“ಕಾನೂನು ಸುವ್ಯವಸ್ಥೆಗೆ ಕಟ್ಟುನಿಟ್ಟಿನ ಕ್ರಮ’


Team Udayavani, Jan 1, 2021, 7:07 AM IST

“ಕಾನೂನು ಸುವ್ಯವಸ್ಥೆಗೆ ಕಟ್ಟುನಿಟ್ಟಿನ ಕ್ರಮ’

ಮಂಗಳೂರು: ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ವಿಶೇಷ ಸಭೆ ನಡೆಯಿತು.

ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಮೂಲಕ ಜಿಲ್ಲೆಯಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳ ಇಳಿಕೆಗೆ ವಿಶೇಷ ಕ್ರಮ ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

ದ.ಕ. ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಕುರಿತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಅಪಹರಣ, ದರೋಡೆ, ಕಳ್ಳತನ, ಚಾಕು ಇರಿತ, ಹತ್ಯೆ ಸೇರಿದಂತೆ ಮತ್ತಿತರ ಪ್ರಕರಣಗಳು ಕಂಡುಬರುತ್ತಿವೆ. ಇವುಗಳಿಗೆ ಕಡಿವಾಣ ಹಾಕಲು ಪೊಲೀಸ್‌ ಅಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದರು.

ನಗರದಲ್ಲಿ ಹಾಡು ಹಗಲೇ ಪೊಲೀಸ್‌ ಸಿಬಂದಿ ಮೇಲೆ ಅಪರಿಚಿತ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿರುವುದು ಅಪರಾಧಿಗಳಿಗೆ ಕಾನೂನಿನ ಭಯ ಇಲ್ಲದಿರುವುದು ಕಂಡು ಬರುತ್ತಿದೆ. ಈ ಪ್ರಕರಣದ ಹಿಂದೆ ಕಾಣದ ಕೈಗಳು ಪ್ರಚೋದಿಸುತ್ತಿರುವುದು ಕಂಡು ಬರುತ್ತಿದೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಸೂಚಿಸಿದರು.

ದೇಶ ವಿರೋಧಿ ಘೋಷಣೆಗಳನ್ನು ಕೂಗುವುದು ಹಾಗೂ ಗೋಡೆ ಬರಹಗಳನ್ನು ಬರೆಯುವಂತಹ ಅಪರಾಧಗಳು ಸೇರಿದಂತೆ ಅವರಿಗೆ ಪ್ರಚೋದನೆ ನೀಡುವಂತಹ ವ್ಯಕ್ತಿಗಳನ್ನು ಹತ್ತಿಕ್ಕಲು ಕಾನೂನು ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ|ರಾಜೆಂದ್ರ ಕೆ.ವಿ ಮಾತನಾಡಿ, ಸಮಾಜದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುವವರು ಸೇರಿದಂತೆ ಪುನರಾವರ್ತಿತ ಅಪರಾಧ ಪ್ರಕರಣಗಳನ್ನು ಮಾಡುವಂತಹ ವ್ಯಕ್ತಿಗಳನ್ನು ಗುರುತಿಸಿ ಅವರಿಂದ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಬೇಕು. ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾದವರು ಕಂಡು ಬಂದರೆ ಗೂಂಡಾ ಪಟ್ಟಿಗೆ ಸೇರಿಸಬೇಕು; ಜತೆಗೆ ಅವರನ್ನು ಜಿಲ್ಲೆಯಿಂದ ಗಡೀಪಾರು ಮಾಡಲು ಕ್ರಮ ವಹಿಸಬೇಕು ಎಂದರು.

ಶಾಸಕ ಡಾ| ವೈ ಭರತ್‌ ಶೆಟ್ಟಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ. ಲಕ್ಷ್ಮೀ ಪ್ರಸಾದ್‌, ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌ ಉಪಸ್ಥಿತರಿದ್ಧರು.

ಹೈವೇ ಪೆಟ್ರೋಲಿಂಗ್‌ ಹೆಚ್ಚಿಸಿ: ನಳಿನ್‌ ಸೂಚನೆ
ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿ, ಸರ್ವಿಸ್‌ ಅಪಾರ್ಟ್‌ ಮೆಂಟ್‌ಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರು ಕೇಳಿಬರುತ್ತಿದೆ. ಇವುಗಳನ್ನು ಪೂರ್ಣ ಪ್ರಮಾಣದಲ್ಲಿ ತಡೆಗಟ್ಟುವ ಕೆಲಸವಾಗಬೇಕು. ಅಲ್ಲದೇ ತಡರಾತ್ರಿ ಖಾಸಗಿ ಸ್ಥಳಗಳಲ್ಲಿ ಅಕ್ರಮವಾಗಿ ಡಿ.ಜೆ. ಪಾರ್ಟಿಗಳು, ಮದ್ಯ ಮಾರಾಟದಂತಹ ಪ್ರಕರಣಗಳು ನಡೆಯುತ್ತಿವೆ. ಇವುಗಳನ್ನು ಸಂಪೂರ್ಣ ಬಂದ್‌ ಮಾಡಬೇಕು. ಅಪರಾಧಿ ಪ್ರಕರಣಗಳನ್ನು ತಗ್ಗಿಸಲು ರಾತ್ರಿ ಗಸ್ತು, ಹೈವೇ ಪೆಟ್ರೋಲಿಂಗ್‌ ಹೆಚ್ಚಿಸಬೇಕು ಎಂದರು.

