ಚಿನ್ನ ವ್ಯವಹಾರದಲ್ಲಿ  ನಂಬಿಕೆಯೇ ತಾಯಿಬೇರು: ಡಾ| ಸಂಧ್ಯಾ ಪೈ


Team Udayavani, Jan 11, 2019, 3:48 AM IST

deepavali.jpg

ಮಂಗಳೂರು: “ಚಿನ್ನ ವ್ಯವಹಾರದಲ್ಲಿ ನಂಬಿಕೆಯೇ ತಾಯಿಬೇರು. ಆ ನಂಬಿಕೆಯನ್ನು ಕಳೆದ 72 ವರ್ಷಗಳಿಂದ ಉಳಿಸಿಕೊಂಡು ಬಂದಿರುವ ಮಂಗಳೂರಿನ ಲೇಡಿಹಿಲ್‌ನ ಎಸ್‌.ಎಲ್‌. ಶೇಟ್‌ ಡೈಮಂಡ್‌ ಹೌಸ್‌ನ ಕಾರ್ಯಕ್ಷಮತೆ ಅಭಿನಂದನೀಯ’ ಎಂದು ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ ಹೇಳಿದರು.

“ಉದಯವಾಣಿ’ ದೀಪಾವಳಿ ವಿಶೇಷಾಂಕವು ಲೇಡಿಹಿಲ್‌ನ ಎಸ್‌.ಎಲ್‌. ಶೇಟ್‌ ಡೈಮಂಡ್‌ ಹೌಸ್‌  ಸಹಯೋಗದಲ್ಲಿ ನಡೆಸಿದ್ದ “ದೀಪಾವಳಿ ಧಮಾಕಾ’ದಲ್ಲಿ ವಿಜೇತರಾದವರಿಗೆ ಡೈಮಂಡ್‌ ಹೌಸ್‌ ಮಳಿಗೆಯಲ್ಲಿ ಗುರುವಾರ ಆಯೋಜಿಸಿದ್ದ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್‌.ಎಲ್‌. ಶೇಟ್‌ ಡೈಮಂಡ್‌ ಹೌಸ್‌ “ಉದಯವಾಣಿ’ಯೊಂದಿಗೆ ಆರಂಭದಿಂದಲೂ ಉತ್ತಮ ಸಂಬಂಧ ಹೊಂದಿದೆ. ಕಳೆದ 72 ವರ್ಷಗಳಲ್ಲಿ ಸಂಸ್ಥೆ ಬೆಳೆದು ಬಂದ ದಾರಿ ಅದ್ವಿತೀಯ. ಇಂತಹ ಸಂಸ್ಥೆಯೊಂದಿಗೆ ಸೇರಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಖುಷಿಯ ವಿಚಾರ ಎಂದರು.

ಪ್ರೇರಣೆ ಕಾರಣ
ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿ. ಸಿಇಒ ವಿನೋದ್‌ ಕುಮಾರ್‌ ಮಾತನಾಡಿ, ಎಸ್‌.ಎಲ್‌. ಶೇಟ್‌ ಡೈಮಂಡ್‌ ಹೌಸ್‌ ಜತೆ ಸೇರಿ ಇಂತಹ ಕಾರ್ಯಕ್ರಮ ಆಯೋಜಿಸಲು ಸಂಸ್ಥೆಯ ಮಾಲಕರಾದ ರವೀಂದ್ರ ಶೇಟ್‌ ಅವರ ಪ್ರೋತ್ಸಾಹ ಮತ್ತು ಪ್ರೇರಣೆಯೇ ಕಾರಣ. ಉದಯವಾಣಿ ಆರಂಭವಾದಾಗ ಮೊದಲು ಜಾಹೀರಾತು ನೀಡಿ ಸಹಕರಿಸಿದ್ದ ಸಂಸ್ಥೆಗಳ ಪೈಕಿ ಎಸ್‌.ಎಲ್‌. ಶೇಟ್‌ ಡೈಮಂಡ್‌ ಹೌಸ್‌ ಕೂಡ ಒಂದು ಎನ್ನಲು ಹೆಮ್ಮೆಯಾಗುತ್ತಿದೆ ಎಂದರು. ಸುವರ್ಣ ಸಂಭ್ರಮದಲ್ಲಿರುವ ಉದಯವಾಣಿ ಈ ವರ್ಷ ಓದುಗರೊಂದಿಗೆ ಸನಿಹವಾಗಲು ಮುಂದೆಯೂ ಹಲವಾರು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದರು.

