ಕರಾವಳಿಯ “ಪ್ರತ್ಯೇಕ ಮರಳು ನೀತಿ’ಗೆ ಎಳ್ಳುನೀರು!

ಸಾಂಪ್ರದಾಯಿಕ ಮರಳುಗಾರಿಕೆಗೆ ಪೂರಕವಾಗಿ ನಿಯಮ ಸರಳಗೊಳಿಸಿದ್ದೇ ಕಾರಣ

Team Udayavani, Feb 20, 2023, 8:15 AM IST

ಕರಾವಳಿಯ “ಪ್ರತ್ಯೇಕ ಮರಳು ನೀತಿ’ಗೆ ಎಳ್ಳುನೀರು!

ಮಂಗಳೂರು: ಕರಾವಳಿ ಜಿಲ್ಲೆಗಳ ಮರಳುಗಾರಿಕೆ ನಿಯಮಗಳಲ್ಲಿ ಕೆಲವನ್ನು ಸರಳಗೊಳಿಸಲಾಗಿದ್ದು, ಇದರಿಂದಾಗಿ ಸರಕಾರವು ಕರಾವಳಿಗೆ ಪ್ರತ್ಯೇಕ ಮರಳು ನೀತಿ ಅನುಷ್ಠಾನವನ್ನು ಕೈಬಿಟ್ಟಿದೆ.

ಕರಾವಳಿಯಲ್ಲಿ ಸಾಂಪ್ರದಾಯಿ ಕವಾಗಿ ಮರಳು ತೆಗೆಯುವ ವ್ಯಕ್ತಿ/ಸಮುದಾಯದವರಿಗೆ ಮರಳು ಗಣಿಗಾರಿಕೆ/ಮರಳು ದಿಬ್ಬ ತೆರವುಗೊಳಿಸಲು ಹೆಚ್ಚಿನ ಅವಕಾಶ ನೀಡಲಾಗಿದೆ. ಆದ್ದರಿಂದ ಪ್ರತ್ಯೇಕ ಮರಳು ನೀತಿ ಜಾರಿ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಗಣಿ ಖಾತೆ ಸಚಿವ ಹಾಲಪ್ಪ ಆಚಾರ್‌ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಉಪಖನಿಜ ರಿಯಾಯಿತಿ ನಿಯಮ ತಿದ್ದುಪಡಿ
ಕರಾವಳಿಯಲ್ಲಿ ಮರಳುಗಾರಿಕೆ ನಿಯಮಗಳನ್ನು ಸರಳಗೊಳಿಸುವ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಸಚಿವರ ಅಧ್ಯಕ್ಷತೆಯಲ್ಲಿ ಕರಾವಳಿ ಜಿಲ್ಲೆಗಳ ಸಚಿವರು ಹಾಗೂ ಶಾಸಕರೊಂದಿಗೆ 2021ರ ಸೆ. 16ರಂದು ಸಭೆ ನಡೆಸಲಾಗಿತ್ತು. ಅದೇ ವರ್ಷ ಡಿ. 1ರಂದು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮ 1994ಕ್ಕೆ ತಿದ್ದುಪಡಿ ತಂದು ಜಾರಿಗೊಳಿಸಲಾಗಿದೆ. ಇದರಲ್ಲಿ ಕರಾವಳಿ ನಿಯಂತ್ರಣ ವಲಯ ಹೊರತುಪಡಿಸಿದ (ನಾನ್‌ ಸಿಆರ್‌ಝಡ್‌) ಉನ್ನತ ಶ್ರೇಣಿಯ ಹಳ್ಳ/ನದಿ ಪಾತ್ರಗಳ ವ್ಯಾಪ್ತಿಯಲ್ಲಿ ಗುರುತಿಸುವ ಮರಳು ಬ್ಲಾಕ್‌ಗಳನ್ನು ಜಿಲ್ಲೆಯ ಸಾಂಪ್ರದಾಯಿಕ ಮರಳು ತೆಗೆಯುವ ಸಮುದಾಯದವರಿಗೆ ಮಾತ್ರ ಟೆಂಡರ್‌/ಹರಾಜು ಮೂಲಕ ಗುತ್ತಿಗೆ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದೆ. ಕಳೆದ ಡಿ. 14ರಂದು ಸರಕಾರದಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ.

ನಿರಾಸಕ್ತಿ ಯಾಕೆ ?
ಕರಾವಳಿ ನಿಯಂತ್ರಣ ವಲಯ(ಸಿಆರ್‌ಝಡ್‌)ದಲ್ಲಿ ಮರಳು ದಿಬ್ಬ ತೆರವಿಗೆ ಸಾಂಪ್ರದಾಯಿಕವಾಗಿ ಮರಳು ತೆಗೆಯುವ ವ್ಯಕ್ತಿ/ಸಮುದಾಯದವರನ್ನು ಗುರುತಿಸುವ ಸಂಬಂಧ 2022ರ ಜ. 11ರಂದು ಏಕರೂಪದ ಮಾರ್ಗಸೂಚಿ ಹೊರಡಿಸಲಾಗಿದೆ. ಇಷ್ಟು ಸರಳಗೊಳಿಸಿರುವುದರಿಂದ ಹೊಸ ನೀತಿ ಅಗತ್ಯವಿಲ್ಲ ಎಂಬುದು ಸರಕಾರದ ಲೆಕ್ಕಾಚಾರ.