ಟಾಪ್ ನ್ಯೂಸ್

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

1-d-s-sfsf

ಬೆಂಗಳೂರಿನಲ್ಲಿ ಐಕಿಯ ಸ್ಟೋರ್:ಸಿಇಓ ಜೆಸ್ಪರ್ ಬ್ರಾಡಿನ್ ಜತೆ ಸಿಎಂ ಚರ್ಚೆ

ಲವ್‌ ಬರ್ಡ್ಸ್‌ನಲ್ಲಿ ಲವ್‌ ಮಾಕ್ಟೇಲ್‌ ಜೋಡಿ: ಹೊಸ ಚಿತ್ರದಲ್ಲಿ ಕೃಷ್ಣ-ಮಿಲನಾ

ಲವ್‌ ಬರ್ಡ್ಸ್‌ನಲ್ಲಿ ಲವ್‌ ಮಾಕ್ಟೇಲ್‌ ಜೋಡಿ: ಹೊಸ ಚಿತ್ರದಲ್ಲಿ ಕೃಷ್ಣ-ಮಿಲನಾ

1-fsfdf

ಹೆಚ್ಚುತ್ತಿರುವ ಮಂಕಿ ಪಾಕ್ಸ್ ಸೋಂಕಿನ ಪ್ರಮಾಣ : ಸಲಿಂಗಕಾಮಿಗಳಿಗೆ ಎಚ್ಚರಿಕೆ

1-dfdffds

ಬಿಜೆಪಿ ನಿಷ್ಠಾವಂತನಾದ ನನ್ನ ಸಚಿವ ಸ್ಥಾನ ಭದ್ರ: ಸಚಿವ ಪ್ರಭು ಚವ್ಹಾಣ್

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ 3 ಪಾಕಿಸ್ತಾನಿ ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ 3 ಪಾಕಿಸ್ತಾನಿ ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ

dk shi 2

ಮಸೀದಿ ಕುರಿತು ತಾಂಬೂಲ ಪ್ರಶ್ನೆ; ಬಿಜೆಪಿ ಈ ರಾಜ್ಯವನ್ನು ಕೊಲ್ಲುತ್ತಿದೆ :ಡಿಕೆಶಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

guddali-pooje

ವಿವಿಧ ಕಾಮಗಾರಿಗಳ ಉದ್ಘಾಟನೆ, ಗುದ್ದಲಿ ಪೂಜೆ

kadri

ಕದ್ರಿ ಶೌಚಾಲಯಕ್ಕೆ ಮತ್ತೆ ಬೀಗ!

krishnapura

ಬೀಳುವ ಸ್ಥಿತಿಯಲ್ಲಿ ಕೃಷ್ಣಾಪುರ ಸರಕಾರಿ ಶಾಲೆ

road-repair

ಬೀಬಿ ಅಲಬಿ ರಸ್ತೆ; ‘ಸ್ಮಾರ್ಟ್‌’ಗಾಗಿ ಅಗೆದು ಪ್ರಯಾಣಕ್ಕೆ ಅಧ್ವಾನ!

messy-water

ರಸ್ತೆಯಲ್ಲೇ ಗಲೀಜು ನೀರು; ತ್ವರಿತವಾಗಲಿ ಕಾಮಗಾರಿ

MUST WATCH

udayavani youtube

ಮಳಲಿ ಮಸೀದಿಯಲ್ಲಿ ದೇವರ ಸಾನಿಧ್ಯ ಗೋಚರ

udayavani youtube

‘ನನಗೆ ಏಳೂವರೆ ಶನಿ ಉಂಟು!’

udayavani youtube

SSLC ಸಾಧಕರಿಗೆ ಉದಯವಾಣಿ ಸನ್ಮಾನ

udayavani youtube

ಉಡುಪಿ : ಹಲವು ಸಂಶಯಗಳನ್ನು ಹುಟ್ಟು ಹಾಕಿದ ಯುವಜೋಡಿ ಸಾವು ಪ್ರಕರಣ

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

ಹೊಸ ಸೇರ್ಪಡೆ

bjp

ಅಧಿಕಾರವೊಂದೇ ಬಿಜೆಪಿ ಗುರಿಯಲ್ಲ

18

ಸಾಮಾನ್ಯ ಕಾರ್ಯಕರ್ತೆಗೆ ಮೇಲ್ಮನೆ ಗೌರವ

fire-fighters

ಅತಿವೃಷ್ಟಿಯಲ್ಲಿ ಆಪದ್ಭಾಂಧವನಾದ ಅಗ್ನಿಶಾಮಕ ದಳ!

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

Untitled-1

ಶಿಥಿಲಗೊಂಡ ಸರಕಾರಿ ಶಾಲೆಗಳ ಅಭಿವೃದ್ಧಿಪಡಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.