Udayavni Special

ದೇಹದ ಸೌಂದರ್ಯಕ್ಕೆ ಕುಸ್ತಿ ಕೌಶಲ ಪೂರಕ: ಉಮಾನಾಥ ಕೋಟ್ಯಾನ್‌


Team Udayavani, Dec 23, 2018, 1:06 PM IST

23-december-12.gif

ಸಸಿಹಿತ್ಲು: ಉತ್ತಮವಾದ ದೇಹ ಸೌಂದರ್ಯಕ್ಕೆ ಕುಸ್ತಿ ಕೌಶಲ ಪೂರಕವಾಗಿದೆ. ಸ್ಪರ್ಧೆಯಲ್ಲಿ ಸಿಕ್ಕ ಸೋಲನ್ನು ಮುಂದಿನ ಸ್ಪರ್ಧೆಯಲ್ಲಿ ಗೆಲುವಾಗಿ ಪರಿವರ್ತಿಸಿಕೊಂಡಲ್ಲಿ ಮಾತ್ರ ಆತ ಯಶಸ್ವಿ ಕ್ರೀಡಾ ಪಟುವಾಗಿ ಮಿಂಚುತ್ತಾನೆ ಎಂದು ಶಾಸಕ ಉಮಾನಾಥ ಕೋಟ್ಯಾನ್‌ ಹೇಳಿದರು.

ಸಸಿಹಿತ್ಲು ಬೀಚ್‌ ಪ್ರದೇಶದಲ್ಲಿ ಶ್ರೀ ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ಸಂಯೋಜನೆಯಲ್ಲಿ ಎರಡು ದಿನಗಳಲ್ಲಿ ನಡೆಯುವ ರಾಜ್ಯ ಮತ್ತು ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿ, ಕುಸ್ತಿ ಪಂದ್ಯಾಟ ಕೇವಲ ಒಂದು ಸ್ಪರ್ಧೆಯಾಗಿರದೇ, ನಮ್ಮ ದೇಹ, ಮನೋಬಲ ಹೆಚ್ಚಿಸಲು ಪರಿಣಾಮಕಾರಿಯಾಗಿದೆ. ಗ್ರಾಮೀಣ ಭಾಗದ ಶಕ್ತಿವಂತರಿಗೆ ಅಂತಾರಾಷ್ಟ್ರೀಯವಾಗಿ ಬೆಳೆಯಲು ಕುಸ್ತಿ ಪಂದ್ಯಾಟ ಸಹಕಾರಿಯಾಗಿದೆ ಎಂದರು. ಕಡಲಿನ ಪಕ್ಕದಲ್ಲಿಯೇ ಬೃಹತ್‌ ವೇದಿಕೆ ಯನ್ನು ನಿರ್ಮಿಸಿ ಕುಸ್ತಿ ಪಂದ್ಯಾಟವನ್ನು ಸಂಯೋಜಿಸ ಲಾಗಿದೆ. ಕರ್ನಾಟಕ ಕುಸ್ತಿ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕುಸ್ತಿ ಸಂಘದ ಜಂಟಿ ಸಹಕಾರದಲ್ಲಿ ಕುಸ್ತಿ ಪಂದ್ಯಾಟ ನಡೆಯುತ್ತಿದೆ.

ಮುಂಬಯಿ ಬಿಲ್ಲವರ ಅಸೋಸಿಯೇಶನ್‌ನ ಅಧ್ಯಕ್ಷ ಚಂದ್ರಶೇಖರ್‌ ಎಸ್‌.  ಪೂಜಾರಿ, ಬಳ್ಳಾರಿ ಬಂಟರ ಸಂಘದ ಅಧ್ಯಕ್ಷ ಸುರೇಶ್‌ ಶೆಟ್ಟಿ ಗುರ್ಮೆ, ಸಮಾಜ ಸೇವಕ ಮಹಾಬಲ ಪೂಜಾರಿ ಕಡಂಬೋಡಿ, ಮಂಗಳೂರಿನ ಮಾಜಿ ಮೇಯರ್‌ ದಿವಾಕರ್‌ ಕದ್ರಿ, ಮಾಜಿ ಸಿಂಡಿಕೇಟ್‌ ಸದಸ್ಯ ಶ್ರೀಕರ ಪ್ರಭು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಸದಸ್ಯ ವಿನೋದ್‌ ಕುಮಾರ್‌ ಬೊಳ್ಳೂರು, ಉಡುಪಿ ಜಿಲ್ಲಾ ಪಂಚಾಯತ್‌ ಸದಸ್ಯ ಶಶಿಕಾಂತ್‌ ಪಡುಬಿದ್ರಿ, ತಾಲೂಕು ಪಂಚಾಯತ್‌ ಸದಸ್ಯ ಜೀವನ್‌ ಪ್ರಕಾಶ್‌ ಕಾಮೆರೊಟ್ಟು, ವಕೀಲರಾದ ಆಶಾ ನಾಯಕ್‌, ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ, ಸಾರಂತಾಯ ಗರೋಡಿಯ ಯಾದವ ಜಿ. ಬಂಗೇರ ಯಾನೆ ಕಾಂತು ಲಕ್ಕಣ್ಣ ಗುರಿಕಾರ, ಜಿಲ್ಲಾ ಕುಸ್ತಿ ಸಂಘದ ಅಧ್ಯಕ್ಷ ಪ್ರಕಾಶ್‌ ವಿ. ಕರ್ಕೇರ, ಕದಿಕೆ ಮೊಗವೀರ ಸಭಾದ ಅಧ್ಯಕ್ಷ ವಾಸುದೇವ ಸಾಲ್ಯಾನ್‌, ಹಳೆಯಂಗಡಿ ಗ್ರಾಮ ಪಂಚಾಯತ್‌ ಸದಸ್ಯರಾದ ಚಿತ್ರಾ ಸುಕೇಶ್‌, ಅಶೋಕ್‌ ಬಂಗೇರ, ವಿನೋದ್‌ಕುಮಾರ್‌ ಕೊಳುವೈಲು, ಶ್ರೀ ಆಂಜನೇಯ ವ್ಯಾಯಾಮ ಶಾಲೆಯ ಗೌರವ ಅಧ್ಯಕ್ಷ ವಿಠಲ ಬಂಗೇರ, ಸ್ಥಾಪಕ ಸದಸ್ಯ ಕೇಶವ ಸಾಲ್ಯಾನ್‌, ಮುಂಬಯಿ ಸಂಚಾಲಕ ಅನಿಲ್‌ ಕುಮಾರ್‌, ಉಪಾಧ್ಯಕ್ಷ ಸಂತೋಷ್‌ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಶ್ರೀ ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ಅಧ್ಯಕ್ಷ ವಿನೋದ್‌ ಕುಮಾರ್‌ ಸ್ವಾಗತಿಸಿ, ಪ್ರಸ್ತಾವಿಸಿ, ಶೋಭೇಂದ್ರ ಸಸಿಹಿತ್ಲು ವಂದಿಸಿದರು, ಸುರೇಶ್‌ಕುಮಾರ್‌ ಸೂರಿಂಜೆ ನಿರೂಪಿಸಿದರು.

ಟಾಪ್ ನ್ಯೂಸ್

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ನಮೀಬಿಯಾ ವಿಜಯ ಸಂಭ್ರಮ

ನಮೀಬಿಯಾ ವಿಜಯ ಸಂಭ್ರಮ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.