ಕುಡಿಯುವ ನೀರಿಗೆ ತತ್ವಾರ: ತುಂಬೆಯಲ್ಲಿ ನೀರಿನ ಮಟ್ಟ 4.03 ಮೀ.ಗೆ ಇಳಿಕೆ

Team Udayavani, May 8, 2023, 2:34 PM IST

ಕುಡಿಯುವ ನೀರಿಗೆ ತತ್ವಾರ: ತುಂಬೆಯಲ್ಲಿ ನೀರಿನ ಮಟ್ಟ 4.03 ಮೀ.ಗೆ ಇಳಿಕೆ

ಮಹಾನಗರ: ತುಂಬೆಯಲ್ಲಿ ನೀರಿನ ಮಟ್ಟ ಗಣನೀಯ ಇಳಿಕೆ ಕಾಣುತ್ತಿದ್ದು, ಕೆಲ ದಿನಗಳಿಂದ ಮಂಗಳೂರು ನಗರದಲ್ಲಿ ರೇಷನಿಂಗ್‌ ಆರಂಭಗೊಂಡಿದೆ. ಅದರಂತೆ ಮೇ 8ರಂದು ಮಂಗಳೂರು ದಕ್ಷಿಣ (ನಗರ ಭಾಗ) ನೀರು ಸರಬರಾಜು ಇರಲಿದ್ದು, ಮಂಗಳೂರು ಉತ್ತರ (ಸುರತ್ಕಲ್‌ ಭಾಗ)ಕ್ಕೆ ನೀರು ಸರಬರಾಜಿನಲ್ಲಿ ಸ್ಥಗಿತ ಉಂಟಾಗಲಿದೆ.

ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿದೆ. ಮೇ 6ರಂದು 4.09 ಮೀ.ನಷ್ಟಿದ್ದ ನೀರಿನ ಮಟ್ಟವೆ ಮೇ 7ರಂದು 4.03ಮೀ.ಗೆ ಇಳಿಕೆ ಕಂಡಿದೆ. ಮುಂದಿನ ದಿನಗಳಲ್ಲಿ ಮಳೆ ಬಾರದಿದ್ದರೆ, ರೇಷನಿಂಗ್‌ ನಿಯಮದಲ್ಲಿಯೂ ಬದಲಾವಣೆ ಮಾಡಲು ಮನಪಾ ನಿರ್ಧರಿಸಿದೆ. ಪಾಲಿಕೆ ಅಧಿಕಾರಿಗಳು ಹೇಳುವ ಪ್ರಕಾರ ಎರಡು ದಿನಗಳಿಗೊಮ್ಮೆ ಆಯಾ ಕ್ಷೇತ್ರದ ಹೆಚ್ಚಿನ ಭಾಗಗಳಿಗೆ ನೀರು ಬರುತ್ತಿದೆ. ರೇಷನಿಂಗ್‌ಗೂ ಮುನ್ನ ನೀರು ಬರುತ್ತಿಲ್ಲ ಎಂದು ದೂರು ಬರುತ್ತಿತ್ತು. ಆದರೆ ಈಗ ಅಂತಹ ದೂರುಗಳು ಕಡಿಮೆಯಾಗಿದೆ ಎನ್ನುತ್ತಾರೆ.

