ಡಿ ಕೆ ಶಿವಕುಮಾರ್ ಗೆ ಜನ ಬೆಂಬಲವಿಲ್ಲ,ಕಾರ್ಯಕರ್ತರ ಬೆಂಬಲವೂ ಇಲ್ಲ: ಶೋಭಾ ಕರಂದ್ಲಾಜೆ
Team Udayavani, Jan 9, 2021, 1:55 PM IST
ಮಂಗಳೂರು: ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಕಾಂಗ್ರೆಸ್ ಎಲ್ಲಾ ಚುನಾವಣೆಯಲ್ಲಿ ಸೋಲು ಕಂಡಿದೆ. ಇದರಿಂದ ವಿಚಲಿತರಾಗಿರುವ ಅವರು ರಾಜ್ಯ ಸರಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಅವರಿಗೆ ಜನ ಬೆಂಬಲವಿಲ್ಲ,ಕಾರ್ಯಕರ್ತರ ಬೆಂಬಲವೂ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಇದರಿಂದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ, ಆತಂಕಗೊಂಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಂದ ಕಾಂಗ್ರೆಸ್ ವಿಚಲಿತಗೊಂಡಿದೆ ಎಂದು ಟೀಕಿಸಿದರು.
ಬಿಜೆಪಿಯ ಸಂಘಟನಾತ್ಮಕ ಕಾರ್ಯತಂತ್ರಗಳನ್ನೇ ಡಿಕೆಶಿ ಅನುಸರಿಸುತ್ತಿದ್ದಾರೆ. ಆದರೆ ಸ್ವತಃ ಸಿದ್ದರಾಮಯ್ಯನವರೇ ಡಿಕೆಶಿಯವರ ಕಾರ್ಯಶೈಲಿಯನ್ನು ಒಪ್ಪುತ್ತಿಲ್ಲ. ಇದನ್ನು ಮುಚ್ಚಿಕೊಳ್ಳಲು ಬಿಜೆಪಿ ಸರ್ಕಾರ, ಮುಖ್ಯಮಂತ್ರಿ, ಪ್ರಧಾನ ಮಂತ್ರಿಗಳ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಜನರು ಜಾಗ್ರತರಾಗಿದ್ದಾರೆ. ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂದು ಉಡುಪು- ಚಿಕ್ಕಮಗಳೂರು ಸಂಸದೆ ಹೇಳಿದರು.
ಇದನ್ನೂ ಓದಿ:ಕಮಿಷನ್ ಸರಕಾರ ಎಂಬ ಡಿಕೆಶಿ ಹೇಳಿಕೆಗೆ ಎಸ್.ಟಿ. ಸೋಮಶೇಖರ್ ತಿರುಗೇಟು.
ಸಿದ್ದರಾಮಯ್ಯ ವಿಚಾರವಾದಿ ನಾಯಕ ಇರಬಹುದು. ಆದರೆ ಅವರು ಕೊಡವರ ಮತ್ತು ಹಿಂದುಗಳ ಭಾವನೆಗೆ ಧಕ್ಕೆ ಮಾಡುತ್ತಿದ್ದಾರೆ. ಕೊಡವರು ಗೋಮಾಂಸ ತಿಂತಾರೆ ಅಂತ ಅವರು ಹೇಳುತ್ತಾರೆ. ಒಂದು ಜನಾಂಗದ ಓಲೈಕೆಗೆ ಸಿದ್ದರಾಮಯ್ಯ ಭಾವನೆಗೆ ಧಕ್ಕೆ ತರುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೀದರ್ ನ ಏಳು ಜನರ ದುರ್ಮರಣ
ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ ನಾಯಕರ ಭೇಟಿಯಾದ ಜೆಡಿಎಸ್ ನ ಕುಪೇಂದ್ರ ರೆಡ್ಡಿ
ದಲಿತ ಸಿಎಂ ವಿಚಾರ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ಅವಕಾಶವಿದೆ ಎಂದ ಪರಮೇಶ್ವರ್
ಇಂದು ಸಂಜೆಯೊಳಗೆ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಅಂತಿಮ: ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಶಾಸಕ ಜಿ.ಟಿ ದೇವೇಗೌಡ