10 ಕೋ.ರೂ. ವೆಚ್ಚದಲ್ಲಿ ಸರ್ಫಿಂಗ್‌ ಸ್ಕೂಲ್‌

ಪ್ರವಾಸೋದ್ಯಮಣ ಸರಕಾರದ ಅನುಮತಿ ನಿರೀಕ್ಷೆಯಲ್ಲಿ ಟೆಂಡರ್‌ ಪ್ರಕ್ರಿಯೆ

Team Udayavani, Aug 28, 2020, 6:00 AM IST

10 ಕೋ.ರೂ. ವೆಚ್ಚದಲ್ಲಿ ಸರ್ಫಿಂಗ್‌ ಸ್ಕೂಲ್‌

ಮಹಾನಗರ: ಸರ್ಫಿಂಗ್‌ ಕ್ರೀಡೆಗೆ ಹೊಸ ಆಯಾಮವನ್ನು ತಂದು ಕೊಟ್ಟಿರುವ ಸಸಿಹಿತ್ಲಿನಲ್ಲಿ 10 ಕೋ.ರೂ. ವೆಚ್ಚದಲ್ಲಿ ಸರ್ಫಿಂಗ್‌ ಸ್ಕೂಲ್‌ ಹಾಗೂ ಪೂರಕ ಸೌಲಭ್ಯಗಳು ಸ್ಥಾಪನೆಯಾಗಲಿದೆ. ಪ್ರವಾಸೋದ್ಯಮ ಇಲಾಖೆ ರೂಪಿ ಸಿರುವ ಈ ಯೋಜನೆಯ ಕಾಮಗಾರಿ ಯನ್ನು ಲೋಕೋಪಯೋಗಿ ಇಲಾಖೆ ಅನುಷ್ಠಾನಗೊಳಿಸಲಿದ್ದು, ಟೆಂಡರ್‌ ಪ್ರಕ್ರಿಯೆಗೆ ಸರಕಾರದ ಅನುಮತಿಯನ್ನು ನಿರೀಕ್ಷಿಸಲಾಗುತ್ತಿದೆ.

ಕರ್ನಾಟಕ ಟೂರಿಸಂ ವಿಷನ್‌ ಗ್ರೂಫ್‌ (ಕೆಟಿವಿಜಿ) ಶಿಫಾರಸಿನ್ವಯ 2019- 20ನೇ ಸಾಲಿನ ಆಯವ್ಯಯ ಪತ್ರದಲ್ಲಿ ಮುಖ್ಯಮಂತ್ರಿಯವರು 10 ಕೋ.ರೂ. ವೆಚ್ಚದ ಈ ಯೋಜನೆಯನ್ನು ಘೋಷಿ ಸಿದ್ದು, ಕಳೆದ ಫೆಬ್ರವರಿ ತಿಂಗಳಿನಲ್ಲಿ ಆಡಳಿತಾತ್ಮಕ ಮಂಜರಾತಿ ನೀಡಿ ಪ್ರಥಮ ಕಂತಿನಲ್ಲಿ 5 ಕೋ.ರೂ.ಅನುದಾನ ಒದಗಿಸಲಾಗಿತ್ತು.

