VHP: ಪ್ರಧಾನಿ ಉಪವಾಸದ ಕುರಿತು ವ್ಯಂಗ್ಯ: ವೀರಪ್ಪ ಮೊಯ್ಲಿ ಕ್ಷಮೆಯಾಚಿಸಲು ವಿಎಚ್‌ಪಿ ಆಗ್ರಹ


Team Udayavani, Jan 29, 2024, 1:27 PM IST

VHP: ಪ್ರಧಾನಿ ಉಪವಾಸದ ಕುರಿತು ವ್ಯಂಗ್ಯ: ವೀರಪ್ಪ ಮೊಯ್ಲಿ ಕ್ಷಮೆಯಾಚಿಸಲು ವಿಎಚ್‌ಪಿ ಆಗ್ರಹ

ಮಂಗಳೂರು: ಅಯೋಧ್ಯೆಯ ಶ್ರೀ ರಾಮಮಂದಿರದಲ್ಲಿ ಶ್ರೀ ರಾಮಲಲ್ಲಾನ ಪ್ರತಿಷ್ಠಾಪನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಡೆಸಿರುವ 11 ದಿನಗಳ ಉಪವಾಸದ ಬಗ್ಗೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ನೀಡಿರುವ ಹೇಳಿಕೆಯಿಂದ ರಾಮಭಕ್ತರ ಭಾವನೆಗೆ ನೋವುಂಟಾಗಿದೆ. ಹಾಗಾಗಿ ಅವರು ಹಿಂದೂ ಸಮಾಜದ ಕ್ಷಮೆ ಕೇಳಬೇಕು. ಇಲ್ಲವಾದರೆ ಅವರನ್ನು ಕೂಡಲೇ ಬಂಧಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಪ್ರಾಂತ ಕಾರ್ಯಾಧ್ಯಕ್ಷ ಡಾ ಎಂ.ಬಿ.ಪುರಾಣಿಕ್ ಒತ್ತಾಯಿಸಿದ್ದಾರೆ.

ಮಂಗಳವಾರ ವಿಶ್ವಹಿಂದೂ ಪರಿಷತ್‌ನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರ ವ್ರತಾಚರಣೆಯ ಬಗ್ಗೆ ಮೊಯ್ಲಿಯವರು ಲಘುವಾಗಿ ಮಾತನಾಡಿದ್ದಾರೆ. ‘ಮೋದಿಯವರು ಉಪವಾಸ ಮಾಡದೆ ಗರ್ಭಗುಡಿಗೆ ಹೋಗಿದ್ದಾರೆ. ಇದರಿಂದ ಆ ಸ್ಥಳ ಅಪವಿತ್ರವಾಗುತ್ತದೆ, ಮಂದಿರ ಲೋಕಾರ್ಪಣೆ ಮತ್ತು ಪ್ರತಿಷ್ಠಾಪನೆಗೆ ಮೋದಿಯವರನ್ನು ಗರ್ಭಗುಡಿಗೆ ಬಿಡಬಾರದಿತ್ತು’ ಎಂಬುದಾಗಿ ಮೊಯ್ಲಿಯವರು ಹೇಳಿಕೆ ನೀಡಿದ್ದಾರೆ. ‘ಶ್ರೀ ರಾಮಾಯಣ ದರ್ಶನಂ’ ಮಹಾಕಾವ್ಯ ಬರೆದವರೇ ಈ ರೀತಿ ಹೇಳಿಕೆ ನೀಡಬಾರದಿತ್ತು. ಇದು ಸಮಸ್ತ ಭಾರತೀಯರಿಗೆ ಮಾಡಿದ ಅವಮಾನ. ಮಾತ್ರವಲ್ಲದೆ ಹಿಂದುಳಿದ ವರ್ಗದ ಮೋದಿಯವರ ಜಾತಿಯನ್ನು ನಿಂದಿಸಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ.

