ಉಳ್ಳಾಲ ಠಾಣೆಯಲ್ಲಿ ಮುಂದುವರಿದ ಕೋವಿಡ್ ಆರ್ಭಟ: ಮತ್ತೆ ಆರು ಸಿಬ್ಬಂದಿಗೆ ಸೋಂಕು
Team Udayavani, Jun 29, 2020, 1:43 PM IST
ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಸೋಂಕಿನ ಆರ್ಭಟ ಮತ್ತೆ ಮುಂದುವರಿದಿದೆ. ಈ ಮೊದಲು ಆರು ಮಂದಿಗೆ ಸೋಂಕು ದೃಢವಾಗಿದ್ದರೆ, ಇಂದು ಮತ್ತೆ ಆರು ಜನರ ದೇಹಕ್ಕೆ ಕೋವಿಡ್ -19 ಸೋಂಕು ಲಗ್ಗೆಯಿಟ್ಟಿದೆ.
ಇಂದು ಠಾಣೆಯ ಓರ್ವ ಹೋಂ ಗಾರ್ಡ್ ಮತ್ತು ಐವರು ಪೊಲೀಸ್ ಸಿಬ್ಬಂದಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ಠಾಣೆಯ ಹತ್ತು ಆರಕ್ಷಕರು ಮತ್ತು ಇಬ್ಬರು ಆರೋಪಿಗಳಿಗೆ ಕೋವಿಡ್ ಸೋಂಕು ದೃಢವಾಗಿದೆ.
ಈ ಹಿಂದೆ ಠಾಣೆಯ ಎಸ್ ಐ, ಎಎಸ್ ಐ, ಇಬ್ಬರು ಡ್ರೈವರ್ ಗಳು ಮತ್ತು ಠಾಣೆಯಲ್ಲಿದ್ದ ಇಬ್ಬರು ಆರೋಪಿಗಳಿಗೆ ಕೋವಿಡ್-19 ಸೋಂಕು ತಾಗಿತ್ತು. ಸದ್ಯ ಠಾಣೆಯನ್ನು ಭಾಗಶಃ ಸೀಲ್ ಡೌನ್ ಮಾಡಲಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಸೋಂಕು: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಕಾರಣದಿಂದ ದಾಖಲಾಗಿದ್ದ ಎಂಟು ಮಂದಿಯಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದೆ ಎನ್ನಲಾಗಿದೆ.
ಉಳ್ಳಾಲ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಮಹಾಮಾರಿ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇದುವರೆಗೆ ಕ್ಷೇತ್ರದಲ್ಲಿ 47 ಜನರಿಗೆ ಕೋವಿಡ್ -19 ಸೋಂಕು ದೃಢವಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇಂದು ಮುಂಜಾನೆ 60 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ
ಚಳ್ಳಕೆರೆಯಲ್ಲಿ ಹನ್ಸ-ಎನ್ಜಿ ಯಶಸ್ವಿ ಪ್ರಯೋಗ; ಸಿಎಸ್ಐಆರ್, ಎನ್ಎಎಲ್ನಿಂದ ವಿಮಾನ ಸಿದ್ಧ
ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ
ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
ಮುಚ್ಚಿದ ಬಾಗಿಲಿನ ಹಿಂದೆ ಆರ್ಸಿಬಿ: ಗುಜರಾತ್ ಟೈಟಾನ್ಸ್ ವಿರುದ್ಧ ಇಂದು ಅಂತಿಮ ಪಂದ್ಯ