ನೀರಿದ್ದರೂ ಬಳಕೆಗೆ ಅಸಾಧ್ಯ
ಈ ಹಿಂದೆ ಇದೇ ರೀತಿ ನೀರಿನ ರೇಷನಿಂಗ್‌ ಸಮಯದಲ್ಲಿ ಬಾವಿಯಿಂದ ಟ್ಯಾಂಕರ್‌ ಮೂಲಕ ನೀರು ತುಂಬಿಸಿ ನೀರು ಸರಬರಾಜು ಮಾಡಲಾಗುತ್ತಿತ್ತು. ಆದರೆ ಈ ಬಾರಿ ಆ ಪ್ರಯೋಗ ನಡೆಸಲೂ ಸಾಧ್ಯವಾಗುತ್ತಿಲ್ಲ. ಹೆಚ್ಚಿನ ಬಾವಿಗಳಲ್ಲಿರುವ ನೀರು ಕಲುಷಿತಗೊಂಡಿದೆ. ಒಳಚರಂಡಿ ನೀರು ಸೇರಿಕೊಂಡು ನೀರಿನ ಬಣ್ಣ ಬದಲಾಗಿದ್ದು, ವಾಸನೆ ಬರುತ್ತಿದೆ. ಇದೇ ಕಾರಣಕ್ಕೆ ನೀರಿನ ಮೂಲವೇ ಪಾಲಿಕೆಗೆ ತಲೆನೋವಾಗಿ ಪರಿಣಮಿಸಿದೆ. ಇನ್ನು, ಕೆರೆಯ ನೀರನ್ನು ಕುಡಿಯುವ ಉದ್ದೇಶಕ್ಕೆ ಉಪಯೋಗಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಕೆಲವು ಕೆರೆಗಳಲ್ಲಿ ನೀರಿನ ಮಟ್ಟ ಇಳಿಕೆ ಕಂಡರೂ ಇನ್ನೂ ಕೆಲವು ಕೆರೆಗಳಲ್ಲಿ ನೀರಿದೆ. ಆ ನೀರನ್ನು ಕುಡಿಯುವ ಉದ್ದೇಶಕ್ಕೆ ಉಪಯೋಗ ಮಾಡುವ ನಿಟ್ಟಿನಲ್ಲಿ ಪಾಲಿಕೆ ಆಡಳಿತವೂ ಚಿಂತನೆ ಮಾಡಿಲ್ಲ. ನಗರದ ಬಹುತೇಕ ಕೆರೆಗಳಲ್ಲಿ ಇರುವುದು ಶುದ್ಧ ನೀರಲ್ಲ. ಶುದ್ಧೀಕರಣ ಘಟಕಗಳನ್ನು ಅಳವಡಿಸದೆ ನೀರು ಸರಬರಾಜು ಮಾಡಲು ಸಾಧ್ಯವಿಲ್ಲ. ಇದೇ ಕಾರಣಕ್ಕೆ ನೀರಿರುವ ಕೆರೆಗಳು ಉಪಯೋಗಕ್ಕೆ ಇಲ್ಲದಂತಾಗಿದೆ.

ಮೂಲ್ಕಿ: ನೀರಿನ ಪ್ರಮಾಣ ಕಡಿಮೆ 
ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಿರುವ ಮೂಲ್ಕಿ ನಗರದ ಕುಡಿಯುವ ನೀರಿನ ಸಮಸ್ಯೆ ಮತ್ತೆ ಜನರು ಆತಂಕಕ್ಕೆ ಈಡಾಗಿದ್ದಾರೆ. ಬಾವಿಗಳಲ್ಲಿ ಒರತೆ ಕಡಿಮೆಯಾಗಿ ನೀರಿನ ಪ್ರಮಾಣ ಕಡಿಮೆಯಾಗಿದೆ.ರವಿವಾರವೂ ಖಾಸಗಿಯವರ ನೀರಿನ ಸರಬರಾಜು ವ್ಯವಸ್ಥೆಯಲ್ಲಿ ನೀರಿಲ್ಲದೆ ವ್ಯತ್ಯಯ ಮುಂದುವರಿದಿದೆ. ಹಲವು ಹೊಟೇಲ್‌ ಮತ್ತು ವಸತಿ ಸಮುಚ್ಚಯಗಳಲಗಲಿ ನೀರಿನ ಬವಣೆ ಹೆಚ್ಚಾಗಿದೆ. ಬಹಳಷ್ಟು ಶುಭ ಸಮಾರಂಭಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಾವತಿಯ ಆಧಾರದಿಂದಲೂ ನೀರು ಸಿಗದಿ ರುವುದು ಪರಿಸ್ಥಿತಿಗೆ ಜನ ಕಂಗಾಲಾಗಿದ್ದಾರೆ. ಚುನಾವಣೆ ಕರ್ತವ್ಯವಿರುವ ಕಾರಣ ಅಧಿಕಾರಿಗಳು ನೀರಿನ ಸಮ ಸ್ಯೆಗೆ ಸರಿಯಾಗಿ ಸ್ಪಂದಿಸಲಾಗುತ್ತಿಲ್ಲ.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.