ಕಾಮಗಾರಿಗೆ ಅನುಮೋದನೆ ಯೋಜನೆಯಂತೆ ಸಸಿಹಿತ್ಲು ಕಡಲ ತೀರದಲ್ಲಿ ಪ್ರವಾಸೋದ್ಯಮ ಇಲಾಖೆಯ ಉಸ್ತುವಾರಿಯಲ್ಲಿ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಮೂಲಕ ಕಾಮಗಾರಿ ಕೈಗೆತ್ತಿ ಕೊಳ್ಳಲು ಮಂಜೂರಾತಿ ನೀಡಲಾಗಿತ್ತು. ಇದರಂತೆ ಲೋಕೋಪಯೋಗಿ ಇಲಾಖೆ ಮಂಗಳೂರು ವಿಭಾಗ 1.45 ಕೋ.ರೂ ವೆಚ್ಚದಲ್ಲಿ ಸರ್ಫಿಂಗ್‌ ಸ್ಕೂಲ್‌, 1,57 ಕೋ.ರೂ. ವೆಚ್ಚದಲ್ಲಿ ಪರಾಗೋಲಾದೊಂದಿಗೆ ವಾಕಿಂಗ್‌ ಟ್ರ್ಯಾಕ್‌, 1 ಕೋ. ರೂ. ವೆಚ್ಚದಲ್ಲಿ ಕಿಯಾಸ್ಕ್ಗಳು, 1.65 ಕೋ.ರೂ. ವೆಚ್ಚದಲ್ಲಿ ರಸ್ತೆ, ಚರಂಡಿ, ಫುಟ್‌ಪಾತ್‌ ಅಭಿವೃದ್ಧಿ ಸಹಿತ ಒಟ್ಟು 10 ಕೋ.ರೂ. ವೆಚ್ಚದ ಯೋಜನೆಯನ್ನು ಸಿದ್ಧಪಡಿಸಿ ಪ್ರವಾಸೋದ್ಯಮ ಇಲಾಖೆಗೆ ಕಳುಹಿಸಿಕೊಟ್ಟಿತ್ತು. ಇದಕ್ಕೆ ಪ್ರವಾಸೋ ದ್ಯಮ ಇಲಾಖೆ ಆಡಳಿತಾತ್ಮಕ ಅನು ಮೋದನೆ ನೀಡಿತ್ತು.

ಸಿಆರ್‌ಝಡ್‌ ಇಲಾಖೆಯಿಂದಲೂ ಆವಶ್ಯಕ ಅನುಮೋದನೆಯ ಬಗ್ಗೆ ಇಲಾಖೆ ಕಾರ್ಯೋನ್ಮುಖವಾಗಿತ್ತು. ಆದರೆ ಮಾರ್ಚ್‌ ತಿಂಗಳಿನಲ್ಲಿ ಕೊರೊನಾ ಸೋಂಕು ಹಾವಳಿ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಸರಕಾರ ಎಲ್ಲ ಯೋಜನೆ ಗಳನ್ನು ತಡೆಹಿಡಿದಿತ್ತು.

ಟೆಂಡರ್‌ ಆರಂಭಗೊಳ್ಳುವ ನಿರೀಕ್ಷೆ
ಇದೀಗ ಕೊರೊನಾ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ನಿರ್ಬಂಧಗಳನ್ನು ಹಂತ ಹಂತವಾಗಿ ಹಿಂದೆಗೆದು ಕೊಳ್ಳಲಾಗುತ್ತಿದ್ದು, ಸರಕಾರ ದಿಂದ ಮಂಜೂರುಗೊಂಡಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅನುಮತಿ ನೀಡಲಾಗುತ್ತಿದೆ. ಇದರಂತೆ ಸಸಿಹಿತ್ಲು ಸರ್ಫಿಂಗ್‌ ಸ್ಕೂಲ್‌ ಯೋಜ ನೆಗೂ ಶೀಘ್ರ ಅನುಮತಿ ಲಭಿಸಿ ಟೆಂಡರ್‌ ಪ್ರಕ್ರಿಯೆ ಆರಂಭಗೊಳ್ಳುವ ನಿರೀಕ್ಷೆ ಇದೆ. ಸುಂದರ ಬೀಚ್‌ಗಳಲ್ಲೊಂದಾಗಿರುವ ಸಸಿಹಿತ್ಲು ಈಗಾಗಲೇ ಉತ್ತಮ ಸರ್ಫಿಂಗ್‌ ತಾಣವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ವಿಶ್ವ ಸರ್ಫ್‌ ಲೀಗ್‌ನ ಸ್ಟೀಪನ್‌ ರಾಬರ್ಟ್‌ಸ್‌ ಅವರು ಸಸಿಹಿತ್ಲು ಬೀಚ್‌ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದರು. ಸಸಿಹಿತ್ಲು ಕಡಲ ತೀರದಲ್ಲಿ 2016ರಲ್ಲಿ ಪ್ರಥಮ ಬಾರಿಗೆ ಜಿಲ್ಲಾಡಳಿತ, ಕೆನರಾ ವಾಟರ್‌ ಸ್ಫೋರ್ಟ್ಸ್ ಪ್ರಮೋಶನ್‌ ಕೌನ್ಸಿಲ್‌ ಹಾಗೂ ಸರ್ಫಿಂಗ್‌ ಫೆಡರೇಶನ್‌ ಆಫ್‌ ಇಂಡಿಯಾದ ಆಶ್ರಯ ದಲ್ಲಿ ರಾಷ್ಟ್ರೀಯ ಸರ್ಫಿಂಗ್‌ ಉತ್ಸವ ನಡೆದು ರಾಷ್ಟ್ರೀಯವಾಗಿ ಮಾತ್ರವಲ್ಲದೆ ಅಂತಾರಾಷ್ಟ್ರೀಯವಾಗಿ ಗಮನಸೆಳೆದಿತ್ತು. 2017ರಲ್ಲಿ ಎರಡು ದಿನಗಳ ಕಾಲ ಆಯೋಜನೆಗೊಂಡಿದ್ದ ರಾಷ್ಟ್ರೀಯ ಸರ್ಫಿಂಗ್‌ ಉತ್ಸವದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧಾ ಳುಗಳು ಸಹಿತ 120ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು.
ರಾಷ್ಟ್ರೀಯ ಸರ್ಫಿಂಗ್‌ ಉತ್ಸವ ಆರಂಭಗೊಂಡಾಗ ಇದು ಮಂಗಳೂರಿ ನಲ್ಲಿ ಸಾಗರ ಪ್ರವಾಸೋದ್ಯಮಕ್ಕೆ ಹೊಸ ಆಯಾಮ ನೀಡುವ ಭರವಸೆ ಮೂಡಿಸಿತ್ತು.