ಗಣಿ ಇಲಾಖೆಯ ದ.ಕ. ಉಪ ನಿರ್ದೇಶಕ ಲಿಂಗರಾಜು “ಉದಯವಾಣಿ’ ಜತೆಗೆ ಮಾತನಾಡಿ, “ಈಗಾಗಲೇ ಜಾರಿಗೊಳಿಸಲಾದ ಉಪಖನಿಜ ರಿಯಾಯಿತಿ ನಿಯಮವನ್ನು 2021ರಲ್ಲಿ ತಿದ್ದುಪಡಿಯೊಂದಿಗೆ ಜಾರಿಗೊಳಿಸಲಾಗಿದೆ. ಇದರಂತೆ ಬೇರೆ ಜಿಲ್ಲೆಗಳಲ್ಲಿ ಸರಕಾರದ ಸಂಸ್ಥೆಗಳಿಗೆ ಹರಾಜು/ಟೆಂಡರ್‌ ಜವಾಬ್ದಾರಿ ಇದ್ದರೆ, ಕರಾವಳಿ ಭಾಗಕ್ಕೆ ಮಾತ್ರ ಜಿಲ್ಲೆಯ ಸಾಂಪ್ರದಾಯಿಕ ಕಾರ್ಮಿಕರೇ ಭಾಗವಹಿಸಲು ತಿದ್ದುಪಡಿ ನಿಯಮದಲ್ಲಿ ಅವಕಾಶ ನೀಡಲಾಗಿದೆ. ಈ ಕಾರಣದಿಂದ ಇದು ಪ್ರತ್ಯೇಕ ನೀತಿಯೇ ಆಗಿರುತ್ತದೆ’ ಎನ್ನುತ್ತಾರೆ.

“ಕರಡು ನೀತಿ’ಯೂ ಸಿದ್ಧ ಎಂದಿದ್ದರು!
“ಕರಾವಳಿಗೆ ಪ್ರತ್ಯೇಕ ಗಣಿ ನೀತಿಯ ಕರಡು ಸಿದ್ಧಗೊಂಡಿದ್ದು, ಜನಪ್ರತಿನಿಧಿಗಳು ಮತ್ತು ಪ್ರಮುಖರ ಜತೆಗೆ ಚರ್ಚಿಸಿ ತಿಂಗಳೊಳಗೆ ಜಾರಿ ಗೊಳಿಸಲು ಕ್ರಮ ಕೈಗೊಳ್ಳ ಲಾಗುವುದು’ ಎಂದು 2021ರಲ್ಲಿ ಗಣಿ ಸಚಿವ ಮುರುಗೇಶ್‌ ನಿರಾಣಿ ಮಂಗಳೂರಿನಲ್ಲಿ ಹೇಳಿದ್ದರು.

ಕರಾವಳಿಗೆ ಪ್ರತ್ಯೇಕ ಮರಳು ನೀತಿ ಜಾರಿ ಸಂಬಂಧ ನಿಯಮಾವಳಿ ರೂಪಿಸಲು ಬಾಕಿ ಇದೆ. ಸರಕಾರದ ಮಟ್ಟದಲ್ಲಿ ಇದು ಅಂತಿಮವಾಗಬೇಕಿದೆ. ಇಲ್ಲಿಯವರೆಗೆ ಹೊಸ ನೀತಿ ಜಾರಿಗೆ ಬಂದಿಲ್ಲ.
– ರವಿಕುಮಾರ್‌ ಎಂ.ಆರ್‌., ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Share Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ಜಿಗಿತ; ಲಾಭ ಗಳಿಸಿದ ಷೇರು ಯಾವುದು?

Share Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ಜಿಗಿತ; ಲಾಭ ಗಳಿಸಿದ ಷೇರು ಯಾವುದು?

7-chitradurga

ಒತ್ತಡಕ್ಕೆ ಮಣಿಯದೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಾಗಲಿ; ಬಿ.ವೈ.ವಿಜಯೇಂದ್ರ

On Camera: ರಿವರ್ಸ್‌ ಅವಾಂತರ-ಗೆಳೆಯನ ಕಣ್ಣೆದುರೇ ಕಾರು ಕಂದಕಕ್ಕೆ ಬಿದ್ದು ಗೆಳತಿ ಸಾವು

On Camera: ರಿವರ್ಸ್‌ ಅವಾಂತರ-ಗೆಳೆಯನ ಕಣ್ಣೆದುರೇ ಕಾರು ಕಂದಕಕ್ಕೆ ಬಿದ್ದು ಗೆಳತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

mಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ; ಮಸೀದಿಗಳಲ್ಲಿ ಪ್ರಾರ್ಥನೆ

ಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

MUST WATCH

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

ಹೊಸ ಸೇರ್ಪಡೆ

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

9-bellary

Ballari: ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.