ಶಿಷ್ಟಾಚಾರ, ವ್ರತದಲ್ಲಿದ್ದವರು ಗರ್ಭಗುಡಿಗೆ ಹೋಗಿ ಪೂಜೆ ಮಾಡಿದರೆ ಅದು ಅಪವಿತ್ರವಾಗುವುದಿಲ್ಲ. ಬ್ರಾಹ್ಮಣರು ಅಥವಾ ಯಾವುದೋ ಒಂದು ನಿರ್ದಿಷ್ಟ ಜಾತಿಯವರು ಮಾತ್ರ ಪೂಜೆ ಮಾಡಬೇಕು ಎಂಬುದಾಗಿ ಹಿಂದೂ ಸಮಾಜ ಬಯಸುವುದಿಲ್ಲ. ರಾಮ, ಕೃಷ್ಣ ದೇವರು ಕೂಡ ಬ್ರಾಹ್ಮಣರಲ್ಲ. ವ್ಯಾಸ ಮಹರ್ಷಿ ಬೆಸ್ತ, ವಾಲ್ಮೀಕಿ ಓರ್ವ ಬೇಟೆಗಾರನಾಗಿದ್ದವರು. ಜನ ಜಾತಿ ನೋಡುವುದಿಲ್ಲ, ಬದಲಾಗಿ ನೀತಿ ಮಾತ್ರ ನೋಡುತ್ತಾರೆ. ಮೊಯ್ಲಿಯವರು ವೋಟ್‌ಬ್ಯಾಂಕ್ ರಾಜಕೀಯಕ್ಕಾಗಿ ಧರ್ಮವಿರೋಧಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು ವಿಎಚ್‌ಪಿ ಬಲವಾಗಿ ಖಂಡಿಸುತ್ತದೆ. ಅವರು ಕೂಡಲೇ ಬೇಷರತ್ ಆಗಿ ಕ್ಷಮೆ ಕೇಳಬೇಕು ಎಂದು ಹೇಳಿದರು.

ಹನುಮಧ್ವಜ ಅಭಿಯಾನ
ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರು ಮಾತನಾಡಿ, ಮಂಡ್ಯದ ಕೆರಗೋಡ ಗ್ರಾಮದಲ್ಲಿ ಊರಿನ ರಾಮಭಕ್ತರು ಹಾರಿಸಿದ ಹನುಮಧ್ವಜವನ್ನು ಸರಕಾರ ತೆಗೆಸಿರುವುದು ಖಂಡನೀಯ. ಹನುಮಧ್ವಜ ಹಾರಿಸಲು ಅನುಮತಿ ಪಡೆಯಲಾಗಿತ್ತು. ಆದರೆ ಸರಕಾರ ಓಟುಬ್ಯಾಂಕ್ ರಾಜಕೀಯಕ್ಕಾಗಿ ಅದನ್ನು ತೆಗೆಸಿದೆ. ಕೂಡಲೆ ಹನುಮಧ್ವಜ ಹಾರಿಸಲು ಅವಕಾಶ ನೀಡಬೇಕು. ಇಲ್ಲವಾದರೆ ಬೀದಿ ಬೀದಿಗಳಲ್ಲಿ ಹನುಮಧ್ವಜ ಅಭಿಯಾನ ನಡೆಸಲಾಗುವುದು. ರಾಷ್ಟ್ರಧ್ವಜಕ್ಕೆ ನಮ್ಮ ವಿರೋಧವಿಲ್ಲ. ಆದರೆ ಅದನ್ನು ಹಾಕುವುದಕ್ಕೂ ಒಂದು ನೀತಿಸಂಹಿತೆ, ನಿಯಮವಿದೆ. ಸರಕಾರ ರಾಷ್ಟ್ರಧ್ವಜಕ್ಕೂ ಅವಮಾನ ಮಾಡಿದೆ. ಇದಕ್ಕೆ ಕಾರಣರಾದವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವಿಎಚ್‌ಪಿ ಜಿಲ್ಲಾಧ್ಯಕ್ಷ ಎಚ್.ಕೆ.ಪುರುಷೋತ್ತಮ, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಉಪಸ್ಥಿತರಿದ್ದರು.

ಇದನ್ನೂ ಓದಿ: Pune: ಹೋಟೆಲ್‌ನಲ್ಲಿ ಮಹಿಳಾ ಟೆಕ್ಕಿಯ ಹತ್ಯೆ.. ಸಿಸಿಟಿವಿಯಲ್ಲಿ ಸೆರೆಯಾಯ್ತು ಗೆಳೆಯನ ಚಲನವಲನ

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.