ಪಾದಾಚಾರಿಗೆ ಅಪರಿಚಿತ ವಾಹನ ಢಿಕ್ಕಿಯಾಗಿ ಪರಾರಿ: ವೃದ್ದ ಸ್ಥಳದಲ್ಲೇ ಸಾವು
Team Udayavani, Jan 24, 2021, 10:55 AM IST
ಉಳ್ಳಾಲ: ಪಾದಾಚಾರಿ ವೃದ್ಧರೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಇಂದು ನಸುಕಿನ ಜಾವದಲ್ಲಿ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತೊಕ್ಕೊಟ್ಟಿನ ಸಹರಾ ಆಸ್ಪತ್ರೆಯ ಎದುರು ಹೆದ್ದಾರಿ ದಾಟುತ್ತಿದ್ದ ಸುಮಾರು 60 ವರ್ಷದ ವೃದ್ಧರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದ್ದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಬಂಟ್ವಾಳ, ಪಾಣೆಮಂಗಳೂರಿನ ನಿವಾಸಿ ಹಮ್ಮಬ್ಬ (60) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಅಕ್ರಮ ಗಣಿಗಾರಿಕೆ ತಕ್ಷಣ ನಿಲ್ಲಿಸಬೇಕು: ಬಿಎಸ್ ವೈ
ತೊಕ್ಕೊಟ್ಟು ಬಳಿಯ ಕಲ್ಲಾಪಿನಲ್ಲಿ ಸಂಬಂಧಿಕರ ಮನೆಗೆ ಬಂದಿದ್ದರೆನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.