ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಂಕ್ರೀಟ್‌ ರಸ್ತೆ ಕಾಮಗಾರಿಗೆ ವೇಗ

26 ಕೋ. ರೂ. ವೆಚ್ಚದಲ್ಲಿ ಅಭಿವೃದ್ಧಿ ‌

Team Udayavani, Mar 25, 2022, 12:39 PM IST

road

ಪಡೀಲ್‌: ನಗರಕ್ಕೆ ಪ್ರವೇಶ ಕಲ್ಪಿಸುವ ಮಹತ್ವದ ಪಡೀಲ್‌-ಪಂಪ್‌ವೆಲ್‌ ಮಧ್ಯೆ 2.8 ಕಿ.ಮೀ. ಚತುಷ್ಪಥ ಕಾಂಕ್ರೀಟ್‌ ರಸ್ತೆ ನಿರ್ಮಾಣದ ಮೊದಲನೇ ಹಂತದ ಕಾಮಗಾರಿ ಈಗಾಗಲೇ ಆರಂಭಗೊಂಡಿದೆ.

ಸುಮಾರು 26 ಕೋ. ರೂ. ವೆಚ್ಚದಲ್ಲಿ ಸ್ಮಾರ್ಟ್‌ಸಿಟಿಯಡಿಯಲ್ಲಿ ಸ್ಮಾರ್ಟ್‌ ರಸ್ತೆ ಪ್ಯಾಕೇಜ್‌-5ರಲ್ಲಿ ಚತುಷ್ಪತ ರಸ್ತೆಯಾಗಿ ಅಭಿವೃದ್ಧಿಗೊಳ್ಳುತ್ತಿದೆ. ಪಡೀಲ್‌ನಿಂದ ರಸ್ತೆ ವಿಸ್ತರಣೆ ಕಾಮಗಾರಿ ಈಗಾಗಲೇ ಆರಂಭಗೊಂಡಿದೆ.

ಜೆಸಿಬಿ ಮುಖೇನ ಅಭಿವೃದ್ಧಿ ಕಾಮಗಾರಿ ಆರಂಭಗೊಂಡಿದೆ. ಈ ರಸ್ತೆ ಸದ್ಯ ಡಾಮರು ಅಳವಡಿಸಿದ್ದು, 10 ಮೀ. ವಿಸ್ತೀರ್ಣವನ್ನು ಹೊಂದಿದೆ. ಇದೀಗ ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಕಾಂಕ್ರೀಟ್‌ ರಸ್ತೆಯಾಗಿ ಪರಿವರ್ತನೆಯಾಗಲಿದೆ. ಸುಮಾರು 2.8 ಕಿ.ಮೀ. ರಸ್ತೆ ಇದಾಗಿದ್ದು, ಅಡಿಯಲ್ಲಿ 24 ಮೀ. ವಿಸ್ತೀರ್ಣದ ಚತುಷ್ಪಥ ಕಾಂಕ್ರೀಟ್‌ ರಸ್ತೆಯಾಗಿ ಪರಿವರ್ತನೆಯಾಗಲಿದೆ.

ಇದರಲ್ಲಿ 3.50 ಮೀ. ವಿಸ್ತೀರ್ಣದ 4 ಲೇನ್‌ ಕಾಂಕ್ರೀಟ್‌ ವೇ, ರಸ್ತೆ ಇಕ್ಕೆಲದಲ್ಲಿ 3 ಮೀ. ವಿಸ್ತೀರ್ಣಕ್ಕೆ ಇಂಟರ್‌ಲಾಕ್‌ ಅಳವಡಿಸಲಾಗುತ್ತದೆ. ರಸ್ತೆ ಇಕ್ಕೆಲದಲ್ಲಿ ಫುಟ್‌ಪಾತ್‌, ಚರಂಡಿ, ಯುಟಿಲಿಟಿ ಡಕ್ಟ್, ರಸ್ತೆ ಮಧ್ಯೆ ಮೀಡಿಯನ್‌ ಜತೆಗೆ ದಾರಿ ದೀಪ ವ್ಯವಸ್ಥೆ ಇರುತ್ತದೆ. ಯೋಜನ ವೆಚ್ಚ 26 ಕೋ.ರೂ. ಆಗಿದ್ದು, ರಾಜ್ಯ ಸರಕಾರ ಪೂರಕ ಕೆಲಸಗಳಿಗಾಗಿ 4 ಕೋ.ರೂ. ಒದಗಿಸಲಿದೆ. ಪಡೀಲ್‌-ಪಂಪ್‌ವೆಲ್‌ ರಸ್ತೆ ಕಾಂಕ್ರೀಟ್‌ ಕಾಮಗಾರಿ ನಡೆ ದರೆ ಪಂಪ್‌ವೆಲ್‌ನಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ಬಸ್‌ ಟರ್ಮಿನಲ್‌ಗೆ ಹೆಚ್ಚು ಅನುಕೂಲವಾಗಲಿದೆ.

ಜತೆಗೆ, ಪಡೀಲ್‌ನಲ್ಲಿ ಹೊಸದಾಗಿ ದ.ಕ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣವಾಗುತ್ತಿರುವ ಕಾರಣದಿಂದ ಮುಂಬರುವ ದಿನಗಳಲ್ಲಿ ಈ ರಸ್ತೆಯಲ್ಲಿ ವಾಹನಗಳ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಹೀಗಾಗಿ ಹೊಸ ಕಾಂಕ್ರೀಟ್‌ ರಸ್ತೆಯಾದರೆ ಪ್ರಯಾಣಿಕರಿಗೆ ನೆರವಾಗಬಹುದು. ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೂ ಇದರಿಂದ ಸಹಾಯವಾಗಲಿದೆ. ಮಂಗಳೂರು, ತಲಪಾಡಿ, ಬೆಂಗಳೂರು, ಬಿ.ಸಿ.ರೋಡ್‌ ಭಾಗದಿಂದ ಪಡೀಲ್‌ ರಸ್ತೆಯಲ್ಲಿ ಬರುವ ವಾಹನದವರಿಗೆ ಹೆಚ್ಚು ಅನುಕೂಲವಾಗಲಿದೆ.

ಸ್ಮಾರ್ಟ್‌ಸಿಟಿ ಯೋಜನೆಯಡಿ ಅಭಿವೃದ್ಧಿ

ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಪಡೀಲ್‌ -ಪಂಪ್‌ವೆಲ್‌ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಚತುಷ್ಪಥ ಕಾಂಕ್ರೀಟ್‌ ರಸ್ತೆ ಕಾಮಗಾರಿ ಈಗಾಗಲೇ ಆರಂಭಗೊಂಡಿದೆ. ರಸ್ತೆ ವಿಸ್ತರಣೆಗೆ ಕೆಲವೊಂದು ಕಡೆಗಳಲ್ಲಿ ತೊಡಕುಗಳಿದ್ದು, ಅದನ್ನು ಬಗೆಹರಿಸಿ ಕಾಮಗಾರಿಗೆ ವೇಗ ನೀಡಲಾಗುತ್ತಿದೆ. -ಡಿ. ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.