ಹಳೆಯಂಗಡಿ: ಟೆಂಪೋ ಢಿಕ್ಕಿಯಾಗಿ ತಾಯಿ, ಮಗನಿಗೆ ಗಂಭೀರ ಗಾಯ
Team Udayavani, Dec 6, 2020, 2:04 PM IST
ಹಳೆಯಂಗಡಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಕೆನರಾ ಬ್ಯಾಂಕ್ ಬಳಿ ಟೆಂಪೋ ಢಿಕ್ಕಿಯಾಗಿ ಪಾದಾಚರಿಗಳಾದ ತಾಯಿ ಮತ್ತು ಮಗ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರವಿವಾರ ನಡೆದಿದೆ.
ಗಾಯಗೊಂಡವರನ್ನು ಹಳೆಯಂಗಡಿ ನಿವಾಸಿಗಳಾದ ಸುಕಲತಾ ಮತ್ತು ಚಿರಾಗ್ ಎಂದು ಗುರುತಿಸಲಾಗಿದೆ.
ಟೆಂಪೋ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದು, ಹಳೆಯಂಗಡಿ ಸಮೀಪಿಸುತ್ತಿದಂತೆಯೇ ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದು ಬಳಿಕ ಹೆದ್ದಾರಿಯ ಡಿವೈಡರ್ ಮೇಲೇರಿ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ.
ಇದನ್ನೂ ಓದಿ:ಮಂಗಳೂರು: ಕಂಟೈನರ್ ಗೆ ಬೈಕ್ ಢಿಕ್ಕಿ, ಸವಾರ ಸ್ಥಳದಲ್ಲೇ ಸಾವು
ಅಪಘಾತದಿಂದ ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಗಂಭೀರ ಗಾಯಗೊಂಡ ತಾಯಿ ಮತ್ತು ಮಗನನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತಕ್ಕೆ ಟೆಂಪೋ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.