ಬಂಪರ್‌ ಬಹುಮಾನ ವಿಜೇತೆ ಹೆಬ್ರಿ ಸಂತೆಕಟ್ಟೆಯ ನಂದಿತಾ ಕಾಮತ್‌ ಮತ್ತು ಪ್ರಥಮ ಬಹುಮಾನ ವಿಜೇತರಾದ ಮಂಗಳೂರು ಮೇರಿಹಿಲ್‌ನ ಕಾವೇರಿ ಜಿ. ಭಟ್‌ ಅನಿಸಿಕೆ ವ್ಯಕ್ತಪಡಿಸಿದರು. ಎಸ್‌.ಎಲ್‌. ಶೇಟ್‌ ಡೈಮಂಡ್‌ ಹೌಸ್‌ನ ಶರತ್‌ ಶೇಟ್‌, ದೀಪಾ ಶರತ್‌ ಶೇಟ್‌, ಪ್ರಸಾದ್‌ ಶೇಟ್‌, ಪ್ರಸನ್ನ ಶೇಟ್‌, ಕಂಚನ್‌ ಶೇಟ್‌ ಮೊದಲಾದವರು ಉಪಸ್ಥಿತರಿದ್ದರು. ಉದಯವಾಣಿ ಮ್ಯಾಗಝಿನ್‌ ವಿಭಾಗದ ರಾಷ್ಟ್ರೀಯ ಮುಖ್ಯಸ್ಥ ಆನಂದ್‌ ಕೆ. ಬಹುಮಾನಿತರ ಪಟ್ಟಿ ವಾಚಿಸಿದರು. ಮ್ಯಾಗಝಿನ್‌ ಎಡಿಟರ್‌ ಪೃಥ್ವಿರಾಜ್‌ ಕವತ್ತಾರು ಸ್ವಾಗತಿಸಿದರು. ಉದಯವಾಣಿ ಮಾರುಕಟ್ಟೆ ವಿಭಾಗ ಮುಖ್ಯಸ್ಥ ರಾಮಚಂದ್ರ ಮಿಜಾರ್‌ ವಂದಿಸಿದರು. ಮಂಗಳೂರು ಸುದ್ದಿ ವಿಭಾಗ ಮುಖ್ಯಸ್ಥ ಮನೋಹರ ಪ್ರಸಾದ್‌ ನಿರೂಪಿಸಿದರು.

ಓದುಗರಿಗೆ ಪ್ರೋತ್ಸಾಹ
ಎಸ್‌.ಎಲ್‌. ಶೇಟ್‌ ಡೈಮಂಡ್‌ ಹೌಸ್‌ ಮಾಲಕ ರವೀಂದ್ರ ಶೇಟ್‌ ಮಾತನಾಡಿ, ಓದುಗರಿಗೆ ಪ್ರೋತ್ಸಾಹ ನೀಡುವಲ್ಲಿ ಉದಯವಾಣಿ ಮುಂಚೂಣಿಯಲ್ಲಿದೆ. ಪತ್ರಿಕೆಯ ದೀಪಾವಳಿ ವಿಶೇಷಾಂಕಕ್ಕೆ ಹಲವರು ಎದುರು ನೋಡುತ್ತಿರುತ್ತಾರೆ. ಇದರಲ್ಲಿ ಬರಹ ಶೈಲಿ, ವಿಚಾರ ಅನಾವರಣ ಮತ್ತು ಸಂಸ್ಕೃತಿಗೆ ಒತ್ತು ನೀಡುತ್ತಾ ಬರುತ್ತಿರುವುದೇ ಈ ತವಕಕ್ಕೆ ಕಾರಣ. ಇಂಥ ಪತ್ರಿಕೆಯೊಂದಿಗೆ ಬಹುಮಾನ ಪ್ರಾಯೋಜಿಸಲು ಅವಕಾಶ ಪಡೆದು ಕೊಂಡಿರುವುದಕ್ಕೆ ಖುಷಿಯಿದೆ. ಅದರಲ್ಲಿಯೂ ಈ ಬಹುಮಾನ ವಿತರಣೆ ಸಮಾರಂಭವನ್ನು ನಮ್ಮ ಈ ಡೈಮಂಡ್‌ ಶೋರೂಂನಲ್ಲಿಯೇ ಆಯೋಜಿಸಿರುವುದು ಸರಸ್ವತಿ (ಉದಯವಾಣಿ) ಮತ್ತು ಲಕ್ಷ್ಮಿಯ (ಎಸ್‌.ಎಲ್‌. ಶೇಟ್‌ ಡೈಮಂಡ್‌ ಹೌಸ್‌) ಸಮಾಗಮದಂತೆ ಎಂದು ಹರ್ಷ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.