರೋದನೆ
ದೇವಬಂದ್ ಅರಬಿಕ್ ಕಾಲೇಜಿನಿಂದ ಪದವಿ ಪಡೆದಿದ್ದ ಅವರು, ಸೂರಿಂಜೆ ಮತ್ತು ಬಂಟ್ವಾಳದ ಮಸೀದಿಗಳಲ್ಲಿ ತಲಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ಸುದೀರ್ಘ 43 ವರ್ಷಗಳಿಂದ ಬೇಕಲದಲ್ಲಿ ಮುದರ್ರಿಸ್ ಆಗಿ ಸೇವೆ ಸಲ್ಲಿಸುವ ಮೂಲಕ ‘ಬೇಕಲ್ ಉಸ್ತಾದ್’ಎಂದೇ ಜನಪ್ರಿಯರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು