ದಕ್ಷಿಣ ಕನ್ನಡದಲ್ಲಿ ಆರು ಹೊಸ ಸೋಂಕು ದೃಢ: ಯುಎಇ ಪ್ರಯಾಣಿಕರಲ್ಲಿ ಸೋಂಕು ಪತ್ತೆ
Team Udayavani, May 21, 2020, 1:57 PM IST
ಮಂಗಳೂರು: ಬಂದರು ನಗರಿ ಮಂಗಳೂರಿನಲ್ಲಿ ಇಂದು ಮತ್ತೆ ಆರು ಹೊಸ ಕೋವಿಡ್-19 ಪ್ರಕರಣಗಳು ದೃಢವಾಗಿದೆ. ಎಲ್ಲರೂ ಯುಎಇ ನಿಂದ ಬಂದ ಅಂತಾರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.
ಇಂದಿನ ಎಲ್ಲಾ ಆರು ಸೋಂಕಿತರು ಪುರುಷರಾಗಿದ್ದು, ಯುಎಇ ದೇಶದಿಂದ ಬಂದು ಕ್ವಾರಂಟೈನ್ ನಲ್ಲಿದ್ದರು. ಇವರಿಗೆ ಕೋವಿಡ್ 19 ಸೋಂಕು ಕಂಡು ಬಂದ ಹಿನ್ನಲೆ ಇವರ ಜೊತೆ ಪ್ರಯಾಣಿಸಿದ ಇತರರ ಮೇಲೆ ನಿಗಾ ಇರಿಸಲಾಗಿದೆ.
ಇಂದಿನ ಆರು ಪ್ರಯಾಣಿಕರ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ನೆರೆಯ ಉಡುಪಿ ಜಿಲ್ಲೆಯಲ್ಲಿ ಇಂದು 27 ಹೊಸ ಪ್ರಕರಣಗಳು ದೃಢವಾಗಿದೆ.
ರಾಜ್ಯದಲ್ಲಿ ಇಂದು ಒಟ್ಟು 116 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1578ಕ್ಕೆ ಏರಿದೆ. ಇದರಲ್ಲಿ 41 ಜನರು ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಓರ್ವ ಸೋಂಕಿತ ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