ಪ್ರವಾಸಿತಾಣವಾಗಿ ಅಭಿವೃದ್ಧಿ
ಸಸಿಹಿತ್ಲು ಕಡಲತೀರವನ್ನು ಸರ್ಫಿಂಗ್‌ ಕೇಂದ್ರವಾಗಿ ರೂಪಿಸುವುದು ಸರ್ಫಿಂಗ್‌ ಸ್ಕೂಲ್‌ ಯೋಜನೆಯ ಮೂಲ ಉದ್ದೇಶ. ರಾಷ್ಟ್ರೀಯ ಮಟ್ಟದ ಸರ್ಫಿಂಗ್‌ ತಾಣವಾಗಿ ರೂಪಿಸಿ ಪ್ರವಾಸಿಗರನ್ನು ಆಕರ್ಷಿಸುವುದು, ಸರ್ಫಿಂಗ್‌ ತರಬೇತಿ, ಉತ್ಸವ ಆಯೋಜನೆಗೆ ಪೂರಕ ವ್ಯವಸ್ಥೆ, ಮೂಲಸೌಕರ್ಯಗಳನ್ನು ಕಲ್ಪಿಸಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವುದು ಮುಂತಾದ ಅಂಶಗಳನ್ನು ಒಳಗೊಂಡಿವೆ.

ಮೂಲ ಸೌಲಭ್ಯ ಸ್ಥಾಪನೆ
ಸಸಿಹಿತ್ಲುವಿನಲ್ಲಿ ಸರ್ಫಿಂಗ್‌ ಸ್ಕೂಲ್‌, ಪೂರಕ ಮೂಲ ಸೌಲಭ್ಯಗಳ ಸ್ಥಾಪನೆ ಪ್ರವಾ ಸೋದ್ಯಮ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆ ಯಾಗಿದ್ದು, ಇದಕ್ಕೆ 10 ಕೋ.ರೂ. ಮೀಸಲಿರಿಸಲಾಗಿದೆ. ಯೋಜನೆಯು ಇಲಾಖೆಯ ಉಸ್ತುವಾರಿಯಲ್ಲಿ ಲೋಕೋಪಯೋಗಿ ಇಲಾಖೆಯು ಅನುಷ್ಠಾನಗೊಳಿಸಲಿದ್ದು, ಕಾಮಗಾರಿಗಳ ಕುರಿತಂತೆ ಆವ ಶ್ಯಕ ಪ್ರಕ್ರಿಯೆಗಳನ್ನು ನಡೆಸಲಿದೆ.
 - ಸೋಮಶೇಖರ್‌ ಬಿ., ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು

– ಕೇಶವ ಕುಂದರ್‌

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.